ಮಾಜಿ ಶಾಸಕ ಉಮೇಶ್‌ ಭಟ್‌ ನಿಧನ

Team Udayavani, Aug 14, 2019, 3:03 AM IST

ಬೆಂಗಳೂರು: ಅಂಕೋಲಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಲೋಕಶಿಕ್ಷಣ ಟ್ರಸ್ಟ್‌ನ ಮಾಜಿ ಅಧ್ಯಕ್ಷರು, ಧರ್ಮದರ್ಶಿಗಳೂ ಆಗಿದ್ದ ಉತ್ತರ ಕನ್ನಡ ಜಿಲ್ಲೆಯ ಉಮೇಶ್‌ ಭಟ್‌ (72) ಮಂಗಳವಾರ ಸಂಜೆ ನಿಧನ ಹೊಂದಿದ್ದಾರೆ.

ಸ್ನೇಹಿತರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಎದೆನೋವು ಕಾಣಿಸಿ ಕೊಂಡಿದ್ದು ತಕ್ಷಣವೇ ನಗರದ ಕೆಸಿ ಜನರಲ್‌ ಆಸ್ಪತ್ರೆಗೆ ದಾಖಲಿಸ ಲಾಯಿತಾ ದರೂ ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆ  ಯುಸಿರೆಳೆದರು. ಉಮೇಶ್‌ ಭಟ್‌ ಅವರು ಪತ್ನಿ ಸವಿತಾ ಸೇರಿ ಅಪಾರ ಬಂಧು ಬಳಗ ಅಗಲಿದ್ದಾರೆ.

ಸ್ನೇಹಮಯಿ ವ್ಯಕ್ತಿತ್ವದ ಉಮೇಶ್‌ ಭಟ್‌, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೆರೆ ಗ್ರಾಮದವರು. 1989ರಲ್ಲಿ ಅಂಕೋಲಾ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದ್ದರು. ಕೆಪಿಸಿಸಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ