
ವಿಜಯೇಂದ್ರಗೆ ಕೊಕ್: ಬಿ.ಎಸ್. ಯಡಿಯೂರಪ್ಪ ನಡೆ ನಿಗೂಢ
Team Udayavani, May 25, 2022, 7:20 AM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ವಿಧಾನ ಪರಿಷತ್ ಟಿಕೆಟ್ ಕೈ ತಪ್ಪಿದ್ದು, ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ವಿಜಯೇಂದ್ರಗೆ ಟಿಕೆಟ್ ನಿರಾಕರಣೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಕುಟುಂಬ ರಾಜಕಾರಣಕ್ಕೆ ಬೆಂಬಲ ನೀಡುವುದಿಲ್ಲ ಎನ್ನುವ ತನ್ನ ನಿರ್ಧಾರವನ್ನು ಮತ್ತೆ ಪ್ರಕಟಿಸುವ ಕೆಲಸ ಮಾಡಿದೆ.
ಹಲವು ರೀತಿ ವ್ಯಾಖ್ಯಾನ
ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಅಧಿಕೃತವಾಗಿ ಚರ್ಚಿಸಿ ಹೈಕಮಾಂಡ್‌ಗೆ ಹೆಸರು ಕಳುಹಿಸಿದ್ದರೂ, ಪಕ್ಷದ ಹೈಕಮಾಂಡ್ ವಿಜಯೇಂದ್ರ ಅವರ ಹೆಸರನ್ನು ನಿರಾಕರಣೆ ಮಾಡಿರುವುದು ರಾಜ್ಯ ಬಿಜೆಪಿಯಲ್ಲಿ ಹಲವಾರು ರೀತಿಯ ವ್ಯಾಖ್ಯಾನಕ್ಕೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರನಿಗೆ ಏನಾದರೂ ಅಧಿಕಾರ ಕೊಡಿಸಬೇಕೆಂಬ ಕಾರಣಕ್ಕೆ ಅವರ ಹೆಸರು ಪರಿಷತ್ ಸಂಭಾವ್ಯರ ಪಟ್ಟಿಯಲ್ಲಿ ಬರುವಂತೆ ನೋಡಿಕೊಂಡಿದ್ದರು ಎನ್ನಲಾಗುತ್ತಿದೆ.
ನಿರಾಕರಣೆಗೆ ಕಾರಣ?
ಪಕ್ಷದ ಉನ್ನತ ಮೂಲಗಳ ಪ್ರಕಾರ ಬಿ.ವೈ. ವಿಜಯೇಂದ್ರ ಅವರಿಗೆ ಚುನಾವಣೆಯಲ್ಲಿ ನಿಂತು ಗೆದ್ದು ಬರುವ ಶಕ್ತಿ ಇದೆ. ಅಲ್ಲದೇ ಅವರಿಗೆ ರಾಜಕೀಯದಲ್ಲಿ ಇನ್ನೂ ಸಾಕಷ್ಟು ಅವಕಾಶಗಳು ದೊರೆಯಲಿವೆ ಎನ್ನುವ ಕಾರಣಕ್ಕೆ ಬಿಜೆಪಿ ಹೈಕಮಾಂಡ್ ಚುನಾವಣೆಯಲ್ಲಿ ಗೆಲ್ಲಲಾಗದ ವ್ಯಕ್ತಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅವರ ಹೆಸರನ್ನು ಕೈ ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರು ವಿಜಯೇಂದ್ರ ಅವರಿಗೆ ಸೋಮವಾರವೇ ಮಾಹಿತಿ ನೀಡಿ, ಟಿಕೆಟ್‌ಗಾಗಿ ಕಾಯದಂತೆ ಸೂಚನೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಶಿಕಾರಿಪುರದಿಂದ ವಿಜಯೇಂದ್ರ?
ಯಡಿಯೂರಪ್ಪ ಅವರಿಗೆ 80 ವರ್ಷ ವಯಸ್ಸಾಗುತ್ತಿರುವುದರಿಂದ ಅವರು ಪ್ರತಿನಿಧಿಸುವ ಶಿಕಾರಿಪುರ ಕ್ಷೇತ್ರದಿಂದಲೇ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಿ, ಅಲ್ಲಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಶೀತಲ ಸಮರದ ಮುನ್ಸೂಚನೆ
ಈ ಬೆಳವಣಿಗೆಯಿಂದ ಬಿ.ಎಸ್. ಯಡಿಯೂರಪ್ಪ ಬೇಸರಗೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಚಟುವಟಿಕೆಗಳಲ್ಲಿ, ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭ ಎಷ್ಟರ ಮಟ್ಟಿಗೆ ಸಕ್ರಿಯವಾಗಿ ತೊಡಗಿಕೊಳ್ಳುತ್ತಾರೆ ಎನ್ನುವ ಬಗ್ಗೆ ಬಿಜೆಪಿಯಲ್ಲಿ ಚರ್ಚೆಗಳು ನಡೆಯುತ್ತಿವೆ.
ವಿಜಯೇಂದ್ರ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್‌ನ ನಿರ್ಧಾರ ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಮತ್ತು ಪಕ್ಷದ ನಡುವಿನ ಶೀತಲ ಸಮರ ಮತ್ತಷ್ಟು ಬಿಗಡಾಯಿಸುವಂತೆ ಮಾಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳಾಗಿರುವ ಛಲವಾದಿ ನಾರಾಯಣಸ್ವಾಮಿ, ಲಕ್ಷ್ಮಣ ಸವದಿ, ಕೇಶವ ಪ್ರಸಾದ್, ಬಸವರಾಜ ಹೊರಟ್ಟಿ ಹಾಗೂ ಹೇಮಲತಾ ನಾಯಕ್ ಅವರಿಗೆ ಅಭಿನಂದನೆಗಳು. ಈ ಎಲ್ಲ ಅಭ್ಯರ್ಥಿಗಳು ಜಯಗಳಿಸಿ ವಿಧಾನ ಪರಿಷತ್ತಿನಲ್ಲಿ ಜನರ ಧ್ವನಿಯನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸುವೆ
– ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

ಕೆಂಪಣ್ಣ ಹೊಸ ಕಮಿಷನ್ ಬಾಂಬ್ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ

Kerala ಸರಕಾರದ ಆದೇಶ ಕಚೇರಿಗಳ ಫಲಕ ಮಲಯಾಳದಲ್ಲಿ- ಗಡಿನಾಡಿನ ಕನ್ನಡ ಫಲಕಗಳಿಗೆ ಕತ್ತರಿ ಆತಂಕ

Kukke Subrahmanya: ಡಿ. 10 – 24 ಕುಕ್ಕೆಯಲ್ಲಿ ಚಂಪಾಷಷ್ಠಿ ಮಹೋತ್ಸವ

Law: ನಾಳೆ ರಾಜ್ಯವ್ಯಾಪಿ ರಾಷ್ಟ್ರೀಯ ಲೋಕ ಅದಾಲತ್
MUST WATCH
ಹೊಸ ಸೇರ್ಪಡೆ

Politics: ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್,ಅರ್ಜುನ್ ಮುಂಡಾಗೆ ಹೆಚ್ಚುವರಿ ಖಾತೆ

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್ನಲ್ಲಿ ಏಳು ಮಾದರಿ ಪಾಸಿಟಿವ್

ಕೆಂಪಣ್ಣ ಹೊಸ ಕಮಿಷನ್ ಬಾಂಬ್ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ

Mangaluru: ಅತಿಥಿ ಉಪನ್ಯಾಸಕರ ಖಾಯಮಾತಿ ಆಗ್ರಹಿಸಿ ಪ್ರತಿಭಟನೆ