ಪೊಲಿಯೋ ಲಸಿಕೆ ಅಭಿಯಾನ ಅಂತ್ಯ
Team Udayavani, Jan 23, 2020, 3:03 AM IST
ಬೆಂಗಳೂರು: ರಾಜ್ಯಾದ್ಯಂತ ನಾಲ್ಕು ದಿನಗಳ ಕಾಲ ನಡೆದ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮ ಬುಧವಾರಕ್ಕೆ ಅಂತ್ಯವಾಗಿದ್ದು, ಮುಂದಿನ ಹತ್ತು ದಿನಗಳು ಲಸಿಕೆಯಿಂದ ತಪ್ಪಿಸಿಕೊಂಡ ಮಕ್ಕಳ ಸಮೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 64,01,844 ಮಕ್ಕಳಿಗೆ ಲಸಿಕೆ ಹಾಕಲಾಗಿದ್ದು, ಶೇ.100.44ರಷ್ಟು ಗುರಿ ಸಾಧನೆಯಾಗಿದೆ. ಈ ಮೂಲಕ ರಾಜ್ಯದೆಲ್ಲೆಡೆ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಐದು ವರ್ಷದೊಳಗಿನ 63,73,840 ಮಕ್ಕಳಿರಬಹುದು ಎಂದು ಆರೋಗ್ಯ ಇಲಾಖೆ ಅಂದಾಜಿಸಿತ್ತು. ಈ ಪೈಕಿ ಮೊದಲ ದಿನ ಭಾನುವಾರವೇ 58,10,493 ಮಕ್ಕಳಿಗೆ ಲಸಿಕೆ ಹಾಕಲಾಗಿತ್ತು. ನಂತರ, ಜ.20 ರಿಂದ 23ರವರೆಗೂ ಆಸ್ಪತ್ರೆಗಳಲ್ಲಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆಗಳಿಗೆ ತೆರಳಿ ಪೊಲಿಯೋ ಲಸಿಕೆ ಹಾಕಿದ್ದಾರೆ. ಜತೆಗೆ, ಲಸಿಕೆ ಹಾಕಿದ ಮಗುವಿನ ಮನೆಯನ್ನು ಗುರುತು ಮಾಡಿ ಬಂದಿದ್ದಾರೆ. ಜಿಲ್ಲಾವಾರು ಲಸಿಕೆ ಹಾಕಿರುವ ಪ್ರಮಾಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ, ಶೇ. 107.50ರಷ್ಟು ಗುರಿ ಸಾಧನೆಯಾಗಿದೆ.
ಯಾದಗಿರಿ ಜಿಲ್ಲೆಯಲ್ಲಿ ಅತಿ ಕಡಿಮೆ ಶೇ.95.79ರಷ್ಟು ಗುರಿ ಸಾಧನೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. “ಗುರುವಾರದಿಂದ ಮುಂದಿನ 10 ದಿನಗಳ ಕಾಲ ಲಸಿಕೆಯಿಂದ ತಪ್ಪಿಸಿಕೊಂಡ ಮಕ್ಕಳ ಸಮೀಕ್ಷೆ ನಡೆಯಲಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಲಸಿಕೆ ಹಾಕಿಲ್ಲ ಎಂದು ಗುರುತು ಮಾಡಿರುವ ಮನೆಗಳಿಗೆ ತೆರಳಿ ಮಗು ಲಸಿಕೆ ಹಾಕಿಸಿಕೊಳ್ಳದ ಕಾರಣ ತಿಳಿದುಕೊಂಡು, ಅಲ್ಲಿಯೇ ಮಗು ಲಭ್ಯವಿದ್ದರೆ ಲಸಿಕೆ ಹಾಕಲಿದ್ದಾರೆ’ ಎಂದು ಆರ್ಸಿಎಚ್ ಯೋಜನಾ ನಿರ್ದೇಶಕ ಶಿವರಾಜ್ ಸಜ್ಜನ್ ಶೆಟ್ಟಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ