ಡಿಕೆಶಿ ಪುತ್ರಿ ಐಶ್ವರ್ಯಾಗೆ ಸಮನ್ಸ್‌ ನೀಡಿದ ಇ.ಡಿ.

Team Udayavani, Sep 11, 2019, 5:55 AM IST

ಬೆಂಗಳೂರು: ಜಾರಿ ನಿರ್ದೇಶನಾಲಯ ವಶದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ಮತ್ತೂಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವ್ಯವಹಾರ ಆರೋಪದ ಮೇಲೆ ಶಿವಕುಮಾರ್‌ ಅವರ ಪುತ್ರಿ ಐಶ್ವರ್ಯಾಗೆ ಇಡಿ ಸಮನ್ಸ್‌ ಜಾರಿ ಮಾಡಿ, ಸೆ.12ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್‌ ಅವರ ಮನೆಗೆ ಮಂಗಳವಾರ ಅಪರಾಹ್ನ ಆಗಮಿಸಿದ ಇಡಿ ಅಧಿಕಾರಿಗಳು ಮನೆ ಬಾಗಿಲಿಗೆ ಸಮನ್ಸ್‌ ಪ್ರತಿ ಅಂಟಿಸಿ ಹಿಂದಿರುಗಿದ್ದರು. ಅದರಲ್ಲಿ ಸೆ.12ರಂದು ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಾಗೆ ಸೂಚನೆ ನೀಡಲಾಗಿದೆ.

ಸೆ.13ರಂದು ಶಿವಕುಮಾರ್‌ ಅವರ ಇಡಿ ಕಸ್ಟಡಿ ಅಂತ್ಯವಾಗಲಿದೆ. ಅದಕ್ಕೂ ಒಂದು ದಿನ ಮೊದಲೇ ಪುತ್ರಿ ಐಶ್ವರ್ಯಾ ಅವರನ್ನು ವಿಚಾರಣೆಗೆ ಬರಲು ಸೂಚಿಸಲಾಗಿದೆ. ಈ ಬೆಳವಣಿಗೆ ಕುಟುಂಬ ಸದಸ್ಯರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.

ಶಿವಕುಮಾರ್‌ ಅವರ ಆರ್ಥಿಕ ವ್ಯವಹಾರಗಳ ಪರಿಶೀಲನೆ ವೇಳೆ ಮಹತ್ವದ ದಾಖಲೆಗಳು ಪತ್ತೆಯಾಗಿದ್ದವು. ಆ ಪೈಕಿ ಕೆಲವು ವ್ಯವಹಾರಗಳು ಪುತ್ರಿ ಐಶ್ವರ್ಯಾ ಹೆಸರಿನಲ್ಲಿರುವ ಟ್ರಸ್ಟ್‌ವೊಂದರ ಮೂಲಕ ನಡೆಯುತ್ತಿರುವುದು ಸಮನ್ಸ್‌ಗೆ ಕಾರಣವಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ