ಕುಂದಗೋಳ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್ ಮುಖಂಡ ಎಂ.ಎಸ್ ಅಕ್ಕಿ ಕಾಂಗ್ರೆಸ್ ಸೇರ್ಪಡೆ
Team Udayavani, Oct 22, 2020, 1:18 PM IST
ಬೆಂಗಳೂರು: ಜೆಡಿಎಸ್ ಮಾಜಿ ಶಾಸಕ ಎಂ.ಎಸ್.ಅಕ್ಕಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಕ್ಕಿ ಜೊತೆಗೆ ನೂರಾರು ಜೆಡಿಎಸ್ ಕಾರ್ಯಕರ್ತರು ಕೈ ಸೇರ್ಪಡೆಯಾಗಿದ್ದಾರೆ.
ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅಕ್ಕಿ ಶಾಸಕರಾಗಿ ನಮ್ಮ ಜೊತೆ ಕೆಲಸ ಮಾಡಿದ್ದರು. ನಮಗೆ ಸಾಕಷ್ಟು ಸಹಕಾರ ಮಾಡಿದ್ದರು. ಯಾವುದೇ ಕಂಡೀಷನ್ ಇಲ್ಲದೆ ಬಂದಿದ್ದಾರೆ. ತುಂಬಾ ಸಂಭಾವಿತ ಮನುಷ್ಯ. ದಿವಂಗತ ಶಿವಳ್ಳಿ ಹಾಗೂ ಅಕ್ಕಿ ಇಬ್ಬರೂ ಒಂದೇ ಊರಿನವರು. ಅಕ್ಕಿ ಜೊತೆ ತಾಲೂಕು ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ. ಇದು ಆ ಭಾಗದಲ್ಲಿ ಪಕ್ಷಕ್ಕೆ ಮತ್ತಷ್ಟು ಬಲತರಲಿದೆ ಎಂದರು.
ಕಾಂಗ್ರೆಸ್ ಸೇರ್ಪಡೆ ಬಳಿಕ ಮಲ್ಲಿಕಾರ್ಜುನ ಅಕ್ಕಿ ಮಾತನಾಡಿ, ನಾನು 1987ಕ್ಕೆ ರಾಜಕೀಯಕ್ಕೆ ಬಂದವನು. ಜೆಡಿಎಸ್ ಪಕ್ಷದಲ್ಲೇ ಶಾಸಕನಾಗಿದ್ದೆ. ಈಗ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡಯಾಗಿದ್ದೇನೆ. ನನ್ನ ಜೊತೆ ಬೆಂಬಲಿಗರೂ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳ ನಂಬಿ ಬಂದವನು. ಬಿಜೆಪಿಯನ್ನು ಎದುರಿಸುವ ಶಕ್ತಿ ಡಿಕೆಶಿಯವರಿಗಿದೆ. ಹಾಗಾಗಿಯೇ ಇಂದು ಕಾಂಗ್ರೆಸ್ ಸೇರಿದ್ದೇನೆ. ಸಿದ್ದರಾಮಯ್ಯನವರ ಜೊತೆಯೂ ಮಾತನಾಡಿದ್ದೇನೆ. ಬಹಳ ಖುಷಿಯಿಂದ ಅವರು ಬೆನ್ನು ತಟ್ಟಿದರು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಖರೀದಿದಾರರ ಕಣ್ಣಲ್ಲಿ ನೀರು!: ಮುಂಬೈ, ಪೂನಾದಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ…
ಆರ್.ಆರ್.ನಗರ ಹಲ್ಲೆ ಪ್ರಕರಣ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ಕೊಲೆಗಳಾಗುತ್ತವೆ ಅಂದಿದ್ದಾರೆ. ಅವರು ಏನು ಬೇಕಾದರೂ ಮಾಡಲಿ. ನಾವು ಕಾಂಗ್ರೆಸ್ ಕ್ಷೇತ್ರ ಮಾಡೋಕೆ ಹೊರಟಿದ್ದೇವೆ. ನಾವು ಜನರನ್ನ ನಂಬಿದವರು. ಎರಡೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ನೋಡುತ್ತಿರಿ ಎಂದರು.
ಇದನ್ನೂ ಓದಿ: ಅನಂತ ಪದ್ಮನಾಭಸ್ವಾಮಿ ದೇವಸ್ಥಾನದೊಳಗೆ ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ “ಬಬಿಯಾ” ಮೊಸಳೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ