ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್‌ ಶಿಕ್ಷಣಕ್ಕೆ ಆದ್ಯತೆ


Team Udayavani, Dec 12, 2018, 6:00 AM IST

z-10.jpg

ವಿಧಾನಸಭೆ: ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಆದ್ಯತೆ ಮೇರೆಗೆ ಮುಂದಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ತರಗತಿ ಆರಂಭಿಸಲು ಸಿದ್ಧತೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಬಿಜೆಪಿಯ ಉಮಾನಾಥ ಕೋಟ್ಯಾನ್‌ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ 1000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜತೆಗೆ ಒಂದನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮ ತರಗತಿಗಳನ್ನು ಆರಂಭಿಸಲು ಈಗಾಗಲೇ ಆದೇಶ ಹೊರಡಿಸಲಾಗಿದೆ. 276 ಕರ್ನಾಟಕ ಪಬ್ಲಿಕ್‌ ಶಾಲೆಗಳು, ಈಗಾಗಲೇ 6- 7ನೇ ತರಗತಿಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಬೋಧಿಸಲಾಗುತ್ತಿರುವ ಶಾಲೆಗಳು, ಹೆಚ್ಚಿನ ದಾಖಲಾತಿ ಹೊಂದಿರುವ ಗ್ರಾಮೀಣ ಪ್ರದೇಶದ ಶಾಲೆಗಳಲ್ಲೂ ಇಂಗ್ಲಿಷ್‌ ಮಾಧ್ಯಮ
ಆರಂಭಿಸಲು ಸಿದಟಛಿತೆ ನಡೆಸಲಾಗಿದೆ ಎಂದು ತಿಳಿಸಿದರು.

ಇಂಗ್ಲಿಷ್‌ ಬೋಧನೆಯಲ್ಲಿ ಪರಿಣತಿ ಹೊಂದಿರುವ ಕಾರ್ಯನಿರತ ಶಿಕ್ಷಕರಿಗೆ ಆಯ್ಕೆ ಪರೀಕ್ಷೆ ನಡೆಸಿ ಇಂಗ್ಲಿಷ್‌ ಮಾಧ್ಯಮ ತರಗತಿ ಬೋಧಿಸಲು ನಿಯೋಜಿಸಲಾ  ಗುವುದು. ಆಯ್ಕೆಯಾದ ಶಿಕ್ಷಕರಿಗೆ ಆರ್‌ಐಇ ಮೂಲಕ 15 ದಿನಗಳ ಪ್ರವೇಶ ತರಬೇತಿ ನೀಡಲಾಗುವುದು ಹಾಗೂ ಪ್ರತಿ ತಿಂಗಳು ಸಂಸ್ಥೆಯೊಂದಿಗೆ ವಿಡಿಯೋ ಸಂವಾದ ನಡೆಸಲಿದೆ. ಇಂಗ್ಲಿಷ್‌ ಮಾಧ್ಯಮ ತರಗತಿ ಪ್ರಾರಂಭಿಸಲು ಅಗತ್ಯವಾದ ಪಠ್ಯ ಪುಸ್ತಕ ಹಾಗೂ ಸ್ಮಾರ್ಟ್‌ ತರಗತಿಗಳಲ್ಲಿ ಬೋಧಿಸಲು ಅನುಕೂಲವಾಗುವಂತೆ ಧ್ವನಿ ಮತ್ತು
ದೃಶ್ಯಗಳನ್ನು ಒಳಗೊಂಡ ಇ-ಕಂಟೆಂಟ್‌ಗಳನ್ನು ಡಿಎಸ್‌ ಇಆರ್‌ಟಿ ಮೂಲಕ ಸಿದ್ಧಪಡಿಸಲಾಗುವುದು ಎಂದು ಹೇಳಿದರು. ಪ್ರಸಕ್ತ ಸಾಲಿನಲ್ಲಿ 1715 ಇಂಗ್ಲಿಷ್‌ ಭಾಷಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. 1000 ಇಂಗ್ಲಿಷ್‌ ಭಾಷಾ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.

1521 ಉಪನ್ಯಾಸಕರ ನೇರ ನೇಮಕಾತಿ 
ವಿಧಾನಸಭೆ: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ 1204 ಉಪನ್ಯಾಸಕರ ನೇಮಕ ಪ್ರಕ್ರಿಯೆ ಈಗಾಗಲೇ ಶುರುವಾಗಿದ್ದು, ಉಳಿದಂತೆ ಖಾಲಿಯಿರುವ 1512 ಉಪನ್ಯಾಸಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಬಿಜೆಪಿಯ ಎಚ್‌.ಹಾಲಪ್ಪಪ್ರಶ್ನೆಗೆ ಉತ್ತರಿಸಿದ ಅವರು, 2007ರ ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ ಶಿಕ್ಷಕರ ವರ್ಗಾವಣೆ ನಿಯಂತ್ರಣ (ಅಧಿನಿಯಮ) ಹಾಗೂ 2017ರ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮದ ಅನ್ವಯ ಸರ್ಕಾರಿ ಪದ ಪೂರ್ವ ಕಾಲೇಜುಗಳಲ್ಲಿ 10 ವರ್ಷಕ್ಕೂ ಹೆಚ್ಚು ಕಾಲ “ಎ’ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರ ಪೈಕಿ ಮಂಜೂರಾದ ಒಟ್ಟು ಉಪನ್ಯಾಸಕರ ಹುದ್ದೆಗಳ ಶೇ.5ರ ಮಿತಿಗೊಳಪಟ್ಟು 596 ಉಪನ್ಯಾಸಕರನ್ನು ಕಡ್ಡಾಯ ವರ್ಗಾವಣೆ ಮಾಡಿ
‘ಸಿ’ ವಲಯದ ಕಾಲೇಜುಗಳಿಗೆ ವರ್ಗಾಯಿಸಲಾಗಿದೆ ಎಂದು ಮಾಹಿತಿ ನೀಡಿದರು. ಜತೆಗೆ 2997 ಅತಿಥಿ ಉಪನ್ಯಾಸಕರನ್ನು
ತಾತ್ಕಾಲಿಕವಾಗಿ ನೇಮಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ ಸರ್ಕಾರಿ ಹಾಗೂ ಅನುದಾನಿತ ಪಪೂ ಕಾಲೇಜುಗಳಲ್ಲಿ ಕಾರ್ಯಭಾರ ಕಡಿಮೆ ಇರುವ ಉಪನ್ಯಾಸಕರನ್ನು ಇತರೆಡೆ ನಿಯೋಜನೆಗೆ ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.

ಪದವಿ ಕಾಲೇಜು ಆರಂಭಕ್ಕೆ ಚಿಂತನೆ
ರಾಯಚೂರು ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ಗಿಲ್ಲೇಸೂಗೂರು ಗ್ರಾಮದಲ್ಲಿ ಪದವಿ ಕಾಲೇಜು ಆರಂಭಿಸುವ ಬಗ್ಗೆ ಪ್ರಾದೇಶಿಕ ಜಂಟಿ ನಿರ್ದೇಶಕರಿಂದ ಸ್ಥಳ ಪರಿಶೀಲನಾ ವರದಿ ಪಡೆದು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ
ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಭರವಸೆ ನೀಡಿದರು. ಬಿಜೆಪಿಯ ಬಸನಗೌಡ ದದ್ದಲ್‌ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಪ್ರಾದೇಶಿಕ ಜಂಟಿ ನಿರ್ದೇಶಕರಿಂದ ನಿಯಮಾನುಸಾರ ಸ್ಥಳ ಪರಿಶೀಲನಾ ವರದಿ ಕೋರಲಾ ಗಿದೆ. ವರದಿ ಸಲ್ಲಿಕೆಯಾದ ಬಳಿಕ
ಮಾನದಂಡ ಆಧರಿಸಿ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಸ್ಥಳ ಗುರುತಿಸಲು ಸೂಚನೆ: ಎಚ್‌.ಡಿ.ಕೋಟೆಯ ಸರ ಗೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಈಗಾ ಗಲೇ 3.80 ಕೋಟಿ ರೂ. ಕಾಯ್ದಿರಿಸಲಾಗಿದ್ದು, ನಿವೇಶನ ನಿಗದಿಯಾಗುತ್ತಿದ್ದಂತೆ ಕಟ್ಟಡ ನಿರ್ಮಾಣ 
ಆರಂಭವಾಗಲಿದೆ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿದರು. ಅಬಕಾರಿ ಇಲಾಖೆಯ ವಿವಿಧ ವೃಂದ ಗಳಲ್ಲಿ 5485 ಮಂಜೂರಾದ ಹುದ್ದೆ ಪೈಕಿ 2584 ಹುದ್ದೆ ಖಾಲಿಯಿದ್ದು, ಬಡ್ತಿ ಹಾಗೂ ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕಿದೆ ಎಂದು  ಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.