ಐಟಿ ದಾಳಿ ಆಗುತ್ತಿರುವ ರೀತಿ ಬಗ್ಗೆ ಎಲ್ಲರಿಗೂ ಗೊತ್ತಿದೆ

Team Udayavani, Jul 31, 2019, 5:50 AM IST

ಬೆಂಗಳೂರು: ‘ಐಟಿ ಅಧಿಕಾರಿಗಳು ತೊಂದರೆ ಕೊಟ್ಟಿದ್ದಾರೆ’ ಎಂದು ಸಿದ್ಧಾರ್ಥ ಬರೆದಿದ್ದಾರೆ ಎನ್ನಲಾದ ಪತ್ರದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಐಟಿ ದಾಳಿ ಆಗುತ್ತಿರುವ ರೀತಿಯ ಬಗ್ಗೆ ಎಲ್ಲರಿಗೂ ಗೊತ್ತಿದೆ. ಮಾಧ್ಯ ಮದವರೇ ಇದನ್ನು ವಿಶ್ಲೇಷಣೆ ಮಾಡಿ ಎಂದು ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೇಲಿಂದ ಸೂಚನೆ ಬಂದ ಹಾಗೆ ವರ್ತಿಸ್ತಾರೆ ಅಷ್ಟೇ. ನನಗೂ, ಅದಕ್ಕೂ ಸಂಬಂಧ ಇಲ್ಲ. ಮಂಡ್ಯ ಲೋಕಸಭಾ ಚುನಾವಣೆ ಸಂದರ್ಭ 56 ಕಡೆ ಐಟಿ ದಾಳಿ ಆಯ್ತು ಅಲ್ವಾ ?’ ಎಂದು ಪ್ರಶ್ನಿಸಿದರು. ‘ಕೃಷ್ಣ ನನಗಿಂತ 1 ವರ್ಷ ಹಿರಿ ಯರು. ಈಗ ಅವರು ಇದನ್ನು ಸಹಿಸಿಕೊಳ್ಳಬೇಕಾದ ಪರಿಸ್ಥಿತಿ. ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿ ಬಂದಿದ್ದೇನೆ’ ಎಂದು ಹೇಳಿದರು.

ಸಿದ್ಧಾರ್ಥ ನಾಪತ್ತೆ ಬಗ್ಗೆ ತನಿಖೆ ಆಗಲಿ: ಡಿಕೆಶಿ
ಬೆಂಗಳೂರು:
‘ಸಿದ್ಧಾರ್ಥ ನಾಪತ್ತೆ ಪ್ರಕರಣದ ಬಗ್ಗೆ ತನಿಖೆ ಆಗಬೇಕಿದೆ’ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಆಗ್ರಹಿಸಿದ್ದಾರೆ. ಕೃಷ್ಣ ಅವರ ಮನೆಗೆ ಭೇಟಿ ನೀಡಿ, ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಸಿದ್ದಾರ್ಥ ಧೈರ್ಯವಂತರು. ಆತ್ಮಹತ್ಯೆ ಬಗ್ಗೆ ಯೋಚಿಸುವ ವ್ಯಕ್ತಿ ಅಲ್ಲ. ಈ ಪ್ರಕರಣದ ಬಗ್ಗೆ ತನಿಖೆ ಆಗಬೇಕು’ ಎಂದು ಆಗ್ರಹಿಸಿದರು. ಅವರು ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಬಂದಿದೆ. ಅವರು ಕಿಡ್ನ್ಯಾಪ್‌ ಆಗಿದ್ದಾರೋ ಅಥವಾ ಮತ್ತೇನಾಗಿದ್ದಾರೋ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ