ಹೈಕೋರ್ಟ್ಗೆ ಇಂದಿನಿಂದ ಅ.5ರವರೆಗೆ ದಸರಾ ರಜೆ
Team Udayavani, Sep 30, 2019, 3:04 AM IST
ಬೆಂಗಳೂರು: ಹೈಕೋರ್ಟ್ಗೆ ಸೆ.30ರಿಂದ ಅ.5ರವರೆಗೆ ದಸರಾ ರಜೆ ಇರಲಿದೆ. ಈ ಅವಧಿಯಲ್ಲಿ ಬೆಂಗಳೂರು ಪ್ರಧಾನ ಪೀಠದಲ್ಲಿ ಅ.1 ಮತ್ತು ಧಾರವಾಡ, ಕಲಬುರಗಿ ನ್ಯಾಯಪೀಠಗಳಲ್ಲಿ ಅ.4ರಂದು ಒಂದು ದಿನ ರಜಾ ಕಾಲದ ವಿಶೇಷ ನ್ಯಾಯಪೀಠಗಳು ಕಾರ್ಯ ನಿರ್ವಹಿಸಲಿವೆ.
ಬೆಂಗಳೂರು ಪ್ರಧಾನ ಪೀಠದಲ್ಲಿ ಅ.1ರಂದು ರಜಾ ಕಾಲದ ವಿಶೇಷ ನ್ಯಾಯಪೀಠ ಕಾರ್ಯ ನಿರ್ವಹಿಸಲಿದ್ದು, ನ್ಯಾ.ಎಚ್.ಟಿ. ನರೇಂದ್ರಪ್ರಸಾದ್ ಹಾಗೂ ನ್ಯಾ.ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ನ್ಯಾ.ಎಚ್.ಟಿ. ನರೇಂದ್ರಪ್ರಸಾದ್, ನ್ಯಾ.ಎಚ್.ಪಿ.ಸಂದೇಶ್ ಹಾಗೂ ನ್ಯಾ.ಪಿಜಿಎಂ ಪಾಟೀಲ್ ಅವರುಗಳ ಏಕಸದಸ್ಯ ನ್ಯಾಯಪೀಠ ಕಾರ್ಯ ನಿರ್ವಹಿಸಲಿದೆ.
ಅದೇ ರೀತಿ, ಅ.4ರಂದು ಧಾರವಾಡ ಪೀಠದಲ್ಲಿ ನ್ಯಾ.ಬಿ.ಎ.ಪಾಟೀಲ್ ಹಾಗೂ ನ್ಯಾ.ಎಸ್.ಆರ್. ಕೃಷ್ಣಕುಮಾರ್ ಅವರ ವಿಭಾಗೀಯ ನ್ಯಾಯಪೀಠ ಹಾಗೂ ಅವರುಗಳ ಪ್ರತ್ಯೇಕ ಏಕಸದಸ್ಯ ನ್ಯಾಯಪೀಠ ಕಾರ್ಯ ನಿರ್ವಹಿಸಲಿದೆ. ಕಲರಬುರಗಿ ನ್ಯಾಯಪೀಠದಲ್ಲಿ ನ್ಯಾ. ಎನ್.ಕೆ. ಸುಧೀಂದ್ರರಾವ್ ಹಾಗೂ ನ್ಯಾ.ಸಚಿನ್ ಎಸ್.ಮಗದುಮ್ ಅವರ ನ್ಯಾಯಪೀಠಗಳು ಕಾರ್ಯ ನಿರ್ವಹಿಸಲಿವೆ ಎಂದು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?