ಡಿ.ಕೆ.ಶಿವಕುಮಾರ್, ಈಶ್ವರ್ ಖಂಡ್ರೆ ಇದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Team Udayavani, Jun 4, 2021, 5:00 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಹೆಲಿಕಾಪ್ಟರ್ ಪ್ರತಿಕೂಲ ಹವಾಮಾನದಿಂದಾಗಿ ನೆಲಮಂಗಲದ ಟಿ. ಬೇಗೂರು ಬಳಿ ಶುಕ್ರವಾರ ಸಂಜೆ ಸುರಕ್ಷಿತವಾಗಿ ತುರ್ತು ಭೂಸ್ಪರ್ಶವಾಗಿದೆ.
ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್ ಹಾಗೂ ಎಂಎಲ್ ಸಿ ಯು.ಬಿ. ವೆಂಕಟೇಶ್ ಅವರು ಮಧ್ಯಾಹ್ನ ದಾವಣಗೆರೆಯಲ್ಲಿ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರು ಆಯೋಜಿಸಿದ್ದ ಕೋವಿಡ್ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದರು.
ಆದರೆ ವಿಪರೀತ ಮಳೆಯ ಕಾರಣ ಪ್ರತಿಕೂಲ ಹವಾಮಾನದಿಂದಾಗಿ ಅವರಿದ್ದ ಹೆಲಿಕಾಪ್ಟರ್ ಇಳಿಯಲು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಅನುಮತಿ ಲಭ್ಯವಾಗಲಿಲ್ಲ. ಹೀಗಾಗಿ ಡಿ ಕೆ ಶಿವಕುಮಾರ್ ಹಾಗೂ ಸಹೋದ್ಯೋಗಿಗಳಿದ್ದ ಹೆಲಿಕಾಪ್ಟರ್ ನೆಲಮಂಗಲದ ಟಿ. ಬೇಗೂರು ಬಳಿ 4 ಗಂಟೆ ಸುಮಾರಿಗೆ ಸುರಕ್ಷಿತವಾಗಿ ಧರೆಗಿಳಿಯಿತು.
ಇದನ್ನೂ ಓದಿ:ಬ್ಯಾಂಕಿಂಗ್ ವಂಚನೆಗೆ ಒಳಗಾಗಿದ್ದೀರಾ..? ನಿಮ್ಮ ಹಣವನ್ನು ನೀವು ಹಿಂಪಡೆಯಬಹುದು..!
ಅಲ್ಲಿಂದ ರಸ್ತೆ ಮಾರ್ಗವಾಗಿ ಶಿವಕುಮಾರ್ ಮತ್ತು ಇತರ ಕಾಂಗ್ರೆಸ್ ಮುಖಂಡರು ರಾಜಭವನದತ್ತ ಹೊರಟಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗವು ರಾಜ್ಯಪಾಲರನ್ನು ನಿಗದಿಯ ಸಮಯಕ್ಕಿಂತ (ಸಂಜೆ 4) ಒಂದು ಗಂಟೆ ತಡವಾಗಿ ಭೇಟಿ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಷತ್ : ಹಿಂದುಳಿದ ವರ್ಗ,ಮುಸ್ಲಿಂ ಅಥವಾ ಕ್ರೈಸ್ತರಿಗೆ ಅವಕಾಶಕ್ಕೆ ಸಿದ್ದರಾಮಯ್ಯ ಮನವಿ
ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ
ಅಸ್ಸಾಂನಲ್ಲಿ ಪೊಲೀಸ್ ಠಾಣೆಗೆ ಬೆಂಕಿ: ದುಷ್ಕರ್ಮಿಗಳ 5 ಮನೆಗಳು ನೆಲಸಮ
ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ