ರಾಜ್ಯದಲ್ಲಿ ಹೊಸದಾಗಿ ಐದು ಉಗ್ರ ನಿಗ್ರಹ ಘಟಕ

Team Udayavani, Feb 16, 2019, 12:00 AM IST

9.jpg

ಬೆಂಗಳೂರು: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಮೇಲೆ ಐಸಿಸ್‌ ಹಾಗೂ ಇತರೆ ಉಗ್ರ ಸಂಘಟನೆಗಳು ಕಣ್ಣಿಟ್ಟಿವೆ ಎಂಬ ಸ್ಫೋಟಕ ಮಾಹಿತಿಗಳ ಬೆನ್ನಲ್ಲೇ ರಾಜ್ಯ ಪೊಲೀಸ್‌ ಇಲಾಖೆ ಭಯೋತ್ಪಾದನಾ ಚಟುವಟಿಕೆಗಳು, ಶಂಕಿತ ಉಗ್ರರ ಚಲನವಲನಗಳ ಮೇಲೆ ತೀವ್ರ ನಿಗಾ ವಹಿಸಲು ಹೊಸದಾಗಿ ಐದು ಉಗ್ರ ನಿಗ್ರಹ ಘಟಕ (ಎಟಿಎಸ್‌)ಗಳನ್ನು ಸ್ಥಾಪಿಸಲು ನಿರ್ಧರಿಸಿದೆ.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ -ಧಾರವಾಡ, ಬೆಳಗಾವಿ ಪೊಲೀಸ್‌ ಆಯುಕ್ತರ ವಲಯಗಳ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ಗಳಲ್ಲಿ ಪ್ರತ್ಯೇಕವಾಗಿ ಎಟಿಎಸ್‌ ಘಟಕಗಳು ತಿಂಗಳಾಂತ್ಯಕ್ಕೆ ಅಸ್ತಿತ್ವಕ್ಕೆ ಬರಲಿವೆ ಎಂದು ವಿಶ್ವಸನೀಯ ಮೂಲಗಳು “ಉದಯವಾಣಿ’ಗೆ ತಿಳಿಸಿವೆ. ಉಗ್ರ ಚಟುವಟಿಕೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲು ರಾಜ್ಯ ಆಂತರಿಕ ಭದ್ರತಾ ದಳಕ್ಕೆ (ಐಎಸ್‌ಡಿ) ಸಾಥ್‌ ನೀಡಲಿವೆ.

ಎಟಿಎಸ್‌ ಘಟಕಗಳನ್ನು ಸ್ಥಾಪಿಸಲು ಶೀಘ್ರವೇ ಅಗತ್ಯ ಕ್ರಮಗಳನ್ನು ವಹಿಸುವಂತೆ ರಾಜ್ಯ ಪೊಲೀಸ್‌ ಇಲಾಖೆ ಫೆ.7ರಂದು ಆಯಾ ವಲಯ ಪೊಲೀಸ್‌ ಕಮಿಷನರ್‌ಗಳಿಗೆ ಸುತ್ತೋಲೆ ಹೊರಡಿಸಿದೆ. ಈಗಾಗಲೇ ಬೆಂಗಳೂರು ಸಿಸಿಬಿ ವಿಭಾಗದಲ್ಲಿ ಎಟಿಎಸ್‌ ಕಾರ್ಯ ನಿರ್ವಹಿಸುತ್ತಿದೆ. ಎಸಿಪಿ ನೇತೃತ್ವದಲ್ಲಿ ಎಟಿಎಸ್‌ ಕಾರ್ಯ ನಿರ್ವಹಿಸಲಿದ್ದು, ಈ ತಂಡ ಸಂಪೂರ್ಣವಾಗಿ ಉಗ್ರ ಚಟುವಟಿಕೆಗಳ ಮೇಲೆಯೇ ನಿಗಾವಹಿಸಲಿದೆ. ಜತೆಗೆ, ಗುಪ್ತಚರ ಇಲಾಖೆಗೂ ಕಾಲಕಾಲಕ್ಕೆ ನಿಖರ ಮಾಹಿತಿ ಲಭ್ಯವಾಗಲಿದೆ. ಈ ಉದ್ದೇಶದಿಂದ ಎಟಿಎಸ್‌ ಸ್ಥಾಪನೆಯ ನಿರ್ಣಯ ಕೈಗೊಳ್ಳಲಾಗಿದೆ. ಮುಂಬೈ ಮತ್ತು ಪುಣೆ ಎಟಿಎಸ್‌ ಮಾದರಿಯಲ್ಲಿ ಇನ್ನು ಉಗ್ರ ನಿಗ್ರಹ ದಳಗಳನ್ನು ಬಲಪಡಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ರಾಜ್ಯ ಎಚ್ಚೆತ್ತುಕೊಳ್ಳಲು ಕಾರಣ ಏನು?: ಕಳೆದ ಮೂರು ವರ್ಷಗಳ ಅವಧಿಯಲ್ಲಿ ಎನ್‌ಐಎ ಅಧಿಕಾರಿಗಳು ಬೆಂಗಳೂರು ಚರ್ಚ್‌ಸ್ಟ್ರೀಟ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಆಲಂ ಜೆಬ್‌ ಆಫ್ರಿದಿ, ಐಸಿಸ್‌ ಶಂಕಿತ ಉಗ್ರರು, ಜೆಎಂಬಿ ಉಗ್ರ ಕೌಸರ್‌ನನ್ನು ಬಂಧಿಸಿದ್ದಾರೆ. ಇತ್ತೀಚೆಗಷ್ಟೇ ಕರ್ನಾಟಕದ ಹಲವು ಯುವಕರು ಉಗ್ರ ಸಂಘಟನೆ ಸೇರಿರುವ ಬಗ್ಗೆಯೂ ಎನ್‌ಐಎ ತಿಳಿಸಿತ್ತು. ಹಲವು ಉಗ್ರರು ರಾಜ್ಯವನ್ನು ಅಡಗುತಾಣವನ್ನಾಗಿ ಮಾಡಿಕೊಂಡ ವಿಚಾರ ಇಲಾಖೆಯ ನಿದ್ದೆಗೆಡಿಸಿತ್ತು. ಜತೆಗೆ, ರಾಜಧಾನಿ ಬೆಂಗಳೂರು ಹಾಗೂ ಹೊರವಲಯದ ಪ್ರದೇಶಗಳು ಉಗ್ರರ ಸ್ಲಿàಪರ್‌ ಸೆಲ್‌ಗ‌ಳಾಗುತ್ತಿವೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿದ್ದವು.

ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಪೊಲೀಸ್‌ ಇಲಾಖೆ, ಜೆಎಂಬಿ ಉಗ್ರ ಕೌಸರ್‌ ಬಂಧನದ ಬಳಿಕ ಕೇರಳ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳ ಡಿಜಿಗಳ ಜತೆ ಸಭೆ ನಡೆಸಿ ದಕ್ಷಿಣ ಭಾರತದಲ್ಲಿ ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸುದೀರ್ಘ‌ ಚರ್ಚೆ ನಡೆಸಿತ್ತು. ಈ ಚರ್ಚೆಯ ಭಾಗವಾಗಿ ರಾಜ್ಯದಲ್ಲಿ ಎಲ್ಲ ಕಮಿಷನರೇಟ್‌ ವ್ಯಾಪ್ತಿಗಳಲ್ಲಿಯೂ ಎಟಿಎಸ್‌ ಘಟಕಗಳನ್ನು ಸ್ಥಾಪಿಸುವ ಸಂಬಂಧ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಕಟ್ಟೆಚ್ಚರ 

ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ  ಮೊಹಮದ್‌ ಸಂಘಟನೆ ನಡೆಸಿದ ಭೀಕರ ಉಗ್ರ ಕೃತ್ಯದ
ಬೆನ್ನಲ್ಲೇ ರಾಜ್ಯ ಪೊಲೀಸ್‌ ಇಲಾಖೆಯೂ ಎಚ್ಚೆತ್ತುಕೊಂಡಿದೆ. ಕೇಂದ್ರ ಗೃಹ ಸಚಿವಾಲಯದಿಂದ ಎಲ್ಲಾ ರಾಜ್ಯಗಳಿಗೂ ಕಟ್ಟೆಚ್ಚರ ಸಂದೇಶ ರವಾನೆ ಕಳುಹಿಸಿದ್ದು, ರಾಜ್ಯದಲ್ಲೂ ಆಯಕಟ್ಟಿನ ಪ್ರದೇಶಗಳಲ್ಲಿ
ಹದ್ದಿನ ಕಣ್ಣಿಡಲಾಗಿದೆ.

ರಾಜ್ಯದಲ್ಲಿ ಯಾವುದೇ ರೀತಿಯ ಉಗ್ರ ಚಟುವಟಿಕೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು,
ಯಾವೆಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಶುಕ್ರವಾರ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆ ನಡೆದಿದೆ. ರಾಜ್ಯದಲ್ಲಿ ಈಗಾಗಲೇ ಸಾಕಷ್ಟು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಯಾವುದೇ ರೀತಿಯ ಶಂಕೆಯೂ ಇಲ್ಲ. ಆದರೂ, ಮತ್ತಷ್ಟು ಪರಿಣಾಮಕಾರಿಯಾಗಿ ಯಾವ ಕ್ರಮಗಳನ್ನು ಅನುಸರಿಸಬಹುದು ಎಂಬುದರ ಬಗ್ಗೆ ಸಭೆ ನಡೆಸಲಾಗಿದೆ ಎಂದು ಹೆಸರು ಹೇಳಲು ಇಚ್ಚಿಸಿದ ಅಧಿಕಾರಿಯೊಬ್ಬರು ತಿಳಿಸಿದರು. ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು ಸೇರಿದಂತೆ ಪ್ರಮುಖ ನಗರಗಳು, ರಾಜ್ಯದ ಎಲ್ಲಾ ವಿಮಾನ ನಿಲ್ದಾಣಗಳು ಮತ್ತು ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಲು ಪೊಲೀಸ್‌ ಇಲಾಖೆ ಸೂಚಿಸಿದೆ.

ಮಂಜುನಾಥ ಲಗುಮೇನಹಳ್ಳಿ 

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.