
20 ವರ್ಷಗಳಲ್ಲೇ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿ: ಆರಗ
Team Udayavani, Sep 20, 2022, 4:54 PM IST

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಪೊಲೀಸ್ ಇಲಾಖೆಯಲ್ಲಿ ಕಳೆದ ಇಪ್ಪತ್ತು ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹುದ್ದೆಗಳು ಖಾಲಿಯಿದ್ದು, ಈ ವರ್ಷ ಸುಮಾರು 5000 ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ, ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಶಾಂತಿ ಸೌಹಾರ್ದ ಕಾಪಾಡುವ ಹೊಣೆ ಹೊತ್ತಿರುವ ಇಲಾಖೆಯಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆದ್ಯತೆ ಮೇಲೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಜನಸಂಘ ಕಾಲದ ಉಡುಪಿ ನಗರಸಭೆಯನ್ನು ಕೊಂಡಾಡಿದ ಪ್ರಧಾನಿ ಮೋದಿ
ಕಳೆದ ಮೂರು ವರ್ಷಗಳ ಹಿಂದೆ ಇಲಾಖೆಯಲ್ಲಿ ಒಟ್ಟು 22000 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ನಂತರ ಖಾಲಿ ಹುದ್ದೆಗಳ ಸಂಖ್ಯೆ ಪ್ರಸ್ತುತ 9000 ಇದೆ. ಈ ವರ್ಷ, ಸುಮಾರು 3500 ಸಶಸ್ತ್ರ ಪೊಲೀಸರ, ಹೊಸ ಹುದ್ದೆಗಳ ಭರ್ತಿಗೆ ಈಗಾಗಲೇ ನೋಟಿಫಿಕೇಶನ್ ಹೊರಡಿಸಲಾಗಿದೆ ಹಾಗೂ ಇನ್ನೂ 1500 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ, ಪ್ರಕಟಣೆ ಹೊರಡಿಸಲಾಗುವುದು ಎಂದು ಸಚಿವರು ತಿಳಿಸಿದರು.
ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡುವುದರ ಜತೆಗೆ, ಠಾಣೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, ಸಹ ಅಗತ್ಯ ಕ್ರಮ ಕೈಗೊಳ್ಳಲಾಗಿದೆ, ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
