ಬಿಪಿಎಲ್‌ಗೆ ಆಧಾರ್‌ ಜೋಡಣೆಗೆ ಅವಧಿ ವಿಸ್ತರಣೆ

Team Udayavani, Jun 20, 2018, 6:00 AM IST

l-34.jpg

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್‌ ಕಾರ್ಡ್‌ ಪಡೆಯಲು ಆಧಾರ್‌ ಕಾರ್ಡ್‌ ಕಡ್ಡಾಯವಾಗಿರುವುದರಿಂದ ಉಂಟಾಗಿರುವ ಸಮಸ್ಯೆ ನಿವಾರಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್‌ ಅಹಮದ್‌ ಹೇಳಿದ್ದಾರೆ. ವಿಕಾಸಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿ, ಆಧಾರ್‌ ಕಾರ್ಡ್‌ ಕಡ್ಡಾಯ ಹಿನ್ನೆಲೆಯಲ್ಲಿ ಉದ್ಭವಿಸಿರುವ ಸಮಸ್ಯೆಗಳು ಗಮನಕ್ಕೆ ಬಂದಿವೆ. ಹೀಗಾಗಿ, ಬಿಪಿಎಲ್‌ ಕಾರ್ಡ್‌ಗೆ ಆಧಾರ್‌ ಕಾರ್ಡ್‌ ನಂಬರ್‌ ಜೋಡಿಸಲು ನಿಗದಿಪಡಿಸಿರುವ ಅವಧಿ ವಿಸ್ತರಿಸಲಾಗುವುದು ಎಂದರು.

ರಾಜ್ಯದಲ್ಲಿ 47 ಲಕ್ಷ ಬಿಪಿಎಲ್‌ ಪಡಿತರ ಚೀಟಿ ವಿತರಣೆ ಬಾಕಿ ಇದ್ದು, ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ದಕ್ಷಿಣ ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಯೂನಿಟ್‌ಗೆ 5 ಕೆಜಿ ಅಕ್ಕಿ, 2 ಕೆಜಿ ರಾಗಿ ನೀಡಲಾಗುತ್ತಿದೆ. ಪ್ರಸ್ತುತ ಮಾರು ಕಟ್ಟೆಯಲ್ಲಿ 19 ರೂ.ಗೆ ಕೆಜಿ ರಾಗಿ ದೊರೆಯುತ್ತಿದ್ದು, ರೈತರಿಂದ 27.45 ರೂ. ಕೊಟ್ಟು ಖರೀದಿ ಮಾಡಲಾಗುತ್ತಿದೆ ಎಂದರು.

ನಾನು ರಾಹುಲ್‌ ಗಾಂಧಿ ನೆಂಟನಾ?:
“ಸುಮ್ಮನೆ ಕರೆದು ಮಂತ್ರಿ ಮಾಡಲು ನಾನೇನು  ರಾಹುಲ್‌ ಗಾಂಧಿ ನೆಂಟಾನಾ?” ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಜಮೀರ್‌ ಅಹಮದ್‌, ದೇವರು ನನ್ನ ಹಣೆಯಲ್ಲಿ ಬರೆದಿದ್ದಾನೆ, ಸಚಿವನಾಗಿದ್ದೇನೆ ಎಂದರು. ಜಮೀರ್‌ ಅಹಮದ್‌ ಮುಸ್ಲಿಂ ಸಮಾಜದ ರಾಜ್ಯಮಟ್ಟದ ನಾಯಕ ಅಲ್ಲ ಎಂದು ಹೇಳಿದ್ದ ತನ್ವೀರ್‌ ಸೇಠ್ಗೆ ತಿರುಗೇಟು ನೀಡಿದ ಅವರು, ಹೈ ಕಮಾಂಡ್‌ ಅರ್ಹತೆ ಇದ್ದವರನ್ನು ನೋಡಿ ಸಚಿವ ಸ್ಥಾನ ನೀಡಿದೆ. ತನ್ವೀರ್‌ ಸೇಠ್ ಕ್ಷೇತ್ರಕ್ಕೆ ನಾನೂ ಹೋಗುತ್ತೇನೆ. ಅವರೂ ಬರಲಿ. ಅಲ್ಲಿ ಯಾರಿಗೆ ಜನ ಬೆಂಬಲ ಇದೆ ಎನ್ನುವುದು ಸಾಬೀತಾಗಲಿ ಎಂದು ಸವಾಲು ಹಾಕಿದರು.

ಫಾರ್ಚುನರ್‌ ಕಾರು ಕೇಳಿದ್ದೇನೆ
ಸಿದ್ದರಾಮಯ್ಯ ಅವರು ಬಳಸಿದ್ದ ಫಾರ್ಚುನರ್‌ ಕಾರು ಕೇಳಿದ್ದೆ. ನನ್ನನ್ನೂ ಜನತೆ ಸಚಿವ ಎಂದು ಗುರುತಿಸಬೇಕಲ್ಲವೇ? ಅದಕ್ಕಾಗಿ ಫಾರ್ಚುನರ್‌ ಕಾರು ಕೇಳಿದ್ದೇನೆ ಎಂದು ಜಮೀರ್‌ ಅಹಮದ್‌ ಹೇಳಿದರು. ಕುಮಾರಸ್ವಾಮಿ ಅವರು ಸರ್ಕಾರಿ ಕಾರು ಬೇಡ ಎಂದಿದ್ದಾರಲ್ಲಾ ಎಂಬ ಪ್ರಶ್ನೆಗೆ, ಅವರು ಜನಪ್ರಿಯ ವ್ಯಕ್ತಿಯಾಗಿರುವುದರಿಂದ ಯಾವ ಕಾರಿನಲ್ಲಿ ಹೋದರೂ ಗುರುತಿಸುತ್ತಾರೆ. ನಮ್ಮನ್ನು ಗುರುತಿಸಲು ಸಾಧ್ಯವಾ ಎಂದು ಪ್ರಶ್ನಿಸಿದರು. 

ಅಧಿಕಾರ ತ್ಯಾಗಕ್ಕೂ ಸಿದ್ಧ
ಬೆಂಗಳೂರು: ವಕ್ಫ್ ಆಸ್ತಿಗೆ ನ್ಯಾಯ ಒದಗಿಸುವುದಕ್ಕಾಗಿ ನಾನು ಅಧಿಕಾರ ಕಳೆದುಕೊ ಳ್ಳಲೂ ಸಿದ್ಧ ಎಂದಿರುವ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್‌ ಆಹ್ಮದ್‌, ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿ ಹಾಗೂ ದುರ್ಬಳಕೆಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ “ಅನ್ವರ್‌ ಮಾಣಿಪ್ಪಾಡಿ ವರದಿ’ ಪರಿಶೀ ಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಮುಲಾಜಿ
ಲ್ಲದೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಮಂಗಳವಾರ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅನ್ವರ್‌ ಮಾಣಿಪ್ಪಾಡಿ ವರದಿಯಲ್ಲಿ ಕಾಂಗ್ರೆಸ್‌ ಮುಖಂಡರ ವಿರುದ್ಧ ಆರೋಪ ಮಾಡಲಾಗಿದೆ. ಹಾಗಾಗಿ ಕ್ರಮ ಕೈಗೊಳ್ಳದಂತೆ ಪಕ್ಷದಲ್ಲಿ ಒತ್ತಡ ಹೆಚ್ಚಾದರೆ ಹೇಗೆ ನಿಭಾಯಿಸುತ್ತೀರಿ ಎಂಬ ಪ್ರಶ್ನೆಗೆ, ಪಕ್ಷದಲ್ಲಿ ಆಂತರಿಕ ಒತ್ತಡ ಇದ್ದರೂ ಪರಿಗಣಿಸುವುದಿಲ್ಲ. ವಕ್ಫ್ ಆಸ್ತಿ ಒತ್ತುವರಿದಾರರ
ವಿರುದಟಛಿ ಕ್ರಮ ಕೈಗೊಳ್ಳುವ ವಿಚಾರದಲ್ಲಿ ಅಧಿಕಾರ ಕಳೆದುಕೊಳ್ಳಲೂ ನಾನು ಸಿದ್ಧ ಎಂದು ಹೇಳಿದರು.

ಟಾಪ್ ನ್ಯೂಸ್

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಶಾಲೆ, ಅಂಗನವಾಡಿ ಕಟ್ಟಡ ನಿರ್ಮಾಣದಲ್ಲಿ ದಾಖಲೆ: ಪಾಟೀಲ್‌

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ಪಾರ್ಟಿಗಳಿಗೆ ಡ್ರಗ್ಸ್‌ ಮಾರಾಟ-ಕೇರಳ ಮೂಲದ ಆರೋಪಿ ಬಂಧನ

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ತಿರುವನಂತಪುರಂ-ಕಾಸರಗೋಡು ರೈಲ್ವೆ ಮಾರ್ಗಕ್ಕೆ ಅನುಮೋದನೆ ನೀಡಿ : ಪಿಣರಾಯಿ ವಿಜಯನ್‌

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

ಸಂಚಾರ ವಿಭಾಗದ ಜಂಟಿ ಆಯುಕ್ತರ ಮನೆಯಲ್ಲೆ ಹಣ, ಮೊಬೈಲ್ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.