ಅಪಾರ್ಟ್ಮೆಂಟ್ಗಳಿಗೆ ಪ್ರತ್ಯೇಕ ಮತಗಟ್ಟೆ ಸ್ಥಾಪನೆ
Team Udayavani, Apr 7, 2018, 7:00 AM IST
ಬೆಂಗಳೂರು: ದೊಡ್ಡ ಹೌಸಿಂಗ್ ಸೊಸೈಟಿಗಳಲ್ಲಿ ಪ್ರತ್ಯೇಕ ಮತಗಟ್ಟೆಗಳನ್ನು ಸ್ಥಾಪಿಸುವಂತೆ ಕೆಲವು ರಾಜಕೀಯ ಪಕ್ಷಗಳು ಮನವಿ ಮಾಡಿದ್ದು, ಈ ಬಗ್ಗೆ ಪರಿಶೀಲಿಸಿದ ಬಳಿಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆಂದು ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 400ಕ್ಕೂ ಹೆಚ್ಚು ಫ್ಲ್ಯಾಟ್ ಅಥವಾ ವಸತಿ ಸಂಕೀರ್ಣಗಳು ಇರುವ ಪ್ರದೇಶಗಳಲ್ಲಿ ಅಲ್ಲಿನ ನಿವಾಸಿಗಳಿಗೆ ಮತದಾನದ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಪ್ರತ್ಯೇಕ ಮತಗಟ್ಟೆ ಸ್ಥಾಪಿಸುವಂತೆ ರಾಜಕೀಯ ಪಕ್ಷಗಳು ಮನವಿ ಮಾಡಿವೆ. ಇದನ್ನು ಆಯೋಗ ಸಕಾರಾತ್ಮಕವಾಗಿ ಸ್ವೀಕರಿಸಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಗರ ಪ್ರದೇಶಗಳಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಯಾಗಾಗಲೂ ಕಡಿಮೆ ಆಗಿರುತ್ತದೆ. ಹೊರವಲಯದ ಅಪಾರ್ಟ್ಮೆಂಟ್, ಫ್ಲ್ಯಾಟ್ಗಳಲ್ಲಿ ವಾಸ ಮಾಡುವವರು ದೂರದ ಮತಗಟ್ಟೆಗೆ ಬರುವುದಿಲ್ಲ. ಅಂತಹ ಮತದಾರರಿಗೆ ಅನುಕೂಲ ಮಾಡಿಕೊಟ್ಟು, ಆ ಮೂಲಕ ನಗರದ ಶೇಕಡವಾರು ಮತದಾನ ಪ್ರಮಾಣ ಹೆಚ್ಚಿಸಬಹುದು ಎಂದು ಹೇಳಿದ್ದಕ್ಕೆ “ಮತದಾನ ಪ್ರಮಾಣ ಹೆಚ್ಚಿಸಲು ಕೈಗೊಳ್ಳಬೇಕಾದ ಎಲ್ಲ ಕ್ರಮಗಳ ಬಗ್ಗೆ ಆಯೋಗ ಮುಕ್ತವಾಗಿದೆ’ ಎಂದರು.
ಮತದಾರರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಲು ಮತದಾನದ ದಿನ ರಾಜ್ಯದ ಎಲ್ಲ ದೊಡ್ಡ ಶಾಪಿಂಗ್ ಮಾಲ್ಗಳು, ಮನರಂಜನಾ ಕೇಂದ್ರಗಳನ್ನು ಬಂದ್ ಮಾಡಿಸಬೇಕು ಎಂದು ಕೆಲವು ರಾಜಕೀಯ ಪಕ್ಷಗಳು ಸಲಹೆ ನೀಡಿವೆ. ಈ ಬಗ್ಗೆಯೂ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ