ರೈಲ್ವೆ ಕಂಬಿಗೆ ಸಿಲುಕಿ ಕಾಡಾನೆ ಸಾವು

Team Udayavani, Dec 16, 2018, 10:00 AM IST

eleoh.jpg

ಹುಣಸೂರು: ನಾಗರಹೊಳೆ ಉದ್ಯಾನದಿಂದ ಹೊರ ಬಂದಿದ್ದ ಕಾಡಾನೆಗಳ ಗುಂಪಿನಲ್ಲಿದ್ದ ಸಲಗವೊಂದು ಗುಂಪಿನಿಂದ ಬೇರ್ಪಟ್ಟು, ಮರಳಿ ಉದ್ಯಾನಕ್ಕೆ ತೆರಳಲು ರೈಲ್ವೆ ಕಂಬಿಯ ತಡೆಗೋಡೆ ದಾಟಲು ಹೋಗಿ ಸಿಕ್ಕಿ ಬಿದ್ದಿದ್ದು, ಕೊನೆಗೆ ಕಂಬಿಯ ಮೇಲೆಯೇ ಪ್ರಾಣ ತ್ಯಜಿಸಿದ ಘಟನೆ ವೀರನಹೊಸಹಳ್ಳಿಯ ಅರಣ್ಯ ಸಿಬ್ಬಂದಿಗಳ ವಸತಿಗೃಹದ ಬಳಿ ಸಂಭವಿಸಿದೆ.

ಸುಮಾರು 41-42 ವರ್ಷದ ಈ ಸಲಗ, ಇತರ ಎರಡು ಆನೆಗಳೊಂದಿಗೆ ಗುರುವಾರ ರಾತ್ರಿ ಉದ್ಯಾನದಿಂದ ಹೊರದಾಟಿ ಬಂದು ಕೋಣನಹೊಸಹಳ್ಳಿ, ಕೊಳುವಿಗೆ, ಮುದಗನೂರು ಬಳಿ ಅಡ್ಡಾಡುತ್ತಿತ್ತು. ಅರಣ್ಯ ಇಲಾಖೆ ಸಿಬ್ಬಂದಿಗಳು
ಗಣೇಶ, ಬಲರಾಮ ಆನೆಗಳ ನೆರವಿನಿಂದ ಶುಕ್ರವಾರ ಬೆಳಗ್ಗೆ ಎರಡು ಕಾಡಾನೆಗಳನ್ನು ಕೊಳವಿಗೆಯ ರಾಮಲಿಂಗೇಶ್ವರ ದೇವಸ್ಥಾನದ ಬಳಿಯ ಗೇಟ್‌ನಿಂದ ಒಳ ಸೇರಿಸಿದ್ದರು. ಆದರೆ, ಈ ಸಲಗ ಗಾಬರಿಗೊಂಡು ಗುಂಪಿನಿಂದ ಬೇರ್ಪಟ್ಟು, ಕೋಣನಹೊಸಹಳ್ಳಿ ಬಳಿ ನೀಲಗಿರಿ ತೋಪಿನತ್ತ ಓಡಿತ್ತು. ಎಷ್ಟೇ ಪ್ರಯತ್ನಪಟ್ಟರೂ ಸಾಕಾನೆಗಳಿಗೂ ಹೆದರದೆ ಸೆಡ್ಡು ಹೊಡೆದಿತ್ತು. ಕೊನೆಗೆ ರಾತ್ರಿ ವೇಳೆ ಕಾಡಿಗಟ್ಟಲು ಯತ್ನಿಸಿದಾಗಲೂ ಸಾಧ್ಯವಾಗಿರಲಿಲ್ಲ.

ಆದರೆ, ಶನಿವಾರ ಮುಂಜಾನೆ ವೇಳೆ ಈ ಸಲಗ ವೀರನಹೊಸಹಳ್ಳಿವರೆಗೆ ಬೇಲಿ ಅಂಚಿನಲ್ಲೇ ನಡೆದುಕೊಂಡು ಬಂದು, ಉದ್ಯಾನ ಪ್ರವೇಶಿಸಲು ರೈಲ್ವೆ ಕಂಬಿ ಏರಿ, ವಿಫಲ ಯತ್ನ ನಡೆಸಿತು. ಕಂಬಿಯ ಮೇಲೆ ಹೊಟ್ಟೆ ಸಿಲುಕಿ ನೆಲಕ್ಕೆ ಕಾಲೂರಲಾಗದೆ, ಘೀಳಿಡಲೂ ಆಗದೆ, ಆನೆ ಶ್ವಾಸಕಟ್ಟಿ ಇಹಲೋಕ ತ್ಯಜಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಎ.ಸಿ.ಎಫ್‌.ಪ್ರಸನ್ನಕುಮಾರ್‌, ಆರ್‌. ಎಫ್‌.ಓ.ಸಂದೀಪ್‌, ಗ್ರಾಮಸ್ಥರ ಸಹಕಾರದಿಂದ ಆನೆಗೆ ಹಗ್ಗ ಕಟ್ಟಿ ಕೆಳಕ್ಕಿಳಿಸಿದರು. ನಾಗರಹೊಳೆ ಪಶುವೈದ್ಯ ಡಾ.ಮುಜೀಬ್‌ ರೆಹಮಾನ್‌ ಶವಪರೀಕ್ಷೆ ನಡೆಸಿದರು. ಈ ಮಧ್ಯೆ, ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸುತ್ತಮುತ್ತಲ ಗ್ರಾಮಸ್ಥರು, ಆನೆಯ ಸಾವಿಗೆ ಮಮ್ಮಲ ಮರುಗಿದರು. 

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.