ಮನೆಗೇ ಬೆಂಕಿ ಇಟ್ಟು ಸತ್ತ ಕುಡುಕ;ಪತ್ನಿ ಮಕ್ಕಳಿಬ್ಬರು ಪಾರು
Team Udayavani, Sep 7, 2017, 9:35 AM IST
ಬಾಗಲಕೋಟೆ: ಬಾದಾಮಿ ತಾಲೂಕಿನ ನೆವಲಗಿ ಎಂಬಲ್ಲಿ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಪತ್ನಿ ಮತ್ತು ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಸುಕಿನ ವೇಳೆ ನಡೆದಿದೆ. ಅದೃಷ್ಟವಷಾತ್ ಪತ್ನಿ ಮತ್ತು ಮಕ್ಕಳಿಬ್ಬರು ಪಾರಾಗಿದ್ದಾರೆ.
ಮದ್ಯಪಾನ ಮಾಡಿದ್ದ ಬಸ್ಸಪ್ಪ ಮುಕಾಶಿ(42) ಎಂಬಾತ ಪತ್ನಿ ನಿರ್ಮಲಾ(35) ಮಕ್ಕಳಾದ ಸವಿತಾ(12)ಮತ್ತು ರಾಹುಲ್(9) ಮಲಗಿದ್ದ ವೇಳೆ ಬೆಂಕಿ ಹಚ್ಚಿ ಬಳಿಕ ತಾನೂ ಬೆಂಕಿ ಹಚ್ಚಿಕೊಂಡು ಸುಟ್ಟು ಕರಕಲಾಗಿದ್ದಾನೆ.
ಬೆಂಕಿ ಹಚ್ಚಿದ ಕೂಡಲೇ ಬೊಬ್ಬೆ ಕೇಳಿಸಿಕೊಂಡು ನೆರೆ ಹೊರೆಯವರು ದೌಡಾಯಿಸಿ ನಿರ್ಮಲಾ ಮತ್ತು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರಿಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬಾದಾಮಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ