ವಿಸ್ತೃತ ಉತ್ತರ, ಶೇ.75 ಹಾಜರಾತಿ, ಪರಿಷ್ಕೃತ ಪಠ್ಯಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ


Team Udayavani, Sep 23, 2022, 7:40 AM IST

ವಿಸ್ತೃತ ಉತ್ತರ, ಶೇ.75 ಹಾಜರಾತಿ, ಪರಿಷ್ಕೃತ ಪಠ್ಯಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ

ಸಾಂದರ್ಭಿಕ ಚಿತ್ರ

ಬೆಂಗಳೂರು: 2023 ಮಾರ್ಚ್‌/ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯು 2019ನೇ ಸಾಲಿನಲ್ಲಿ ನಡೆಸಿದ್ದ ಮಾದರಿಯಲ್ಲಿಯೇ ನಡೆಯಲಿದೆ. ಪ್ರಮುಖವಾಗಿ ವಿಸ್ತೃತ ಉತ್ತರ ಬರೆಯುವ ಪ್ರಶ್ನೆಪತ್ರಿಕೆ ಇರಲಿದೆ, ಶೇ.75 ಕಡ್ಡಾಯ ಹಾಜರಾತಿ ಪಾಲನೆ ಮತ್ತು ಪರಿಷ್ಕೃತಗೊಂಡಿರುವ ಪಠ್ಯಕ್ಕೆ ಪರೀಕ್ಷೆ ನಡೆಯಲಿದೆ.

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮುಂಬರುವ 2023 ಮಾರ್ಚ್‌/ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ಪ್ರಕ್ರಿಯೆ ಮಾರ್ಗಸೂಚಿಯನ್ನು ಪ್ರಕಟಿಸಿದೆ.

ಈ ಬಾರಿ ಪೂರ್ಣ ಪ್ರಮಾಣದಲ್ಲಿ ತರಗತಿಗಳು ನಡೆಯುತ್ತಿರುವ ಕಾರಣ ಶೇ.75 ಹಾಜರಾತಿ  ಕಡ್ಡಾಯಗೊಳಿಸಿದೆ. ಭೌತಿಕ ತರಗತಿಗಳು ನಡೆಯುತ್ತಿರುವ ಕಾರಣ 2019-20ರ ಮಾದರಿಯಲ್ಲಿ ಪ್ರಶ್ನೆಪತ್ರಿಕೆ ಇರಲಿದೆ. ಪ್ರಶ್ನೆಪತ್ರಿಕೆ ಮಾದರಿ ಮತ್ತು ಕಠಿಣತೆ ಮಟ್ಟದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೇ ಯಥಾವತ್‌ ಅಳವಡಿಸಿಕೊಳ್ಳಲಾಗಿದೆ. ಎಂಸಿಕ್ಯು ಬದಲಾಗಿ ವಿಸ್ತೃತವಾಗಿ ಉತ್ತರ ಬರೆಯುವ ಪ್ರಶ್ನೆಪತ್ರಿಕೆ ಇರಲಿದೆ.

ಪರೀಕ್ಷೆಗೆ ಪರಿಷ್ಕೃತ ಪಠ್ಯಕ್ರಮ: ಮುಖ್ಯ ಪರೀಕ್ಷೆಗೆ ಪರಿಷ್ಕೃತ ಪಠ್ಯವನ್ನು ಅಳವಡಿಸಿಕೊಳ್ಳಲಾಗಿದೆ. 2020-21ಕ್ಕಿಂತ ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾಗಿರುವ ಪುನರಾವರ್ತಿತ ಅಭ್ಯರ್ಥಿಗಳು ಮತ್ತು ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳು ಪ್ರಸಕ್ತ ಸಾಲಿನಲ್ಲಿ ಪರಿಷ್ಕರಣೆಯಾಗಿರುವ ಪೂರ್ಣ ಪಠ್ಯಗಳನ್ನು ಅಭ್ಯಾಸ ಮಾಡಿ ಪರೀಕ್ಷೆಗೆ ಹಾಜರಾಗಬೇಕು. 2020-21 ಮತ್ತು 2021-22ನೇ ಸಾಲಿನಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳಾಗಿದ್ದವರು ಪ್ರಥಮ ಪ್ರಯತ್ನದಲ್ಲಿ ಅನುತ್ತೀರ್ಣರಾಗಿದ್ದರೆ, ಈ ಬಾರಿಯೂ ಹಿಂದಿನ ವರ್ಷದ ಪಠ್ಯಕ್ರಮವನ್ನೇ ಪರೀಕ್ಷೆಗೆ ಅಭ್ಯಾಸ ಮಾಡಬೇಕು ಎಂದು ತಿಳಿಸಿದೆ.

ಸ್ಯಾಟ್ಸ್‌ ಮಾಹಿತಿ ಕಡ್ಡಾಯ: ಈ ಬಾರಿಯಿಂದ ಹೊಸದಾಗಿ ವಿದ್ಯಾರ್ಥಿಗಳ ನೋಂದಣಿಯಲ್ಲಿ ಸ್ಟೂಡೆಂಟ್ಸ್‌ ಅಚೀವ್‌ಮೆಂಟ್ಸ್‌ ಟ್ರ್ಯಾಕಿಂಗ್‌ ಸಿಸ್ಟಂ (ಸ್ಯಾಟ್ಸ್‌) ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ಸೂಚಿಸಿದೆ. ಪರೀಕ್ಷೆ ಶುಲ್ಕವನ್ನು ಹಿಂದಿನ ವರ್ಷ ಪಡೆದಿದ್ದ 607 ರೂ. ಶುಲ್ಕವನ್ನೇ ಈ ವರ್ಷವೂ ಮುಂದುವರಿಸಿದೆ.

ಮುಂದಿನ ವಾರದಿಂದ ನೋಂದಣಿ: ಪರೀಕ್ಷೆಗೆ ಸಂಬಂಧಿಸಿದ ದಾಖಲೆಗಳನ್ನು ವಿದ್ಯಾರ್ಥಿಗಳು ಸಿದ್ಧಪಡಿಸಿಕೊಳ್ಳಲು ಅನುವಾಗಲಿ ಎಂಬ ಉದ್ದೇಶದಿಂದ ಪರೀಕ್ಷಾ ಅಧಿಸೂಚನೆ ಹೊರಡಿಸಲಾಗಿದೆ. ಮುಂದಿನ ವಾರದಿಂದ ಪರೀಕ್ಷಾ ನೋಂದಣಿ ಪ್ರಕ್ರಿಯೆ ಆರಂಭ ಮಾಡಲಾಗುತ್ತದೆ  ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್‌.ಎನ್‌. ಗೋಪಾಲಕೃಷ್ಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ರಥೋತ್ಸವ ಸಂಪನ್ನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ರಥೋತ್ಸವ ಸಂಪನ್ನ

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

ಸಾವಿನ ಮನೆಯಲ್ಲಿ ಬಿಜೆಪಿ ರಾಜಕೀಯ: ಶಾಸಕ ಖಾದರ್‌

ಸಾವಿನ ಮನೆಯಲ್ಲಿ ಬಿಜೆಪಿ ರಾಜಕೀಯ: ಶಾಸಕ ಖಾದರ್‌

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

1-asdadad

ಹಲವು ದಶಕಗಳ ನಂತರ ಮತ್ತೆ ಕಾಶ್ಮೀರದಲ್ಲಿ ನೆಲೆಸಳಿದ್ದಾಳೆ ಶಾರದೆ

ಆರ್‌ಟಿಇ ಶುಲ್ಕ ಮರು ಪಾವತಿಗೆ ಕ್ರಿಯಾ ಯೋಜನೆ ರೂಪಿಸಿದ ಶಿಕ್ಷಣ ಇಲಾಖೆ

ಆರ್‌ಟಿಇ ಶುಲ್ಕ ಮರು ಪಾವತಿಗೆ ಕ್ರಿಯಾ ಯೋಜನೆ ರೂಪಿಸಿದ ಶಿಕ್ಷಣ ಇಲಾಖೆ

1-a-dsd-s

ಮೈಸೂರಿನಲ್ಲಿ ಟೂರಿಸಂ ಸರ್ಕಿಟ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

1-sdsadadad

ಬಿಆರ್ ಎಸ್-ಜೆಡಿಎಸ್ ಮೈತ್ರಿ; ಚುನಾವಣೆ ಒಟ್ಟಾಗಿ ಎದುರಿಸುತ್ತೇವೆ: ಹೆಚ್ ಡಿಕೆ

MUST WATCH

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

udayavani youtube

ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್..! ಇವರ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ

udayavani youtube

ದಿನ7 | ಕಾಳರಾತ್ರಿ ದೇವಿ

ಹೊಸ ಸೇರ್ಪಡೆ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ರಥೋತ್ಸವ ಸಂಪನ್ನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ರಥೋತ್ಸವ ಸಂಪನ್ನ

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.