ಬಾಲಕಿಯ ಎಲುಬು, ಬಟ್ಟೆ ಪತ್ತೆ
Team Udayavani, Dec 14, 2019, 3:00 AM IST
ಅಫಜಲಪುರ: ತಾಲೂಕಿನ ಹಾವನೂರ ಗ್ರಾಮದಲ್ಲಿ ಡಿ.5ರಂದು ನಾಪತ್ತೆಯಾಗಿದ್ದ ಬಾಲಕಿ ಶ್ವೇತಾ ನಿಂಗಪ್ಪ ಪೂಜಾರಿಯ ಬಟ್ಟೆ, ತಲೆ ಬುರುಡೆ, ಕೈಕಾಲಿನ ಎಲುಬುಗಳು ಪತ್ತೆಯಾಗಿವೆ. ಬಾಲಕಿ ನಾಪತ್ತೆಯಾಗಿರುವ ಕುರಿತು ಪೋಷಕರು ದೇವಲ ಗಾಣಗಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಶುಕ್ರವಾರ ಬೆಳಗಿನ ಜಾವ ಹಾವನೂರ ಗ್ರಾಮದಿಂದ 1.5 ಕಿ.ಮೀ. ದೂರದಲ್ಲಿ ಶರಣಬಸಪ್ಪ ಇನಾಮದಾರ ಅವರ ಹೊಲದಲ್ಲಿ ಬಾಲಕಿಯ ಬಟ್ಟೆ, ತಲೆ ಬುರುಡೆ, ಕೈಕಾಲಿನ ಎಲುಬುಗಳು ಪತ್ತೆಯಾಗಿವೆ. ಬಟ್ಟೆಯ ಆಧಾರದ ಮೇಲೆ ತನ್ನ ಮಗಳೆಂದು ತಂದೆ ನಿಂಗಪ್ಪ ಪೂಜಾರಿ ಗುರುತಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಹೆಚ್ಚಿನ ತನಿಖೆಗಾಗಿ ತಲೆ ಬುರುಡೆ, ಎಲುಬುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…