ಆಂಧ್ರ ಮಾದರಿಯಲ್ಲಿ ರಾಜ್ಯದ ಖಾಸಗಿ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ ನೀಡಿ: ಈಶ್ವರ ಖಂಡ್ರೆ


Team Udayavani, May 1, 2021, 2:57 PM IST

ಆಂಧ್ರ ಮಾದರಿಯಲ್ಲಿ ರಾಜ್ಯದ ಖಾಸಗಿ ಆಸ್ಪತ್ರೆಯಲ್ಲೂ ಉಚಿತ ಚಿಕಿತ್ಸೆ ನೀಡಿ: ಈಶ್ವರ ಖಂಡ್ರೆ

ಬೆಂಗಳೂರು: ಆಂಧ್ರ ಪ್ರದೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕಿತರ ವೈದ್ಯಕೀಯ ವೆಚ್ಚವನ್ನು ಆರೋಗ್ಯಶ್ರೀ ಯೋಜನೆಯಡಿಯಲ್ಲಿ ಅಲ್ಲಿನ ಸರ್ಕಾರವೇ ಭರಿಸಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಕೋವಿಡ್ ಸೋಂಕಿತರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುವ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಗಂಭೀರವಾಗಿರುವ ಸಾವಿರಾರು ರೋಗಿಗಳಿಗೆ ಆಸ್ಪತ್ರೆ ಸಿಗುತ್ತಿಲ್ಲ, ಸಿಕ್ಕರೂ ಆಕ್ಸಿಜನ್ ಹಾಸಿಗೆ ಸಿಗುತ್ತಿಲ್ಲ, ವೆಂಟಿಲೇಟರ್ ದೊರಕುತ್ತಿಲ್ಲ, ಐಸಿಯು ಲಭ್ಯವೇ ಇಲ್ಲ ಈ ಪರಿಸ್ಥಿತಿ ಸುಧಾರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಪ್ರಧಾನಿಯವರು ಅನಗತ್ಯವಾಗಿ ಟಿವಿಯಲ್ಲಿ ಕಾಣಿಸಿಕೊಂಡು ದಾರಿ ತಪ್ಪಿಸುತ್ತಿದ್ದಾರೆ:ಸಿದ್ದರಾಮಯ್ಯ

ಈ ಮಧ್ಯೆ ಖಾಸಗಿ ಆಸ್ಪತ್ರೆಗಳಲ್ಲಿ ಹಗಲು ಲೂಟಿ ನಡೆಯುತ್ತಿದೆ. ಎಚ್ಆರ್ ಸಿಟಿ ಸ್ಕ್ಯಾನ್ ಗೆ 5-6 ಸಾವಿರ ರೂ, ರೆಮಿಡಿಸಿವೀರ್ ಚುಚ್ಚುಮದ್ದಿಗೆ 15-20 ಸಾವಿರ ರೂ., ಆಕ್ಸಿಜನ್ ಬೆಡ್, ವೆಂಟಿಲೇಟರ್ ಗೆ 20 -25 ಸಾವಿರಾರು ರೂ ಮತ್ತು ಐಸಿಯುಗೆ ಲಕ್ಷಗಟ್ಟಲೆ ಬಿಲ್ ಮಾಡಲಾಗುತ್ತಿದ್ದು, 5-6 ದಿನಗಳ ಚಿಕಿತ್ಸೆಗೆ 8-10 ಲಕ್ಷ ರೂ. ಬಿಲ್ ಮಾಡುತ್ತಿದ್ದಾರೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರು ನಲುಗಿ ಹೋಗುತ್ತಿದ್ದಾರೆ. ತಮ್ಮ ಆಪ್ತರ ಪ್ರಾಣ ಉಳಿಸಲು ಸಾಲ ಮಾಡಿ  ಖಾಸಗಿ ಆಸ್ಪತ್ರೆಗಳಿಗೆ ಹಣ ಪಾವತಿ ಮಾಡಿ, ಆ ಸಾಲ ತೀರಿಸಲು ಅವರು ಕನಿಷ್ಠ 4-5 ವರ್ಷ ಜೀವನ ಸವೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಎಷ್ಟೋ ಜನರು ಆಸ್ಪತ್ರೆ ವೆಚ್ಚಕ್ಕೆ ಹೆದರಿ ಹಾದಿ ಬೀದಿಯಲ್ಲಿ ಹೆಣವಾಗುತ್ತಿದ್ದಾರೆ ಇದು ನಿಜಕ್ಕೂ ದುರ್ದೈವದ ಸಂಗತಿ. ಹೀಗಾಗಿ ಸರ್ಕಾರವೇ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಸಂಪೂರ್ಣ (ಕ್ಯಾಷ್ ಲೆಸ್) ವೆಚ್ಚ ಭರಿಸಬೇಕು ಎಂದು ಒತ್ತಾಯಿಸಿದ್ದಾರೆ.

ನೆರೆಯ ಆಂಧ್ರಪ್ರದೇಶದಲ್ಲಿ ಸರ್ಕಾರ ಈವರೆಗೆ 1 ಲಕ್ಷ 33 ಸಾವಿರ ಕೋವಿಡ್ ರೋಗಿಗಳಿಗೆ ಆ ರಾಜ್ಯದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಆರೋಗ್ಯಶ್ರೀ ಯೋಜನೆ ಅಡಿ ಉಚಿತವಾಗಿ ಚಿಕಿತ್ಸೆ ಕೊಡಿಸಿದೆ. ಇದಕ್ಕಾಗಿ 309 ಕೋಟಿ ರೂಪಾಯಿಗಳನ್ನು ಅಲ್ಲಿನ ಸರ್ಕಾರವೇ ಭರಿಸಿದೆ. ಸಂಕಷ್ಟದ ಸಮಯದಲ್ಲಿ ಜನಪರ ಕಾರ್ಯ ಮಾಡಿ ಇತರ ರಾಜ್ಯಗಳಿಗೆ ಮಾದರಿಯಾಗಿದೆ. ರಾಜ್ಯ ಸರ್ಕಾರವೂ ಈ ಮಾದರಿ ಅನುಸರಿಸಬೇಕು, ಈ ಕೂಡಲೇ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆಯ ಆದೇಶ ಹೊರಡಿಸಬೇಕು, ಇಲ್ಲವಾದರೆ ಎಲ್ಲ ಮುಗ್ಧ ಸೋಂಕಿತರ ಸಾವಿನ ಹೊಣೆಯನ್ನು ಸರ್ಕಾರವೇ ಹೊರಬೇಕಾಗುತ್ತದೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.

ಟಾಪ್ ನ್ಯೂಸ್

ದೆಹಲಿ: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ಉಸಿರುಗಟ್ಟಿ ನಾಲ್ವರು ಸಾವು

ದೆಹಲಿ: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ಉಸಿರುಗಟ್ಟಿ ನಾಲ್ವರು ಸಾವು

6train

ಬಿರುಕು ಬಿಟ್ಟ ರೈಲ್ವೆ ಹಳಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

c-c-patil

ಡಿಸೆಂಬರ್ ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭ: ಸಚಿವ ಸಿ.ಸಿ.ಪಾಟೀಲ

238 ದಿನಗಳ ನಂತರ ಮತ್ತಷ್ಟು ಇಳಿಕೆ; ಭಾರತದಲ್ಲಿ 12,428 ಕೋವಿಡ್ ಪ್ರಕರಣ ಪತ್ತೆ

238 ದಿನಗಳ ನಂತರ ಮತ್ತಷ್ಟು ಇಳಿಕೆ; ಭಾರತದಲ್ಲಿ 12,428 ಕೋವಿಡ್ ಪ್ರಕರಣ ಪತ್ತೆ

2019ರಲ್ಲಿ ದಾಳಿಯಾಗಿದ್ದ ಪುಲ್ವಾಮಾ ಸಿಆರ್ ಪಿಎಫ್ ಕ್ಯಾಂಪಸ್ ನಲ್ಲಿ ರಾತ್ರಿ ಕಳೆದ ಅಮಿತ್ ಶಾ

2019ರಲ್ಲಿ ದಾಳಿಯಾಗಿದ್ದ ಪುಲ್ವಾಮಾ ಸಿಆರ್ ಪಿಎಫ್ ಕ್ಯಾಂಪಸ್ ನಲ್ಲಿ ರಾತ್ರಿ ಕಳೆದ ಅಮಿತ್ ಶಾ

ಶಶಿಕಲಾ ಜೊಲ್ಲೆ

ಚುನಾವಣೆಯಲ್ಲಿ ಸಚಿವರಿಗೆ ಎರಡು ಜಿ.ಪಂ. ಉಸ್ತುವಾರಿ ಸಮರ್ಥ ನಿಭಾವಣೆ: ಶಶಿಕಲಾ ಜೊಲ್ಲೆ

aditi prabhudeva

ತನಿಖಾಧಿಕಾರಿಯಾದ ‘ಅದಿತಿ ಪ್ರಭುದೇವ’





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6train

ಬಿರುಕು ಬಿಟ್ಟ ರೈಲ್ವೆ ಹಳಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

ರಸಗೊಬ್ಬರ ಖಾಲಿ; ರಾಜ್ಯದಲ್ಲಿ ಹಿಂಗಾರು, ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ರಾಜ್ಯದಲ್ಲಿ ಹಿಂಗಾರು,ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

ಕೋವಿಡ್‌ ಲಸಿಕೆ ಕಡ್ಡಾಯ ಪ್ರಶ್ನಿಸಿದ ಅರ್ಜಿ ವಜಾ: ಅರ್ಜಿದಾರ ವಕೀಲರಿಗೆ ಹೈಕೋರ್ಟ್‌ ತರಾಟೆ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ದೆಹಲಿ: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ಉಸಿರುಗಟ್ಟಿ ನಾಲ್ವರು ಸಾವು

ದೆಹಲಿ: ಮೂರು ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ಉಸಿರುಗಟ್ಟಿ ನಾಲ್ವರು ಸಾವು

6train

ಬಿರುಕು ಬಿಟ್ಟ ರೈಲ್ವೆ ಹಳಿ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

5protest

ಕಬ್ಬಿನ ದರ ನಿಗದಿಗೆ ರೈತರ ಪಟ್ಟು; ಧರಣಿ ಮುಂದುವರಿಕೆ

c-c-patil

ಡಿಸೆಂಬರ್ ತಿಂಗಳಲ್ಲಿ ರಸ್ತೆ ಕಾಮಗಾರಿ ಆರಂಭ: ಸಚಿವ ಸಿ.ಸಿ.ಪಾಟೀಲ

238 ದಿನಗಳ ನಂತರ ಮತ್ತಷ್ಟು ಇಳಿಕೆ; ಭಾರತದಲ್ಲಿ 12,428 ಕೋವಿಡ್ ಪ್ರಕರಣ ಪತ್ತೆ

238 ದಿನಗಳ ನಂತರ ಮತ್ತಷ್ಟು ಇಳಿಕೆ; ಭಾರತದಲ್ಲಿ 12,428 ಕೋವಿಡ್ ಪ್ರಕರಣ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.