ಮಾನನಷ್ಟ ಕೇಸ್‌ ಹಾಕಲಿ, ನೋಡ್ಕೊಳ್ತೇನೆ; ಬಿಎಸ್‌ವೈಗೆ ಸಿಎಂ ಸವಾಲು 

Team Udayavani, Sep 6, 2018, 3:48 PM IST

ರಾಮನಗರ : ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿ ಯೂರಪ್ಪ ಪುತ್ರ ವಿಜಯೇಂದ್ರ ಆದಾಯ ತೆರಿಗೆ ಇಲಾಖೆಯ ಮುಖ್ಯ ಆಯುಕ್ತರನ್ನು ಭೇಟಿ ಮಾಡಿದ್ದಾರೆ ಎಂಬ ವಿಚಾರದಲ್ಲಿ  ಆರೋಪ- ಪ್ರತ್ಯಾರೋಪಗಳು ಮುಂದುವರಿದ್ದಿದ್ದು , ಮಾನನಷ್ಟ ಮೊಕದ್ದಮೆ ಹಾಕಿದರೆ ನೋಡಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬುಧವಾರ ಸವಾಲು ಹಾಕಿದ್ದಾರೆ.

ಕುಮಾರಸ್ವಾಮಿ ಅವರ ಆರೋಪದ ವಿರುದ್ದ ಕಿಡಿ ಕಾರಿರುವ ಯಡಿಯೂರಪ್ಪ ಅವರು ಹೇಳಿಕೆಯ ಕುರಿತು ಸಿಎಂ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ  ಮಾನನಷ್ಟ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಎಚ್ಚರಿಕೆ ನೀಡಿದ್ದರು.ಮಾತ್ರವಲ್ಲದೆ ಅಧಿಕಾರಿಯನ್ನು ಭೇಟಿಯಾಗಿರುವುದನ್ನು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೇಳಿದ್ದರು. 

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಏನು ನಷ್ಟವಾಗಿದೆ ? ಅದನ್ನು ಹಾಕಿಕೊಳ್ಳಲಿ.ಯಾವ ನಷ್ಟ ಬೇಕಾದರೂ ಹಾಕಿಕೊಳ್ಳಲಿ. ನಾನು ಆ ಬಳಿಕ ಮಾತನಾಡುತ್ತೇನೆ ಎಂದಿದ್ದಾರೆ. 

ಅವರು ಐಟಿ ಅಧಿಕಾರಿಗಳನ್ನು ಬಳಸಿಕೊಂಡಿರುವುದಲ್ಲಿ ಸಂಶಯ ಇದೆಯಾ? ನಾನು ಕದ್ದು ಹೋಗುವುದಿಲ್ಲ, ಪಲಾಯನ ಮಾಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. 

ಈಗಾಗಲೇ ಯಾವುದೇ ರಾಜಕೀಯ ನಾಯಕರ ಕುಟುಂಬ ಸದಸ್ಯರು ನಮ್ಮ ಇಲಾಖೆಯ ಮುಖ್ಯ ಆಯುಕ್ತರನ್ನು ಭೇಟಿಯಾಗಿಲ್ಲ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ