BJP: ಇದು ಪೂರ್ವ ಜನ್ಮದ ಪುಣ್ಯ: ಬಿಜೆಪಿ ಸೇರ್ಪಡೆಯಾದ ಜನಾರ್ದನ ರೆಡ್ಡಿ ಮಾತು
Team Udayavani, Mar 25, 2024, 11:26 AM IST
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಸಿಡಿದೆದ್ದು, ಕಳೆದ ವಿಧಾನಸಭೆ ಚುನಾವಣೆ ವೇಳೆ ಹೊಸ ಪಕ್ಷ ಕಟ್ಟಿದ್ದ ಗಾಲಿ ಜನಾರ್ದನ ರೆಡ್ಡಿ ಇಂದು ಮರಳಿ ಬಿಜೆಪಿ ಸೇರಿದ್ದಾರೆ. ಇದೇ ವೇಳೆ ತಮ್ಮ ಕೆಆರ್ ಪಿಪಿ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಮಾಡಿಕೊಂಡಿದ್ದಾರೆ.
ಮಲ್ಲೇಶ್ವರಂನಬಿಜೆಪಿ ಪ್ರಧಾನ ಕಚೇರಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್ ಅವರ ಪುತ್ರ ಥಾಮಸ್ ಜಾನ್, ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮಿ ಹಾಗೂ ಅಪಾರ ಬೆಂಬಲಿಗರು ಪಕ್ಷ ಸೇರಿದರು.
ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ ನಾಯಕ ಸಿ.ಟಿ. ರವಿ, ಸಂಸದ ಪಿ.ಸಿ. ಮೋಹನ್, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು, ಸಂಸದ ದೇವೇಂದ್ರಪ್ಪ ಅವರು ಈ ಸಂದರ್ಭದಲ್ಲಿದರು. ಬಿ.ವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರು ನಾಯಕರು ಮತ್ತು ಬೆಂಬಲಿಗರನ್ನು ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಸ್ವಾಗತ ಮಾಡಿದರು.
ಈ ವೇಳೆ ಮಾತನಾಡಿದ ವಿಜಯೇಂದ್ರ, ತಾವೇ ಕಟ್ಟಿದ ಪಕ್ಷವನ್ನು ವಿಸರ್ಜನೆ ಮಾಡಿ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿಯೊಂದಿಗೆ ವಿಲೀನ ಮಾಡಿದ್ದಾರೆ. ಇದರಿಂದ ಬಿಜೆಪಿಗೆ ಶಕ್ತಿ ಬಂದಂತಾಗಿದೆ. ಮೋದಿ ಅವರ ನಾಯಕತ್ವ ಮೆಚ್ಚಿ ಮರು ಸೇರ್ಪಡೆ ಆಗಿದ್ದಾರೆ ಎಂದು ಹೇಳಿದರು.
ಜನಾರ್ದನ ರೆಡ್ಡಿ ಅವರು ಮಾತನಾಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡುತ್ತಿದ್ದೇನೆ. ನನ್ನ ಕಷ್ಟದ ಕಾಲದಲ್ಲಿ ನನ್ನ ಬೆನ್ನಿಗೆ ನಿಂತ ಎಲ್ಲಾ ಕಾರ್ಯಕರ್ತರಿಗೂ ವಂದನೆ ಸಲ್ಲಿಸ್ತೇನೆ. ನಾವೆಲ್ಲರೂ ಸೇರಿ ಬಿಜೆಪಿಗೆ ಸೇರ್ಪಡೆ ಆಗಿದ್ದೇವೆ ಎಂದು ಹೇಳಿದರು.
ದೇಶದ ಸರ್ವತೋಮುಖ ಅಭಿವೃದ್ಧಿಗೆ, ವಿಶ್ವಗುರುವಿನಂತೆ ಕೆಲಸ ಮಾಡಿರುವ ಮೋದಿ ಅವರಿಗೆ ವಂದನೆಗಳು. ಅಮಿತ್ ಶಾ ಅವರು ನನ್ನನ್ನು ದೆಹಲಿಗೆ ಆಹ್ವಾನಿಸಿ, ಬಾಹ್ಯ ಬೆಂಬಲ ಬೇಡ. ಬಿಜೆಪಿಗೆ ಬಂದು ಕೆಲಸ ಮಾಡಿ ಎಂದು ಆಹ್ವಾನ ನೀಡಿದರು. ಅವರ ಆಹ್ವಾನ ಸ್ವೀಕರಿಸಿ ಬಂದಿದ್ದೇನೆ. ಇದು ನನ್ನ ಪೂರ್ವ ಜನ್ಮದ ಪುಣ್ಯ ಎಂದು ರೆಡ್ಡಿ ಹೇಳಿದರು.
ಬಿ.ಎಸ್. ಯಡಿಯೂರಪ್ಪ ಅವರು ನನಗೆ ಅತ್ಯಂತ ಸಣ್ಣ ವಯಸ್ಸಿನಲ್ಲಿ ಬಿಜೆಪಿಯಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟರು. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಅವರ ಕ್ಯಾಬಿನೆಟ್ನಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿತು. ಈಗ ಅವರ ಸುಪುತ್ರ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಆಗಿದ್ದಾರೆ. ಅವರ ಜೊತೆ ಕೆಲಸ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ. ವಿಜಯೇಂದ್ರ ನೇತೃತ್ವದಲ್ಲಿ ಎಲ್ಲರೂ ಜೊತೆಗೂಡಿ ಕೆಲಸ ಮಾಡುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್