ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ತಡೆ ಕಾಯ್ದೆ ಜಾರಿಗೆ ತೀರ್ಮಾನ: ಸಿಎಂ ಬಿಎಸ್ ವೈ
Team Udayavani, Dec 5, 2020, 8:09 PM IST
ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಅತ್ಯಂತ ಯಶಸ್ವಿಯಾಗಿದೆ. ಗೋಹತ್ಯೆ ನಿಷೇಧ ಮತ್ತು ಲವ್ ಜಿಹಾದ್ ಬಗ್ಗೆ ತಡೆ ಕಾಯ್ದೆ ಜಾರಿಗೆ ತೀರ್ಮಾನ ಮಾಡಿದ್ದೇವೆ. ಈ ಅಧಿವೇಶನದಲ್ಲಿ ಸಾಧ್ಯವಾದರೆ ಗೋಹತ್ಯೆ ಮಸೂದೆ ಜಾರಿಗೆ ತರುವಂತೆ ಚರ್ಚೆ ನಡೆಸುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು , ಮುಂಬರುವ ಮಸ್ಕಿ, ಬಸವಕಲ್ಯಾಣ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂರಕ್ಕೆ ನೂರು ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
ಕಾಂಗ್ರೆಸ್ ನಷ್ಟು ಬಿಜೆಪಿಯವರು ದ್ರೋಹ ಮಾಡಿರಲಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ಕಾಂಗ್ರೆಸ್ ಜೊತೆಗಿನ ಮೈತ್ರಿ ವಿಷಯದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಈಗ ಸತ್ಯದ ಅರಿವಾಗಿದೆ. ಈಗ ಅವರದೇ ಆದ ಭಾಷೆಯಲ್ಲಿ ಸತ್ಯ ಸಂಗತಿಗಳನ್ನು ಬಿಚ್ಚಿಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಮಂಗಳೂರು: ಉಗ್ರರ ಪರ ಗೋಡೆ ಬರಹ ಪ್ರಕರಣ; ಇಬ್ಬರ ಬಂಧನ
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೇ ಹಂತದ ಗ್ರಾ.ಪಂ ಚುನಾವಣೆ ನಡೆಸುವಂತೆ ಆದೇಶ !
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444