ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಫ‌ಲಕ ಅಳವಡಿಕೆ ಗಡುವು ವಿಸ್ತರಿಸಿ

ನೋಂದಣಿಗೆ ಹಲವು ತಾಂತ್ರಿಕ ಅಡಚಣೆ, ಗೊಂದಲ ಅವಧಿ ವಿಸ್ತರಿಸಲು ವಾಹನಗಳ ಮಾಲಕರ ಆಗ್ರಹ

Team Udayavani, Feb 11, 2024, 7:40 AM IST

ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಫ‌ಲಕ ಅಳವಡಿಕೆ ಗಡುವು ವಿಸ್ತರಿಸಿ

ಬೆಂಗಳೂರು: ವಾಹನಗಳ ಹಳೆಯ ನಂಬರ್‌ ಪ್ಲೇಟ್‌ ಬದಲಾಯಿಸಿ ಅತಿಸುರಕ್ಷಿತ ನೋಂದಣಿ ಫ‌ಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ವಿಧಿಸಿದ್ದ ಗಡುವು ಸಮೀಪಿಸುತ್ತಿರುವ ಬೆನ್ನಲ್ಲೇ ವಾಹನಗಳ ಮಾಲೀಕರಿಂದ ಅವಧಿ ವಿಸ್ತರಣೆಗೆ ಕೂಗು ಕೇಳಿಬರುತ್ತಿದೆ.

ಸರ್ವರ್‌ ಮೇಲಿನ ಒತ್ತಡದಿಂದ ಆಗಬಹುದಾದ ನಿಧಾನಗತಿಯಿಂದ ಹಿಡಿದು ಹತ್ತುಹಲವು ತಾಂತ್ರಿಕ ತೊಂದರೆಗಳು ಎಚ್‌ಎಸ್‌ಆರ್‌ಪಿ ಬುಕಿಂಗ್‌ ವೇಳೆ ಕಂಡು ಬರುತ್ತಿದೆ. ಹಾಗಾಗಿ, ಫೆ. 17ರ ಒಳಗೆ ಬುಕಿಂಗ್‌ ಮತ್ತು ಅಳವಡಿಕೆ ಕಷ್ಟ ಸಾಧ್ಯ. ಹಾಗೆ ನೋಡಿದರೆ, ಬಹುತೇಕರು ತಮ್ಮದಲ್ಲದ ತಪ್ಪಿಗೆ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪರಿ ಣಾಮ ಹೊಸ ವ್ಯವಸ್ಥೆಯಿಂದ ಹೊರಗುಳಿಯಲಿದ್ದಾರೆ. ಆದ್ದರಿಂದ ಕನಿಷ್ಠ ಇನ್ನೂ ಒಂದು ತಿಂಗಳಾ ದರೂ ಗಡುವು ವಿಸ್ತರಣೆ ಮಾಡಬೇಕು ಎಂದು ವಾಹನಗಳ ಮಾಲೀಕರು ಒತ್ತಾಯಿಸಿದ್ದಾರೆ.

“ನನ್ನದು ಹೊಂಡಾ ಆ್ಯಕ್ಟಿವಾ ಇದೆ. ವಾಹನ ಕೊಡಗಿನಲ್ಲಿದ್ದರೆ, ನಾನು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಊರಿನಲ್ಲಿ ಯಾವುದೇ ವಾಹನ ತಯಾರಕರು ಇಲ್ಲ. ಅದಕ್ಕಿಂತ ಹೆಚ್ಚಾಗಿ ಮನೆಯಲ್ಲಿ ಕುಟುಂಬದ ಸದಸ್ಯರು ಊರಿಗೆ ಹೋಗಿದ್ದಾರೆ. ಈ ಮಧ್ಯೆ ಎಚ್‌ಎಸ್‌ಆರ್‌ಪಿ ಬುಕಿಂಗ್‌ಗೆ 7 ದಿನಗಳು ಮಾತ್ರ ಉಳಿದಿವೆ. ಇಂತಹ ಸಂದರ್ಭದಲ್ಲಿ ಏನು ಮಾಡಬೇಕು? ಕೊನೆಪಕ್ಷ 15 ದಿನಗಳ ಮಟ್ಟಿಗಾ ದರೂ ಅವಧಿ ವಿಸ್ತರಿಸಿದರೆ ಅನುಕೂಲ’ ಎಂದು ಮಡಿಕೇರಿ ನಿವಾಸಿ ಮಹೇಂದ್ರ ತಿಳಿಸುತ್ತಾರೆ.

“ನನ್ನದು ಹಿರೋಹೊಂಡಾ ಸ್ಪ್ಲೆಂಡರ್ ಇದೆ. ಈಗ ಆ ಕಂಪನಿ ಇಬ್ಭಾಗವಾಗಿದ್ದು, ನಾವು ಯಾರ ಮೊರೆ ಹೋಗಬೇಕು? ಈ ಬಗ್ಗೆ ಸ್ಪಷ್ಟತೆ ಇಲ್ಲ. ಇಂತಹ ಹಲವು ಗೊಂದಲಗಳು ಇವೆ. ಈ ನಿಟ್ಟಿನಲ್ಲೂ ಸಾರಿಗೆ ಇಲಾಖೆ ಅಧಿಕಾರಿಗಳು ಗಮನಹರಿಸುವ ಅವಶ್ಯಕತೆ ಇದೆ’ ಎಂದು ಜಯನಗರದ ನಿವಾಸಿ ವಿನಯ್‌ ಆಗ್ರಹಿಸುತ್ತಾರೆ.

ಶೇ.10ರಷ್ಟೂ ಅಳವಡಿಕೆ ಆಗಿಲ್ಲ!: ಈ ಮಧ್ಯೆ ಕಳೆದ 4 ತಿಂಗಳಲ್ಲಿ ಎಚ್‌ಎಸ್‌ಆರ್‌ಪಿಗೆ ಪರಿವರ್ತನೆ ಆಗಬೇಕಾದ ಒಟ್ಟಾರೆ ವಾಹನಗಳ ಪೈಕಿ ಶೇ. 10ರಷ್ಟೂ ಇದುವರೆಗೆ ಅಳವಡಿಕೆ ಆಗಿಲ್ಲ. ಅಂದರೆ ಅಳವಡಿಕೆ ಮಾಡಿಕೊಳ್ಳಬೇಕಾದ ವಾಹನಗಳ ಸಂಖ್ಯೆ 1.80 ಕೋಟಿಗೂ ಅಧಿಕ. ಅದರಲ್ಲಿ 13ರಿಂದ 14 ಲಕ್ಷ ವಾಹನಗಳಿಗೆ ಹೊಸ ನಾಮಫ‌ಲಕ ಹಾಕಲಾಗಿದೆ. ಇದರಲ್ಲಿ ದ್ವಿಚಕ್ರ ವಾಹನಗಳ ಸಂಖ್ಯೆಯೇ ಅಧಿಕವಾಗಿದೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಜನ ಇನ್ನೂ ಎಚ್‌ಎಸ್‌ಆರ್‌ಪಿಯಿಂದ ದೂರ ಉಳಿದಿ ದ್ದು, ರಾಜ್ಯದ ಹಲವು ಭಾಗಗಳಿಂದ ವಾಹನಗಳ ಮಾಲಿಕರಿಂದ ಗಡುವು ವಿಸ್ತರಣೆಗೆ ಒತ್ತಾಯ ಕೂಡ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ವಿಸ್ತರಣೆ ಸಾಧ್ಯತೆ ಹೆಚ್ಚಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿ ಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

“ಎಚ್‌ಎಸ್‌ಆರ್‌ಪಿ ಬಗ್ಗೆ ಜಾಗೃತಿ ಮೂಡಿಸ ಲಾಗುತ್ತದೆ. ಆದರೆ, ಇದಕ್ಕೆ ವಾಹನ ಸವಾರರ ಸಹಕಾರ ಮುಖ್ಯ ವಾಗಿದೆ. ಒಇಎಂ (ಒರಿಜಿನಲ್‌ ಇಕ್ವಿಪ್‌ಮೆಂಟ್‌ ಮ್ಯಾನ್ಯುಫ್ಯಾಕ್ಚರರ್‌)ಗಳಿಂದ ಅನುಮೋ ದಿಸಲ್ಪಟ್ಟ ಮಾರಾಟಗಾರರು ಮತ್ತು ವಿತರಕರು (ಡೀಲರ್‌) ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಕೆ ಮಾಡುತ್ತಾರೆ. ಅದೂ ಆನ್‌ಲೈನ್‌ ಮೂಲಕವೇ ಕೋರಿಕೆ ಸಲ್ಲಿಸುವುದು ಅಗತ್ಯ ಮತ್ತು ಅನಿ ವಾ ರ್ಯ. ಮನೆ ಬಾಗಿಲಿಗೇ ಬಂದು
ಅಳವಡಿ ಸಲಾಗುತ್ತಿದೆ.

ಬುಕಿಂಗ್‌ ಮಾಡುವುದು ಹೇಗೆ?
ಕರ್ನಾಟಕ ಸಾರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ : https://transport.karnataka.gov.in ಗೆ ಭೇಟಿ ನೀಡಿ, ಅಲ್ಲಿ ಎಚ್‌ಎಸ್‌ಆರ್‌ಪಿಗೆ ಕೋರಿಕೆ ಸಲ್ಲಿಸಬೇಕು. ನಂತರ ನೋಂದಣಿ ಪತ್ರ ಒಳಗೊಂಡಂತೆ ಅಗತ್ಯ ದಾಖಲೆಗಳನ್ನು ದಾಖಲಿಸಬೇಕು. ಅದು ಸಂಬಂಧಪಟ್ಟ ಒಇಎಂಗೆ ಹೋಗುತ್ತದೆ. ಅಲ್ಲಿ ಹತ್ತಿರದ ಡೀಲರ್‌ ಅಥವಾ ಮಾರಾಟಗಾರರನ್ನು ಆಯ್ಕೆ ಮಾಡಿಕೊಳ್ಳಬೇಕು. ತದನಂತರ ದಿನಾಂಕ ಮತ್ತು ಸಮಯ ನಿಗದಿ ಯಾಗುತ್ತದೆ. ಜತೆಗೆ ಆಯಾ ಸಮೀಪದ ಡೀಲರ್‌ಗೂ ಸಂದೇಶ ತಲುಪುತ್ತದೆ. ನಿಗದಿಪಡಿಸಿದ ಅವಧಿಯಲ್ಲಿ ಖುದ್ದು ಮನೆಗೆ ಬಂದು, ನಂಬರ್‌ ಪ್ಲೇಟ್‌ ಅಳವಡಿಸಲಾಗುತ್ತದೆ.

ಕಳೆದ 3 ವಾರಗಳಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ. ಜನ ಸ್ವಯಂಪ್ರೇರಿತವಾಗಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಇದುವರೆಗೆ ಅಂದಾಜು 15 ಲಕ್ಷಕ್ಕಿಂತ ಹೆಚ್ಚು ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳುವಲ್ಲಿ ಯಶಸ್ವಿ ಯಾಗಿವೆ. ಮುಂದೊಂದು ವಾರದಲ್ಲೂ ಇನ್ನೂ ಉತ್ತಮ ಸ್ಪಂದನೆ ದೊರೆಯುವ ವಿಶ್ವಾಸ ಇದೆ. ವಿಸ್ತರಣೆ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ.
-ಸಿ.ಮಲ್ಲಿಕಾರ್ಜುನ, ಹೆಚ್ಚುವರಿ ಆಯುಕ್ತರು,ಸಾರಿಗೆ ಇಲಾಖೆ

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.