ಲೋಕಕಲ್ಯಾಣಕ್ಕಾಗಿ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಅವಿಸ್ಮರಣೀಯ ಸೇವೆ: BSY


Team Udayavani, Aug 29, 2020, 12:00 PM IST

BSYADIYURAPPA

ಬೆಂಗಳೂರು: ಇಂದು  ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.‌ಯಡಿಯೂರಪ್ಪ ಅವರು ಗೃಹ ಕಛೇರಿ ಕೃಷ್ಣಾದಲ್ಲಿ‌ ವರ್ಚುವಲ್ ಮುಖಾಂತರ ಶ್ರೀ ಮತ್ಸುತ್ತೂರು ಜಗದ್ಗುರು ಶ್ರೀ ವೀರಾಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಆಯೋಜಿಸಿರುವ ಶ್ರೀಮನ್ಮಹಾರಾಜ ರಾಜಗುರುತಿಲಕ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 105 ನೆಯ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತಾನಾಡಿದರು.

ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 105ನೆಯ ಜಯಂತಿ ಉತ್ಸವದಲ್ಲಿ ಅತ್ಯಂತ ಸಂತೋಷದಿಂದ ಭಾಗವಹಿಸಿದ್ದೇನೆ. ಮಹಾನ್ ಸಂತರು, ಮಹರ್ಷಿಗಳು, ತತ್ವಜ್ಞಾನಿಗಳು, ಶರಣರು ದಾಸವೇರಣ್ಯರು ತಮ್ಮ ಬದುಕನ್ನು ಮಾನವನ ಉದ್ಧಾರಕ್ಕಾಗಿ ಮುಡಿಪಾಗಿಸಿ ಮಹಾಬೆಳಕಾದರು.

ಇಂತಹ ಮಹಾನ್ ಸಂತರಲ್ಲಿ ಒಬ್ಬರಾದ ನಮ್ಮ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ    ರಾಜೇಂದ್ರ ಮಹಾಸ್ವಾಮಿಗಳವರು ಲೋಕಕಲ್ಯಾಣಕ್ಕಾಗಿ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ. ಕೋವಿಡ್ ಹಾವಳಿಯಿಂದ ಈ ಬಾರಿ ರಾಜೇಂದ್ರ ಶ್ರೀಗಳ ಜಯಂತಿ ಮಹೋತ್ಸವದಲ್ಲಿ  ಆನ್‍ಲೈನ್ ಮೂಲಕ ಪಾಲ್ಗೊಂಡು ಪರಮಪೂಜ್ಯರ ಕೃಪಾಶೀರ್ವಾದಕ್ಕೆ ಪಾತ್ರರಾಗಲು ಇದೊಂದು ಒಳ್ಳೆಯ ವೇದಿಕೆಯಾಗಿದೆ

ಅನ್ನ, ಅರಿವು, ಆರೋಗ್ಯ, ಸಮಾಜ ಸುಧಾರಣೆ, ಧರ್ಮಜಾಗೃತಿ, ಆಧ್ಯಾತ್ಮ ಕ್ಷೇತ್ರದಲ್ಲಿ   ಜಗದ್ಗುರುಗಳು  ಭದ್ರ ಬುನಾದಿ ಹಾಕಿದ್ದಾರೆ. ಜೆ.ಎಸ್.ಎಸ್ ಮಹಾವಿದ್ಯಾಪೀಠವನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ  ವಸತಿ ಸಹಿತ ಶಿಕ್ಷಣ ನೀಡುವ ಮಹತ್ಕಾರ್ಯವನ್ನು ಮಠದ ವತಿಯಿಂದ ಮಾಡಲಾಗುತ್ತಿದೆ.

ಈ ಸುಸಂದರ್ಭದಲ್ಲಿ ಶ್ರೀಗಳ ಜೀವನ ಮೌಲ್ಯಗಳು ಹಾಗೂ ಶ್ರೀಮಠದ ಸಾಧನೆಗಳನ್ನು ಬಿಂಬಿಸುವ ಕೃತಿಗಳು ಹಾಗೂ ಆನಿಮೇಷನ್ ಚಿತ್ರಗಳನ್ನು ಬಿಡುಗಡೆಗೊಳಿಸುತ್ತಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ.ಶ್ರೀಗಳು ಶಾಂತಿ ಹಾಗೂ ಧಾರ್ಮಿಕ ಸಾಮರಸ್ಯದ ರೂವಾರಿಗಳಾಗಿದ್ದು, ಈ ಭಾಗದ ಜನರು ಸೌಹಾರ್ದಯುತವಾಗಿ ಬದುಕಲು ಸ್ಪೂರ್ತಿಯಾಗಿದ್ದಾರೆ.

ಮಠದ ಅನ್ನ ದಾಸೋಹ, ಜ್ಞಾನ ದಾಸೋಹದಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ರೀಗಳ ಮಾರ್ಗದರ್ಶನದಲ್ಲಿ ನಿರಂತರವಾಗಿ ನಡೆದುಕೊಂಡು ಬಂದಿರುವುದು ಶ್ಲಾಘನೀಯ.ಶತಮಾನಗಳಿಂದ ದೀನ ದಲಿತರು ಎಂಬ ಬೇಧಭಾವವಿಲ್ಲದೆ ದಾಸೋಹ ನಡೆಸಿ ಸಮ-ಸಮಾಜದ ನಿರ್ಮಾಣಕ್ಕೆ ಶ್ರೀ ಮಠ ಶ್ರಮಿಸಿದೆ.

ಪರಮಪೂಜ್ಯ ರಾಜೇಂದ್ರ ಶ್ರೀಗಳವರ ಜಯಂತಿ ಮಹೋತ್ಸವದ ಈ ಸಂದರ್ಭದಲ್ಲಿ ವೈವಿಧ್ಯಮಯ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ರೀಮಠದ ಜನಪರ ಕಾಳಜಿಯ ಪ್ರತೀಕವಾಗಿದೆ.ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಇನ್ನೂ ಹೆಚ್ಚು ಹೆಚ್ಚಾಗಿ ನಡೆಯಬೇಕು ಎನ್ನುವುದು   ನನ್ನ ಆಶಯ.ಶ್ರೀಮಠದ ಸಮಾಜ ಕಟ್ಟುವ ಕಾರ್ಯ ನಿರಂತರವಾಗಿ ಮುಂದುವರಿಯಲಿ ಎಂದು ಆಶಿಸಿದರು.

ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 105 ನೆಯ ಜಯಂತಿ ಮಹೋತ್ಸವದ ಡಿಜಿಟಲ್ ಸಮಾರಂಭದ ಅಧ್ಯಕ್ಷತೆ ವಹಿಸಿರುವ ಮಾಜಿ ಪ್ರಧಾನಮಂತ್ರಿ ದೇವೇಗೌಡರು ಇಂದು ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ  ಈ ಡಿಜಿಟಲ್ ಸಮಾರಂಭದಲ್ಲಿ ಭಾಗವಹಿಸಿದರು.

ಟಾಪ್ ನ್ಯೂಸ್

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.