ರೀಲ್‌ ಅಲ್ಲ ರಿಯಲ್‌ :ರಾತ್ರೋ ರಾತ್ರಿ ನಟ ದುನಿಯಾ ವಿಜಿ ಅರೆಸ್ಟ್‌!

Team Udayavani, Sep 23, 2018, 8:17 AM IST

ಬೆಂಗಳೂರು: ನಗರದ ಅಂಬೇಡ್ಕರ್‌ ಭವನದಲ್ಲಿ  ಶನಿವಾರ ರಾತ್ರಿ ನಡೆದ ಜಗಳವೊಂದು ಘರ್ಷಣೆಗೆ ತಿರುಗಿ ಖ್ಯಾತ ನಟ ದುನಿಯಾ ವಿಜಯ್‌ ಮತ್ತು ಬೆಂಬಲಿಗರ ಬಂಧನಕ್ಕೆ ಕಾರಣವಾಗಿದೆ. 

ಜಿಮ್‌ ಟ್ರೈನರ್‌ ಆಗಿರುವ ಪಾನಿಪುರಿ ಕಿಟ್ಟಿ ಅವರ ತಮ್ಮನ ಮಗ ಮಾರುತಿ ಗೌಡ ಎನ್ನುವ ಯುವಕನನ್ನು ದುನಿಯಾ ವಿಜಿ ಮತ್ತು ಮೂವರು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿದೆ.

ಅಂಬೇಡ್ಕರ್‌ ಭವನದಲ್ಲಿ ಬಾಡಿ ಬಿಲ್ಡಿಂಗ್‌ ಸ್ಪರ್ಧೆ ನಡೆಯುತ್ತಿದ್ದ ವೇಳೆ ಜಗಳ ಆರಂಭವಾಗಿದ್ದು ಆ ಬಳಿಕ ಮಾರುತಿಗೆ ದುನಿಯಾ ವಿಜಿ ಅವಾಚ್ಯ ಶಬ್ಧಗಳಿಂದ ಬೈದು ಕಾರಿನಲ್ಲಿ ಅಪಹರಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ. 

ತಕ್ಷಣ ಪೊಲೀಸರಿಗೆ ದೂರು ನೀಡಲಾಗಿದ್ದು , ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ದುನಿಯಾ ವಿಜಯ್‌ ಸೇರಿ ಮೂವರನ್ನು ಬಂಧಿಸಿದ್ದಾರೆ. 

ಎಸಿಪಿ ರವಿಶಂಕರ್‌ ಅವರು ದುನಿಯಾ ವಿಜಯ್‌ ಅವರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. 

ಪ್ರಸಾದ್‌ ಎನ್ನುವ ವ್ಯಕ್ತಿ ಜಗಳಕ್ಕೆ ಕಾರಣ ಎಂದು ಪಾನಿಪುರಿ ಕಿಟ್ಟಿ ಹೇಳಿಕೆ ನೀಡಿದ್ದಾರೆ. 

ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನಲೆಯಲ್ಲಿ  ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಲಾಗಿತ್ತು. 

ಗಂಭೀರವಾಗಿ ಹಲ್ಲೆಗೊಳಗಾದ ಮಾರುತಿ ಗೌಡ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ತುಟಿಗಳು ಒಡೆದಿದ್ದು, ಕಣ್ಣಿಗೂ ಗಂಭೀರ ಸ್ವರೂಪದ ಗಾಯಗಳಾಗಿವೆ. ಆಸ್ಪತ್ರೆಗೆ ಸಿಸಿಬಿ ಪೊಲೀಸರು ಆಗಮಿಸಿ ಹೇಳಿಕೆ ಪಡೆದುಕೊಂಡಿದ್ದಾರೆ. 

ದುನಿಯಾ ವಿಜಯ್‌ ಅವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಹಲ್ಲೆ ನಡೆಸಿದ್ದು ನಾನೇ ಎಂದು ವಿಜಯ್‌ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.  ಸಂಜೆ ವಿಜಯ್‌ ಮತ್ತು ಇತರ ಆರೋಪಿಗಳನ್ನು ಜಡ್ಜ್ ನಿವಾಸದಲ್ಲಿ ಜಾಮೀನಿಗಾಗಿ ಹಾಜರು ಪಡಿಸುವ ಸಾಧ್ಯತೆಗಳಿವೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ