ಕೋಲಾರ:ಗಾಂಜಾ ಮತ್ತಿನಲ್ಲಿ ಪೊಲೀಸ್ ಸೇರಿ 6 ಮಂದಿಗೆ ಚೂರಿಯಿಂದ ಇರಿದ!
Team Udayavani, May 28, 2017, 11:27 AM IST
ಕೋಲಾರ : ಇಲ್ಲಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಗಾಂಜಾ ಮತ್ತಿನಲ್ಲಿ ಪೊಲೀಸ್ ಪೇದೆ ಸೇರಿದಂತೆ 6 ಮಂದಿಗೆ ಚೂರಿಯಿಂದ ಇರಿದು ಆತಂಕ ಸೃಷ್ಟಿಸಿದ ಘಟನೆ ಶನಿವಾರ ಸಂಜೆ ನಡೆದಿದೆ.
ಮುಬಾರಕ್ ಎಂಬ 22 ವರ್ಷದ ಯುವಕ ಕೃತ್ಯ ಎಸಗಿ ಪರಾರಿಯಾಗಲು ಯತ್ನಿಸಿದ್ದು , ಕೂಡಲೇ ಸಾರ್ವಜನಿಕರು ಹಿಡಿದಿದ್ದು ,ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸಾರ್ವಜನಿಕರಿಗೆ ಇರಿಯುತ್ತಿದ್ದ ವೇಳೆ ತಡೆಯಲು ಬಂದ ಪೊಲೀಸ್ ಪೇದೆಯೊಬ್ಬರಿಗೂ ಇರಿದಿದ್ದಾನೆ. ಒಟ್ಟು 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಇಬ್ಬರು ಕೋಲಾರ ಜಿಲ್ಲಾಸ್ಪತ್ರೆ ಮತ್ತು ನಾಲ್ವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಎಸ್ಪಿ ದಿವ್ಯಾ ಗೋಪಿನಾಥ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್