ವಿದ್ಯುತ್‌ ತಂತಿ ತುಳಿದು ನಾಲ್ವರ ದುರ್ಮರಣ


Team Udayavani, Apr 5, 2019, 6:06 AM IST

Ban05041911Medn

ರಾಮದುರ್ಗ: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಎತ್ತಿನ ಚಕ್ಕಡಿಯಲ್ಲಿ ಹೊಲಕ್ಕೆ ಹೊರಟ ಒಂದೇ ಕುಟುಂಬದ ನಾಲ್ವರು ಸೇರಿ ಎರಡು ಎತ್ತುಗಳು ಸಾವಿಗೀಡಾದ ದುರ್ಘ‌ಟನೆ ಬುಧವಾರ ನಸುಕಿನಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕೆ.ತಿಮ್ಮಾಪೂರ ಗ್ರಾಮದಲ್ಲಿ ನಡೆದಿದೆ.

ರೈತ ರೇವಪ್ಪ ಕಲ್ಲೋಳ್ಳಿ (35), ಪತ್ನಿ ರತ್ನವ್ವ ರೇವಪ್ಪ ಕಲ್ಲೋಳ್ಳಿ(30), ಮಗ ಸಚಿನ ರೇವಪ್ಪ ಕಲ್ಲೋಳ್ಳಿ (8) ಹಾಗೂ ರೇವಪ್ಪನ ಸಹೋದರನ ಮಗ ಕೃಷ್ಣಾ ಶಿವಪ್ಪ ಕಲ್ಲೋಳ್ಳಿ (10) ಮೃತರು. ಚಕ್ಕಡಿಯಲ್ಲಿದ್ದ ಇಬ್ಬರು ಬಾಲಕಿಯರು ಹೊರ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ರೇವಪ್ಪನ ಪುತ್ರಿ ಲಕ್ಷ್ಮೀ ರೇವಪ್ಪ ಕಲ್ಲೋಳ್ಳಿ, ಅಣ್ಣನ ಪುತ್ರಿ ಪ್ರಿಯಾಂಕ ಶಿವಪ್ಪ ಕಲ್ಲೋಳ್ಳಿ ಬದುಕುಳಿದವರು. ಈ ಎಲ್ಲರೂ ಗ್ರಾಮದಲ್ಲಿ ಜಾತ್ರೆ ಇರುವುದರಿಂದ ಬಟ್ಟೆ ತೊಳೆಯಲೆಂದು ಗುರುವಾರ ನಸುಕಿನಲ್ಲಿ ಚಕ್ಕಡಿಯಲ್ಲಿ ಹೊಲಕ್ಕೆ ಹೊರಟಿದ್ದರು. ಸಂತೋಷ ಮುದಕಪ್ಪ ಮಸ್ಕಿ ಎಂಬುವರ ಹೊಲದಲ್ಲಿ ಹಾಯ್ದು ಹೋದ ವಿದ್ಯುತ್‌ ತಂತಿ ಎರಡು ದಿನದ ಹಿಂದೆ ತುಂಡಾಗಿ ಬಿದ್ದಿತ್ತು. ಈ ಬಗ್ಗೆ ಸಾರ್ವಜನಿಕರು ಹೆಸ್ಕಾಂಗೆ ದೂರು ನೀಡಿದ್ದರು ಎಂದು ಹೇಳಲಾಗಿದೆ.

ಆದರೆ ರೇವಪ್ಪ ಹೊಲದಲ್ಲಿ ಬಿದ್ದ ತಂತಿಯನ್ನು ಗಮನಿಸದೇ ಚಕ್ಕಡಿ ಮುಂದೆ ಹೊಡೆದಾಗ ತಂತಿ ಎತ್ತಿನ ಕಾಲಿಗೆ ತಾಗಿ ಅವಘಡ ಸಂಭವಿಸಿದೆ. ಅಪಾಯ ಅರಿತ ಇಬ್ಬರು ಬಾಲಕಿಯರು ಕೂಡಲೇ ಹಿಂದಿನಿಂದ ಜಿಗಿದು ಪಾರಾಗಿದ್ದಾರೆ. ಉಳಿದ ನಾಲ್ವರಿಗೆ ವಿದ್ಯುದಾಘಾತವಾಗಿ ನರಳಾಡುತ್ತಿದ್ದಾಗ ಇಬ್ಬರೂ ಓಡಿ ಮನೆಯವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಮನೆಯವರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಎಲ್ಲರೂ ಸಾವಿಗೀಡಾಗಿದ್ದರು.

ಸಿಬ್ಬಂದಿ ಅಮಾನತಿಗೆ ಶಿಫಾರಸು:ಘಟನೆಗೆ ಸಂಬಂ ಧಿಸಿದಂತೆ ಸಾಲಹಳ್ಳಿ ಪ್ರಭಾರಿ ಶಾಖಾಧಿ ಕಾರಿ ಈರಣ್ಣ ಆರ್‌. ನಾಯ್ಕರ ಹಾಗೂ ಪವರ್‌ಮನ್‌ ಬಸವರಾಜ ಕಟಕೋಳ ಎಂಬುವರ ಅಮಾನತಿಗೆ ಮೇಲಧಿ ಕಾರಿಗೆ ವರದಿ ನೀಡಲಾಗಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.