ಅಬಕಾರಿ ಇಲಾಖೆಯಲ್ಲೂ ನೇರ ನೇಮಕಾತಿ ಮೂಲಕ ಭರ್ತಿ

Team Udayavani, Dec 12, 2018, 6:00 AM IST

z-10.jpg

ವಿಧಾನಸಭೆ: ಅಬಕಾರಿ ಇಲಾಖೆಯ ನಾನಾ ವೃಂದಗಳಲ್ಲಿ 5485 ಮಂಜೂರಾದ ಹುದ್ದೆ ಪೈಕಿ 2584 ಹುದ್ದೆ ಖಾಲಿಯಿದ್ದು, ಬಡ್ತಿ
ಹಾಗೂ ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
ಬಿಜೆಪಿಯ ಅಪ್ಪಚ್ಚು ರಂಜನ್‌ ಪ್ರಶ್ನೆಗೆ ಉತ್ತರಿಸಿದ ಅವರು, 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ ನೇಮಕಾತಿ ಪ್ರಕ್ರಿಯೆಯಲ್ಲಿ ಅಬಕಾರಿ ಉಪ ಅಧೀಕ್ಷಕರ 6 ಹುದ್ದೆಗಳಿಗೆ ಕೆಪಿಎಸ್‌ಸಿ ಅಂತಿಮ ಆಯ್ಕೆ ಪಟ್ಟಿ ಹೊರಡಿಸಿತ್ತು. ತಕರಾರಿನ ಹಿನ್ನೆಲೆಯಲ್ಲಿ
ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ಅಂತಿಮ ತೀರ್ಮಾನ ನಿರೀಕ್ಷಿಸಲಾಗಿದೆ. 2017ರ ಸಾಲಿನ ಗೆಜೆಟೆಡ್‌ ಪ್ರೊಬೆಷನರ್
ನೇಮಕಾತಿ ಪ್ರಕ್ರಿಯೆಯಲ್ಲಿ ಅಬಕಾರಿ ಉಪನಿರೀಕ್ಷಕರ 5 ಹುದ್ದೆಗಳಿಗೆ ಆಯೋಗ ಲಿಖೀತ ಪರೀಕ್ಷೆ ನಡೆಸಿದೆ ಎಂದು ಮಾಹಿತಿ ನೀಡಿದರು.

ಅಬಕಾರಿ ಉಪ ನಿರೀಕ್ಷಕರ 177 ಹುದ್ದೆಗಳಿಗೆ ಆಯೋಗ ತಾತ್ಕಾಲಿಕ ಪಟ್ಟಿ ಪ್ರಕಟಿಸಿ 59 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಹೊರಡಿಸಿದೆ. ಅಬಕಾರಿ ಆರಕ್ಷಕರ 1003 ಹುದ್ದೆಗಳಿಗೆ ಆಯೋಗ ತಾತ್ಕಾಲಿಕ ಪಟ್ಟಿ ಪ್ರಕಟಿಸಿದೆ. ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ
ನೇತೃತ್ವದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ವಾಹನ ಚಾಲಕರ ವೃಂದದಲ್ಲಿ ಖಾಲಿಯಿರುವ 183 ಹುದ್ದೆಗಳನ್ನು ನೇರ
ನೇಮಕಾತಿ ಮೂಲಕ ಭರ್ತಿ ಮಾಡುವಂತೆ ಕ್ರಮ ಕೈಗೊಳ್ಳಲಾಗಿದೆ. ಬಿ.ಕೆ.ಪವಿತ್ರಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಂದಿನ
ನಿರ್ದೇಶನದವರೆಗೆ ಮುಂಬಡ್ತಿ/ಹಿಂಬಡ್ತಿ ಪ್ರಕ್ರಿಯೆ ಜರುಗಿಸದೆ ಯಥಾಸ್ಥಿತಿ ಕಾಪಾಡುವಂತೆ ಸೂಚಿಸಲಾಗಿದೆ. ಆ ಹಿನ್ನೆಲೆಯಲ್ಲಿ
ಮುಂಬಡ್ತಿ ಪ್ರಕ್ರಿಯೆ ಸ್ಥಗಿತಗೊಂಡಿದೆ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಇಲಾಖೆಗೆ ಹೆಚ್ಚು ಆದಾಯ ಸಂಗ್ರಹದಲ್ಲಿ ನೆರವಾಗುವ ಅಬಕಾರಿ ಆರಕ್ಷಕರಿಗೆ 25, 30 ವರ್ಷ ಸೇವಾವಧಿ ಪೂರ್ಣಗೊಳಿಸಿದರೂ ಬಡ್ತಿ ನೀಡದಿರುವ ಬಗ್ಗೆ
ಪ್ರಸ್ತಾಪಿಸಿದರು. ಈ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

“ಕುಳಿತು ಚರ್ಚಿಸೋಣ’
ರಾಜ್ಯದಲ್ಲಿ ಮದ್ಯ ನಿಷೇಧಿಸುವ ಚಿಂತನೆ ಸರ್ಕಾರಕ್ಕಿದೆಯೇ ಎಂದು ಬಿಜೆಪಿಯ ಅಪ್ಪಚ್ಚು ರಂಜನ್‌ ಕೇಳಿದಾಗ ಸಭಾಧ್ಯಕ್ಷ 
ಕೆ.ಆರ್‌.ರಮೇಶ್‌ ಕುಮಾರ್‌, ಈ ಬಗ್ಗೆ ಸಂಜೆ ಕುಳಿತು ಚರ್ಚಿಸೋಣ ಎಂದು ಹಾಸ್ಯಚಟಾಕಿ ಹಾರಿಸಿದರು. ಇದಕ್ಕೆ ದನಿಗೂಡಿಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾವಿಮ, ಅಪ್ಪಚ್ಚು ರಂಜನ್‌ ಅವರ ಮಾತನ್ನು ಮಡಿಕೇರಿಯವರು ಕೇಳಿಸಿಕೊಂಡರೆ ಅವರಿಗೆ ತೊಂದರೆಯಾಗಬಹುದು ಎಂದು ಲಘು ಧಾಟಿಯಲ್ಲಿ ಹೇಳಿದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.