ನೌಕರರ ವರ್ಗಾವಣೆ ಅಧಿಕಾರ ಸಚಿವರಿಗೆ

Team Udayavani, Jul 9, 2021, 7:10 AM IST

ನೌಕರರ ವರ್ಗಾವಣೆ ಅಧಿಕಾರ ಸಚಿವರಿಗೆ

ಬೆಂಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸರಕಾರಿ ನೌಕರರ ವರ್ಗಾ ವಣೆಯನ್ನು ಮುಂದೂಡಿದ್ದ ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕೊನೆಗೂ ಸಚಿವರ ಒತ್ತಡಕ್ಕೆ ಮಣಿದಿದ್ದಾರೆ. ಸಚಿವರಿಗೇ ನೌಕರರ ವರ್ಗಾ ವಣೆಗೆ ಅವಕಾಶ ಕಲ್ಪಿಸಿದ್ದು, ಜುಲೈ 22ರೊಳಗೆ ಆಯಾ ಇಲಾಖೆಯ ಸಚಿ ವರು ಶೇ. 6ರಷ್ಟು ಮೀರದಂತೆ ವರ್ಗಾ ವಣೆ ಮಾಡುವಂತೆ ಸೂಚಿಸಿದ್ದಾರೆ.

ಪ್ರತೀ ಮೇ, ಜೂನ್‌ನಲ್ಲಿ ಸಾಮಾನ್ಯ ವರ್ಗ ನಡೆ ಯುತ್ತದೆ. 15 ದಿನಗಳಿಂದ 1 ತಿಂಗಳ ಅವಧಿಯಲ್ಲಿ ಸಚಿವರು ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಗರಿಷ್ಠ ಶೇ. 5ರಿಂದ 6ರಷ್ಟು ಸಿಬಂದಿಯನ್ನು ವರ್ಗಾವಣೆ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ. ಆದರೆ 2 ವರ್ಷ ಗಳಿಂದ ಕೊರೊನಾ ಹಾವಳಿಯ ಕಾರಣ ಪ್ರತಿಯೊಂದು ವರ್ಗಾವಣೆಗೂ ಸಿಎಂ ಅನುಮತಿ ಕಡ್ಡಾಯವಾಗಿತ್ತು.

ಸಂಪುಟದಲ್ಲಿಯೇ ಸಚಿವರ ಆಗ್ರಹ:

2021-22ನೇ ಸಾಲಿಗೆ ಅನ್ವಯ ವಾಗು ವಂತೆ ಇಲಾಖಾವಾರು ಸಾರ್ವ ತ್ರಿಕ ವರ್ಗಾವಣೆ ಮಾಡಲು ಸಚಿವರಿಗೆ ಅವಕಾಶ ಕಲ್ಪಿಸುವಂತೆ ಕಳೆದ ತಿಂಗಳು ನಡೆದ ಸಂಪುಟ ಸಭೆಯಲ್ಲಿ ಅರಣ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಅನೇಕ ಸಚಿವರು ಮುಖ್ಯಮಂತ್ರಿ ಯವರನ್ನು ಆಗ್ರಹಿಸಿದ್ದರು. ಆದರೆ ಆಗ ಯಡಿಯೂರಪ್ಪ ಅವರು “ಯಾರದೇ ವರ್ಗಾ ವಣೆ ಬೇಕಿದ್ದರೂ ನನ್ನ ಬಳಿ ಬನ್ನಿ, 24 ಗಂಟೆಯಲ್ಲಿ ವರ್ಗಾವಣೆ ಮಾಡಿಕೊಡುತ್ತೇನೆ’ ಎಂದು ಸಚಿವರ ಬೇಡಿಕೆಯನ್ನು ತಿರಸ್ಕರಿಸಿದ್ದರು ಎಂದು ತಿಳಿದು ಬಂದಿತ್ತು.

ಆದರೆ ಮುಖ್ಯಮಂತ್ರಿಗಳ ನಿರ್ಧಾರದ ಬಗ್ಗೆ ಸಂಪುಟ ಸಹೋ ದ್ಯೋಗಿ ಗಳು ಬೇಸರಗೊಂಡಿದ್ದರು ಎಂದು ಹೇಳಲಾಗುತ್ತಿದ್ದು, ಇಲಾಖೆಯ ಕಾರ್ಯಾಂಗದ ಮುಖ್ಯಸ್ಥರು ಹಾಗೂ ಎ ದರ್ಜೆಯ ಅಧಿಕಾರಿಗಳ ವರ್ಗಾ ವಣೆ ಯನ್ನು ಸಚಿವರ ಗಮನಕ್ಕೆ ತಾರದೇ ಮಾಡಲಾಗುತ್ತಿದೆ. ಇದ ರಿಂದ ಅಧಿಕಾರಿಗಳು ಸಚಿವರ ಮಾತು ಕೇಳ ದಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ  ಬಿ ಮತ್ತು ಸಿ ದರ್ಜೆಯ ಅಧಿಕಾರಿಗಳ ವರ್ಗಾವಣೆ ಮಾಡಿಸಲೂ ಮುಖ್ಯ ಮಂತ್ರಿ ಗಳ ಅನುಮತಿಗಾಗಿ ಕಾಯುವುದು ಎಷ್ಟು ಸಮಂಜಸ ಎಂದು ಕೆಲವು ಹಿರಿಯ ಸಚಿವರೇ ಬೇಸರ ವ್ಯಕ್ತ ಪಡಿಸಿದ್ದರು ಎಂದು ಹೇಳಲಾಗುತ್ತಿದೆ.

ಯಾರಿಗೆ ಅನುಕೂಲ? :

  • ಎರಡು ವರ್ಷದಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ
  • ಮಕ್ಕಳ ಶಿಕ್ಷಣಕ್ಕಾಗಿ ಸ್ವಂತ ಊರಿಗೆ ಹೋಗ ಬೇಕೆನ್ನು ವವರಿಗೆ
  • ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ಬರಲು ಬಯಸುವವರಿಗೆ

ಯಾರಿಗೆ ಅನನುಕೂಲ? :

  • ಅನೇಕ ವರ್ಷಗಳಿಂದ ಒಂದೇ ಕಡೆ ಇರುವವರಿಗೆ
  • ಸಚಿವರ ಹಾಗೂ ಶಾಸಕರ ಕೆಂಗಣ್ಣಿಗೆ ಗುರಿ ಯಾಗಿರುವವರಿಗೆ

ವರ್ಗಾವಣೆ ಉದ್ದೇಶ ಇರುವುದು ನೌಕರರಿಗೆ ಅನು ಕೂಲವಾಗಲಿ ಎಂದು. ವರ್ಗಾ ವಣೆಗೆ ಅವಕಾಶ ನೀಡಿರುವು ದನ್ನು ಸ್ವಾಗತಿಸುತ್ತೇವೆ. ಆದರೆ  ಅನಗತ್ಯವಾಗಿ ಲಾಬಿಗಳಿಗೆ ಮಣಿದು ವರ್ಗಾವಣೆ ಮಾಡಿ ಅಧಿಕಾರಿಗಳಿಗೆ ತೊಂದರೆ ಕೊಡಬಾರದು. – ಸಿ.ಎಸ್‌. ಷಡಕ್ಷರಿ, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.