ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮಾಜಿ ಸಿಇಒ ಆತ್ಮಹತ್ಯೆ
Team Udayavani, Jul 7, 2020, 9:35 AM IST
ಬೆಂಗಳೂರು: ಗ್ರಾಹಕರ ಸಾವಿರಾರು ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಂಡಿದ್ದ ಆರೋಪದ ಮೇಲೆ ಎಸಿಬಿ ದಾಳಿಗೊಳಗಾಗಿದ್ದ ಬಸವನಗುಡಿಯ ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಾಸುದೇವಮಯ್ಯ ಅವರು ಸೋಮವಾರ ಸಂಜೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಬ್ರಹ್ಮಣ್ಯಪುರದ ಪೂರ್ಣಪ್ರಜ್ಞಾ ಲೇಔಟ್ನ ರಸ್ತೆಯಲ್ಲಿ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ಯಕ್ಕೆ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟತೆ ಇಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸರು ಹೇಳಿದರು.
ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್, ಸುಬ್ರಹ್ಮಣ್ಯಪುರ ಪೊಲೀಸರು, ವಿಧಿ ವಿಜ್ಞಾನ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಪ್ರಾಥಮಿಕ ವಿಚಾರಣೆಯಲ್ಲಿ ವಾಸುದೇವ ಮಯ್ಯ ಅವರು ಎಸಿಬಿ ತನಿಖೆ ಹಾಗೂ ಇತ್ತೀಚೆಗೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್