ರೈತರು ರಾಸಾಯನಿಕ ಗೊಬ್ಬರಗಳ ಬದಲು ಸಾವಯವ ಹಾಗೂ ನ್ಯಾನೋ ಗೊಬ್ಬರ ಬಳಸಿ: ಸದಾನಂದ ಗೌಡ

2023 ರೊಳಗೆ ರಸಗೊಬ್ಬರ ಉತ್ಪಾದನೆಯಲ್ಲಿ ಭಾರತ ಸ್ವಾವಲಂಬಿಯಾಗಲಿದೆ

Team Udayavani, Sep 12, 2020, 7:30 PM IST

sadananada-gowda

ಬೆಂಗಳೂರು: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಆಶಯದಂತೆ ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ರೈತರು ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಹಾಗೂ ನ್ಯಾನೋ ಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಶ್ರೀ ಡಿ. ವಿ. ಸದಾನಂದ ಗೌಡ ಹೇಳಿದ್ದಾರೆ.

ಕರ್ನಾಟಕದ ರೈತರು ಮತ್ತು ಸಹಕಾರಿಗಳನ್ನು ಉದ್ದೇಶಿಸಿ ಇಂದು ವೆಬಿನಾರ್ ನಲ್ಲಿ ಮಾತನಾಡಿದ ಸಚಿವರು ರೈತರು ಮಣ್ಣಿನ ಆರೋಗ್ಯ ಕಾರ್ಡ್ ಅನ್ನು ಸಮರ್ಥವಾಗಿ ಉಪಯೋಗಿಸಿಕೊಳ್ಳಬೇಕು ಎಂದರು. ಮಣ್ಣಿನ ಆರೋಗ್ಯ ಕಾರ್ಡ್ ಮುಖಾಂತರ ಯಾವ ಭೂಮಿಗೆ ಯಾವ ಪೋಷಕಾಂಶದ ಅವಶ್ಯಕತೆ ಇದೆ ಎಂಬುದನ್ನು ಪತ್ತೆ ಮಾಡಿ, ರಸ ಗೊಬ್ಬರಗಳನ್ನು ಬಳಕೆ ಮಾಡಬೇಕು. ಇದರಿಂದಾಗಿ ಅನವಶ್ಯಕವಾಗಿ ಬಳಸುವ ರಸಗೊಬ್ಬರಗಳನ್ನು ಕಡಿಮೆ ಮಾಡಬಹುದು ಎಂದು ಅವರು ಹೇಳಿದರು.

ರಸಗೊಬ್ಬರಗಳ ಬಳಕೆಯ ಬದಲು ಸಾವಯವ ಹಾಗೂ ನ್ಯಾನೋ ಗೊಬ್ಬರ ಬಳಸುವುದರಿಂದ ರೈತರಿಗೆ ಖರ್ಚು ಕಡಿಮೆಯಾಗುತ್ತದೆ ಹಾಗೂ ಮಣ್ಣಿ ಆರೋಗ್ಯ ಹೆಚ್ಚುತ್ತದೆ. ಈ ಗೊಬ್ಬರ ವಿಧಾನಕ್ಕೆ ಹೆಚ್ಚು ಪ್ರೋತ್ಸಾಹ ನೀಡುವಂತೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಸೂಚಿಸಿದ್ದಾರೆ. ಪ್ರಧಾನ ಮಂತ್ರಿಯವರ ಆತ್ಮನಿರ್ಭರ ದೃಷ್ಟಿಕೋನಕ್ಕೆ ತಕ್ಕಂತೆ ರಸಗೊಬ್ಬರಗಳ ಉತ್ಪಾದನೆಯನ್ನು ದೇಶೀಯವಾಗಿ ಹೆಚ್ಚಿಸಲು ಮತ್ತು ಸುಸ್ಥಿರ ಕೃಷಿಯನ್ನು ಪ್ರೋತ್ಸಾಹಿಸಲು ಇಫ್ಕೋ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ಹೇಳಿದರು.

ರಾಸಾಯನಿಕ ರಸಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಿ, ಮಣ್ಣಿನ ಆರೋಗ್ಯವನ್ನುಹೆಚ್ಚಿಸುವ ಹಾಗೂ ಉತ್ತಮ ಇಳುವರಿಗೆ ಕಾರಣವಾಗುವ ನ್ಯಾನೋ ತಂತ್ರಜ್ಞಾನದ ಬೆಳೆ ಪೋಷಕಾಂಶ ನಿರ್ವಹಣೆ ಮತ್ತು ನ್ಯಾನೋ ಗೊಬ್ಬರಗಳಂತಹ ಉಪಕ್ರಮಗಳನ್ನು ಇಫ್ಕೋ ಅಭಿವೃದ್ಧಿಪಡಿಸಿದೆ ಎಂದು ಅವರು ಹೇಳಿದರು.

2023ರ ವೇಳೆಗೆ ರಸಗೊಬ್ಬರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವಂತೆ ಪ್ರಧಾನಿಯವರು ಸ್ಪಷ್ಟ ಸೂಚನೆ ಕೋಟ್ಟಿದ್ದಾರೆ. ಪ್ರಸ್ತುತ ಶೇ. 70 ರಷ್ಟು ರಸಗೊಬ್ಬರ ದೇಶೀಯವಾಗಿ ಉತ್ಪಾದನೆಯಾಗುತ್ತಿದ್ದು ಉಳಿದ ಶೇ. 30 ರಷ್ಟು ರಸಗೊಬ್ಬರವೂ ದೇಶೀಯವಾಗಿಯೇ ಉತ್ಪಾದನೆಯಾಗುವತ್ತ ಗಮನ ಕೇಂದ್ರೀಕರಿಸಿದ್ದು, ಸ್ಥಗಿತಗೊಂಡಿದ್ದ ನಾಲ್ಕು ರಸಗೊಬ್ಬರ ಉತ್ಪಾದನಾ ಘಟಕಗಳನ್ನು 40, 000 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲಾಗುತ್ತಿದೆ ಎಂದು ಸಚಿವ ಶ್ರೀ ಸದಾನಂದ ಗೌಡ ತಿಳಿಸಿದರು.

ಪ್ರಧಾನಿಯವರ ‘ಸ್ಥಳೀಯತೆಗೆ ಆದ್ಯತೆ’ ಗೆ ಅನುಗುಣವಾಗಿ ನೈಸರ್ಗಿಕವಾಗಿ ಬೆಳೆಯುವ ಸಮುದ್ರ ಕಳೆಯ ಬೆಳವಣಿಗೆ ಹೆಚ್ಚಿಸುವ ‘ಸಾಗರಿಕಾ’, ಜೈವಿಕ ಗೊಬ್ಬರಗಳು, ನೀಮ್ ಕೇಕ್, ಜೈವಿಕ ಕ್ರಿಮಿನಾಶಕಗಳು ಮತ್ತು ನೈಸರ್ಗಿಕ ಪೊಟಾಷ್ ಬಳಕೆಯಂತಹ ಪರಿಸರ ಸ್ನೇಹಿ ಅಭ್ಯಾಸಗಳನ್ನು ಇಫ್ಕೋ ಪ್ರೋತ್ಸಾಹಿಸುತ್ತಿದೆ. ಇದು ಪ್ರಶಂಸನೀಯವಾದುದು ಎಂದು ಅವರು ತಿಳಿಸಿದರು.

ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ಸರ್ಕಾರದ ಕ್ರಮದ ಭಾಗವಾಗಿ, ಸಂಶೋಧನೆ, ಪರೀಕ್ಷೆ, ತಂತ್ರಜ್ಞಾನ ವರ್ಗಾವಣೆ ಮತ್ತು ದೇಶಾದ್ಯಂತ ಯೋಜನೆಗಳ ವಿಸ್ತರಣೆಗಾಗಿ ಇಫ್ಕೋ ಐ ಸಿ ಎಂ ಆರ್ ನೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಮಾಡಿದೆ. ಡಿಜಿಟಲ್ ಇಂಡಿಯಾವನ್ನು ಬೆಂಬಲಿಸಲು, ನಗದು ರಹಿತ ವಹಿವಾಟು ನಡೆಸಲು ರೈತರಿಗಾಗಿ www.iffcobazar.in  ಎಂಬ ಡಿಜಿಟಲ್ ವೇದಿಕೆಯನ್ನು ಇಫ್ಕೋ ಆರಂಭಿಸಿದೆ. ಗ್ರಾಮ ಮಟ್ಟದ ಉದ್ಯಮಿ (ವಿಎಲ್ಇ) ಗಳ ಮೂಲಕ  ಇಫ್ಕೊ ಮತ್ತು ಸಿ ಎಸ್ ಸಿ (ಸಾಮಾನ್ಯ ಸೇವಾ ಕೇಂದ್ರಗಳು) ಸಹಯೋಗವು ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರ ಕೃಷಿ ಅಗತ್ಯಗಳನ್ನು ಪೂರೈಸುತ್ತದೆ. ಉತ್ಪಾದಕತೆ ಮತ್ತು ಮೌಲ್ಯವರ್ಧನೆಯನ್ನು ಹೆಚ್ಚಿಸುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸುವಲ್ಲಿ ಸಾವಯವ ಮೌಲ್ಯ ಸರಪಳಿಯನ್ನು ಸೃಷ್ಟಿಸಲು ಇಫ್ಕೊ “ಸಿಕ್ಕಿಂ ಇಫ್ಕೋ ಆರ್ಗಾನಿಕ್ಸ್” ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದರು.

ಕೋವಿಡ್-19 ಸಾಂಕ್ರಾಮಿಕದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ರೋಗದ ನಿಗ್ರಹಕ್ಕಾಗಿ ಇಫ್ಕೋ ದೇಶಾದ್ಯಂತ ಅಭಿಯಾನ ಕೈಗೊಂಡಿದೆ. ಮುಖಗವಸುಗಳು, ಸ್ಯಾನಿಟೈಸರ್, ವಿಟಮಿನ್ ಸಿ ಮಾತ್ರೆಗಳನ್ನು ರೈತ ಸಮುದಾಯಕ್ಕೆ ವಿತರಿಸಿದೆ ಎಂದು ಸಚಿವರು ತಿಳಿಸಿದರು.

ಇಫ್ಕೋ ಆಯೋಜಿಸಿದ್ದ ವೆಬಿನಾರ್ ನಲ್ಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಯು ಎಸ್ ಅವಸ್ಥಿ ಉಪಸ್ಥಿತರಿದ್ದರು.

ಕರ್ನಾಟಕದ ಎಲ್ಲ ಭಾಗಗಳಿಂದ ಸುಮಾರು 1500 ರೈತರು ವೆಬಿನಾರ್ ನಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.