ರಾಜ್ಯಕ್ಕೆ ಇಂದು ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ಮುರ್ಮು
ಬಿಜೆಪಿ ಶಾಸಕರು-ಸಂಸದರ ಸಭೆಯಲ್ಲಿ ಭಾಗಿ
Team Udayavani, Jul 10, 2022, 6:30 AM IST
ಬೆಂಗಳೂರು: ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಭಾನುವಾರ ರಾಜ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಶಾಸಕರು-ಸಂಸದರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ದ್ರೌಪದಿ ಮುರ್ಮು ಅವರಿಗೆ ಬಿಜೆಪಿ ಕರ್ನಾಟಕ ವತಿಯಿಂದ ಆತ್ಮೀಯ ಸ್ವಾಗತ ಕೋರಲು ಸಿದ್ಧತೆ ನಡೆಸಲಾಗಿದೆ. ದ್ರೌಪದಿ ಮುರ್ಮು ಅವರು ಆದಿವಾಸಿ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಕೋಲಾಟ ಸೇರಿದಂತೆ 20 ಆದಿವಾಸಿ ಕಲಾತಂಡಗಳಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನಿರ್ಧರಿಸಲಾಗಿದೆ.
ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಮಾರ್ಗದರ್ಶನದಲ್ಲಿ ಮುರ್ಮು ಸ್ವಾಗತಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಹಿಳಾ ಮೋರ್ಚಾ ವತಿಯಿಂದ 2,500 ಮಹಿಳೆಯರು ಶಾಂಗ್ರಿ ಲಾ ಹೋಟೆಲ್ ಬಳಿ ಸೇರಿ ಅವರನ್ನು ಸ್ವಾಗತಿಸಲು ತೀರ್ಮಾನಿಸಲಾಗಿದೆ.
ಮುರ್ಮು ಆಗಮನ ಹಿನ್ನೆಲೆಯಲ್ಲಿ ಬಿಜೆಪಿಯ ಶಾಸಕರು-ಸಂಸದರ ಸಭೆ ನಿಗದಿಯಾಗಿದ್ದು ಮುರ್ಮು ಅವರು ಆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ