Exam; ಸೆ.23 – 24ರಂದು ಪಿಜಿ ಸಿಇಟಿ ಪರೀಕ್ಷೆ
Team Udayavani, Aug 30, 2023, 6:21 PM IST
ಬೆಂಗಳೂರು: ಎಂಬಿಎ, ಎಂಸಿಎ, ಎಂ.ಇ, ಎಂ.ಟೆಕ್, ಎಂ.ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕೆ ಸೆಪ್ಟೆಂಬರ್ 23 ಮತ್ತು 24ರಂದು ಪಿಜಿಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಬುಧವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಸೆ.23ರ ಶನಿವಾರ ಮಧ್ಯಾಹ್ನ 2.30ರಿಂದ 4.30ರವರೆಗೆ ಎಂ.ಇ, ಎಂ.ಟೆಕ್ ಮತ್ತು ಎಂ.ಆರ್ಕ್ ಕೋರ್ಸುಗಳಿಗೆ, ಸೆ.24ರ ಭಾನುವಾರ ಬೆಳಿಗ್ಗೆ 10.30ರಿಂದ 12.30ರವರೆಗೆ ಎಂಸಿಎ ಕೋರ್ಸಿಗೆ ಮತ್ತು ಅಂದು ಮಧ್ಯಾಹ್ನ 2.30ರಿಂದ 4.30ರವರೆಗೆ ಎಂಬಿಎ ಕೋರ್ಸಿಗೆ ಈ ಪರೀಕ್ಷೆಗಳು ಗರಿಷ್ಠ 100 ಅಂಕಗಳಿಗೆ ನಡೆಯಲಿದೆ ಎಂದಿದ್ದಾರೆ.
ಈ ಮೊದಲು ಸೆಪ್ಟೆಂಬರ್ 9 ಮತ್ತು 10ರಂದು ಈ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಪದವಿ ಕೋರ್ಸುಗಳ ಅಂತಿಮ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಾಹಿತಿಗೆ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ನೋಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್