ಅಸಂಘಟಿತ ಕಾರ್ಮಿಕರಿಗೆ ಆರ್ಥಿಕ ಭದ್ರತೆ : ಡೀಸಿ ಡಾ.ವೆಂಕಟೇಶ್‌

Team Udayavani, Nov 5, 2020, 2:42 PM IST

ಅಸಂಘಟಿತ ಕಾರ್ಮಿಕರಿಗೆ ಆರ್ಥಿಕ ಭದತೆ : ಡೀಸಿ ಡಾ.ವೆಂಕಟೇಶ್‌

ಮಂಡ್ಯ: ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌-ಧನ್‌ ಯೋಜನೆಯ ಮೂಲಕ ಕೂಲಿ ಕಾರ್ಮಿಕರಿಗೆ, ಬೀದಿ ವ್ಯಾಪಾರಿಗಳಿಗೆ,
ಅಸಂಘಟಿತ ಕಾರ್ಮಿಕರಿಗೆಲ್ಲರಿಗೂ ಆರ್ಥಿಕ ಭದ್ರತೆ ಕಲ್ಪಿಸಿಕೊಡುವ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಹೇಳಿದರು.

ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ನಡೆದ
ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌-ಧನ್‌ ಯೋಜನೆ, ಕಾನೂನು ಅರಿವು ಮತ್ತು ನೋಂದಣಿ ಅಭಿಯಾನದ ರಥಕ್ಕೆ ಚಾಲನೆ
ನೀಡಿ ಮಾತನಾಡಿದ ಅವರು, ಈ ಯೋಜನೆಯಲ್ಲಿ 18 ವರ್ಷದಿಂದ 40 ವರ್ಷದವರೆಗೆ ಇರುವ ಅಸಂಘಟಿತ ಕಾರ್ಮಿಕರು ಪ್ರತಿ ತಿಂಗಳು 55 ರೂ.ನಿಂದ 200 ರೂ.ವರೆಗೆ ಬ್ಯಾಂಕಿನಲ್ಲಿ ಹಣವನ್ನು ಜಮಾವಣೆ ಮಾಡಿದರೆ, 60 ವರ್ಷದ ನಂತರ
ಜೀವಿತಾವಧಿವರೆಗೂ 3000 ರೂ. ಪಿಂಚಣಿ ಪ್ರತಿ ತಿಂಗಳು ಪಡೆಯಬಹುದು ಎಂದರು.

ಉತ್ತಮ ಕಾರ್ಯಕ್ರಮ: ಪ್ರಧಾನಮಂತ್ರಿ ಮಾನ್‌-ಧನ್‌ ಯೋಜನೆ ಸಾಮಾಜಿಕ ಭದ್ರತೆಯನ್ನು ಒದಗಿಸಿಕೊಡಲು ಬಹಳ
ಉತ್ತಮವಾದ ಕಾರ್ಯಕ್ರಮವಾಗಿದೆ. ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ ಇದು ವರದಾನವಾಗಿದೆ. ಆಕಸ್ಮಿಕವಾಗಿ ಮರಣಕ್ಕೆ ತುತ್ತಾದರೆ ಅವರ ಅವಲಂಬಿತರಿಗೆ(ಹೆಂಡತಿ, ಗಂಡ, ಮಕ್ಕಳು) ಜೀವಿತಾವಧಿವರೆಗೂ ಪ್ರತಿ ತಿಂಗಳು 3000 ರೂ. ಪಿಂಚಣಿ ಬರುತ್ತದೆ. ಈ ಯೋಜನೆಯನ್ನು ಎಲ್ಲರೂ ಕೂಡ ಉಪಯೋಗಿ ಸಿ ಕೊಳ್ಳಬೇಕು. ಹೆಚ್ಚಿನ ಜಾಗೃತಿಯನ್ನು ಪಡೆದರೆ ಹೇಗೆ ಸರ್ಕಾರಿ ನೌಕರರು, ಖಾಸಗಿ ಸಂಸ್ಥೆಯಲ್ಲಿ ನೌಕರಿ ಮಾಡುತ್ತಿರುವವರಿಗೆ ಸೇವಾ ಭದ್ರತೆ, ಪಿಂಚಣಿ ಸೌಲಭ್ಯ ಸಿಗುವುದೋ
ಆ ನಿಟ್ಟಿನಲ್ಲಿ ಈ ಯೋಜನೆಯ ಸೌಲಭ್ಯವನ್ನು ಅಸಂಘಟಿತ ಕೂಲಿ ಕಾರ್ಮಿಕರೆಲ್ಲರೂ ಪಡೆಯಬಹುದು ಎಂದು ತಿಳಿಸಿದರು.

ಇದನ್ನೂ ಓದಿ:ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು: ಕುಮಾರಸ್ವಾಮಿ ಒತ್ತಾಯ

ಪ್ರತಿ ತಿಂಗಳು ಪಿಂಚಣಿ ಸೌಲಭ್ಯ: ಜಿಪಂ ಸಿಇಒ ಎಸ್‌.ಎಂ.ಜುಲ್‌ ಫಿಖಾರ್‌ ಉಲ್ಲಾ ಮಾತ ನಾಡಿ, ಸರ್ಕಾರಿ ನೌಕರರು
ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಉತ್ತಮವಾದ ಸಂಬಳವನ್ನು ಪಡೆಯುತ್ತಾರೆ. ನಿವೃತ್ತಿಯ ನಂತರ ಸರ್ಕಾರದ ಸೌಲಭ್ಯಗಳನ್ನು ಪಡೆದು ರಕ್ಷಣಾತ್ಮಕ ಜೀವನವನ್ನು ಸಾಗಿಸುತ್ತಿರುತ್ತಾರೆ. ಆ ಹಿನ್ನಲೆಯಲ್ಲಿ ಅಸಂಘಟಿತ ಕೂಲಿ ಕಾರ್ಮಿಕರ ಹಿತಶಕ್ತಿಗಾಗಿ, ಭದ್ರತೆಗಾಗಿ ಸರ್ಕಾರ ಈ ಕಾರ್ಯಕ್ರಮ ಮಾಡಿದ್ದು, ಯೋಜನೆ ಉತ್ತಮವಾಗಿದೆ.

ಅಸಂಘಟಿತ ಕಾರ್ಮಿಕರು 60 ವರ್ಷದ ನಂತರ ವಯೋ ಸಹಜವಾಗಿ ಕೆಲಸ ಮಾಡಲು ಸಾಧ್ಯವಿಲ್ಲದಿದ್ದಾಗ ಈ ಯೋಜನೆಯಿಂದ ಪ್ರತಿ ತಿಂಗಳು ಪಿಂಚಣಿ ಸೌಲಭ್ಯ ಪಡೆದು ರಕ್ಷಣಾತ್ಮಕ ಜೀವನವನ್ನು ಸಾಗಿಸಬಹುದು ಎಂದು ಹೇಳಿದರು.

ಉಪವಿಭಾಗ ಕಾರ್ಮಿಕ ಅಧಿಕಾರಿ ಎಚ್‌. ಆರ್‌.ನಾಗೇಂದ್ರ, ಎಸ್‌.ಎಂ.ಮಂಜುಳಾ ದೇವಿ, ಕಾರ್ಮಿಕ ನಿರೀಕ್ಷಕರಾದ ಎಂ.ಸ್ವಾಮಿ,
ಬಿ.ಎನ್‌.ನಾಗರತ್ನ ಸೇರಿದಂತೆ ಅನೇಕರು ಹಾಜರಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.