Power shortage; ವಿದ್ಯುತ್ ಬೇಡಿಕೆ ಹೆಚ್ಚಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ವಿದ್ಯುತ್ ಖರೀದಿ ಕುರಿತಂತೆ ಮುಖ್ಯ ಮಂತ್ರಿಗಳ ಅಧ್ಯಕ್ಷ ತೆಯಲ್ಲಿ ಇಂದು ಸಭೆ
Team Udayavani, Oct 13, 2023, 1:17 PM IST
ಬೆಂಗಳೂರು: ಮಳೆ ಕಡಿಮೆಯಾಗುವುದರಿಂದ ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 900 ಮೆ.ವ್ಯಾಟ್ ಬಳಸಲಾಗುತ್ತಿತ್ತು. ಈ ಬಾರಿ 1500 ರಿಂದ 1600 ಮೆ.ವ್ಯಾಟ್ ಬೇಡಿಕೆ ಇರುವುದರಿಂದ ತೊಂದರೆಯಾಗಿದೆ.ವಿದ್ಯುತನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು ಚರ್ಚಿಸಲು ಇಂದು ಮಧ್ಯಾಹ್ನ ಸಭೆ ಕರೆಯಲಾಗಿದೆ ಎಂದರು.
ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ನಿನ್ನೆ ಅದೇಶವನ್ನೂ ಮಾಡಲಾಗಿದೆ ಎಂದು ತಿಳಿಸಿದರು.
ಬಿಜೆಪಿಗೆ ವಸ್ತುಸ್ಥಿತಿ ತಿಳಿದಿಲ್ಲ: ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ? ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ. ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್ ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್