ಬಜೆಟ್‌ ನಲ್ಲಿ ದೇವಸ್ಥಾನಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನದ ನಿರೀಕ್ಷೆ: ಶಶಿಕಲಾ ಜೊಲ್ಲೆ


Team Udayavani, Feb 16, 2022, 4:02 PM IST

ಬಜೆಟ್‌ ನಲ್ಲಿ ದೇವಸ್ಥಾನಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನದ ನಿರೀಕ್ಷೆ: ಶಶಿಕಲಾ ಜೊಲ್ಲೆ

ಗುಡ್ಡಾಪುರ/ಬೆಂಗಳೂರು: ದೇವಸ್ಥಾನಗಳ ಅಭಿವೃದ್ದಿಯತ್ತ ವಿಶೇಷ ಕಾಳಜಿಯನ್ನು ಹೊಂದಿರುವ ಮುಖ್ಯಮಂತ್ರಿಗಳು ಮುಂದಿನ ಆಯವ್ಯಯದಲ್ಲಿ ದೇವಸ್ಥಾನಗಳ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಲಿದ್ದಾರೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು.

ಇಂದು ಮಹಾರಾಷ್ಟ್ರ ರಾಜ್ಯದ ಗುಡ್ಡಾಪುರದ ದಾನಮ್ಮ ದೇವಿ ಕ್ಷೇತ್ರದಲ್ಲಿ ಮೊದಲ ಹಂತದ ಕಾಮಗಾರಿ ಕರ್ನಾಟಕ ಭವನ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮ ಸರಕಾರ ದೇವಸ್ಥಾನಗಳ ಅಭಿವೃದ್ದಿಯತ್ತ ವಿಶೇಷ ಕಾಳಜಿ ಹೊಂದಿದೆ. ದೇವಸ್ಥಾನಗಳ ಸಮಗ್ರ ಅಭಿವೃದ್ದಿ ಹಾಗೂ ನಮ್ಮ ರಾಜ್ಯದ ಭಕ್ತಾದಿಗಳಿಗೆ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರತ್ತ ನಾವು ಗಮನ ನೀಡುತ್ತಿದ್ದೇವೆ ಎಂದರು.

ಈ ಬಾರಿಯ ಆಯವ್ಯಯದಲ್ಲಿ 119 ಕೋಟಿ ರೂಪಾಯಿಗಳ ಅನುದಾನವನ್ನು ಮುಜರಾಯಿ ಇಲಾಖೆಗೆ ನೀಡಲಾಗಿತ್ತು. ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ರಾಜ್ಯದ ದೇವಾಲಯಗಳ ಅಭಿವೃದ್ದಿಗೆ 168 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ನೀಡಿದ್ದು, ಒಟ್ಟಾರೆಯಾಗಿ ಪ್ರಸಕ್ತ ವರ್ಷ ಇದುವರೆಗೂ 287 ಕೋಟಿ ಅನುದಾನ ನೀಡಲಾಗಿದೆ. ಪ್ರತಿವರ್ಷ ಬಜೆಟ್‌ನಲ್ಲಿ 60 ರಿಂದ 70 ಕೋಟಿ ರೂ.ಗಳಷ್ಟು ಅನುದಾನ ನೀಡಲಾಗುತ್ತಿತ್ತು, ಬಿಜೆಪಿ ಸರಕಾರ ನಾಲ್ಕು ಪಟ್ಟು ಹೆಚ್ಚು ಅನುದಾನ ನೀಡಲಾಗಿದ್ದು ಈ ಬಾರಿಯ ಬಜೆಟ್‌ನಲ್ಲಿ ಇನ್ನೂ ಹೆಚ್ಚಿನ ಅನುದಾನ ಸಿಗುವ ಭರವಸೆಯನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ:ಕೊಟ್ಟಿಗೆಹಾರ: ಬಿಡಾಡಿ ದನಗಳ ಹಾವಳಿ ;ಬಿಡಾಡಿ ದನಗಳ ಕಡಿವಾಣಕ್ಕೆ ಸಾರ್ವಜನಿಕರ ಒತ್ತಾಯ

ಈಗಾಗಲೇ ಶ್ರೀಶೈಲ, ಅಯೋಧ್ಯ, ಪಂಡರಾಪುರ ಸೇರಿದಂತೆ ಹಲವು ಪ್ರಮುಖ ಧಾರ್ಮಿಕ ಕೇಂದ್ರಗಳಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ಗುಡ್ಡಾಪುರ ಕ್ಷೇತ್ರದಲ್ಲಿ ರಾಜ್ಯದ ಭಕ್ತರಿಗೆ ಸೌಕರ್ಯ: ಕರ್ನಾಟಕ ರಾಜ್ಯದ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಮಹರಾಷ್ಟ್ರದ ಶ್ರೀ ದಾನಮ್ಮದೇವಿ ಗುಡ್ಡಾಪುರದಲ್ಲಿ ಕರ್ನಾಟಕ ಸರಕಾರದ ವತಿಯಿಂದ ಕರ್ನಾಟಕ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಇಂದು ಮೊದಲ ಹಂತದ ಕಾಮಗಾರಿಗೆ ಅಡಿಗಲ್ಲು ಕಾರ್ಯಕ್ರಮ ನಡೆದಿದೆ. ಗುಡ್ಡಾಪುರಕ್ಕೆ ಕರ್ನಾಟಕ ರಾಜ್ಯದಿಂದ ಅಗಮಿಸುವಂತಹ ಭಕ್ತಾದಿಗಳಿಗೆ ಸುಸಜ್ಜಿತ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈಗಾಗಲೇ ಶ್ರೀ ಕ್ಷೇತ್ರ ಗುಡ್ಡಾಪುರದಲ್ಲಿ ದೇವಾಲಯದ ಹೆಸರಿನಲ್ಲಿರುವ 2 ಏಕರೆ ಜಮೀನನ್ನು ಖರೀದಿಸಲಾಗಿದೆ. ಮುಂಬರುವ ದಿನಗಳಲ್ಲಿ ಭಕ್ತರಿಗೆ ವಿಶಾಲವಾದ ದಾಸೋಹ ಭವನ, ವಾಸ್ತವ್ಯಕ್ಕಾಗಿ ಭವನವನ್ನು ನಿರ್ಮಿಸಲಾಗುವುದು. ಇದು ಮೊದಲ ಹಂತದ ಕಾಮಗಾರಿಯಾಗಿದ್ದು, ಮುಂದಿನ ಹಂತದಲ್ಲಿ ಇನ್ನೂ ಹೆಚ್ಚಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಕಾರ್ಯಕ್ರಮದದಲ್ಲಿ ಭಾಗವಹಿಸಿದ್ದ ಡಾ. ಜಯಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಕರ್ನಾಟಕ ಸರಕಾರದ ವತಿಯಿಂದ ಮೊದಲ ಹಂತದಲ್ಲಿ 5 ಕೋಟಿ ರೂಪಾಯಿಗಳ ಅನುದಾನ ದೊರಕಿರುವುದು ಬಹಳ ಸಂತಸದ ವಿಷಯ. ಪ್ರಸಿದ್ದ ಪುಣ್ಯ ಕ್ಷೇತ್ರವಾದ ದಾನಮ್ಮ ದೇವಿ ಕ್ಷೇತ್ರ ಅಭಿವೃದ್ದಿಗೆ ಇನ್ನಷ್ಟು ಅನುದಾನ ಶಶಿಕಲಾ ಜೊಲ್ಲೆ ನೀಡಿದ್ದಾರೆ. ಆ ಮೂಲಕ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ದಿ ಕೆಲಸಗಳು ಆಗಲಿ ಎಂದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.