ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಿ: ಕುಮಾರಸ್ವಾಮಿ ಆಗ್ರಹ

Team Udayavani, Apr 24, 2021, 3:33 PM IST

h d kumaraswamy

ಬೆಂಗಳೂರು: ಮೇ ತಿಂಗಳ 1 ರಿಂದ ‌18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ತೆಗೆದುಕೊಂಡಿರುವ ತೀರ್ಮಾನದಂತೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರುವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್‌ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು‌ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ‌ನನ್ನ ಕೋರಿಕೆ. ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕೆಂಬುದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ

ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ. ಸರಿಸುಮಾರು 2.50 ಲಕ್ಷ ಕೋಟಿ ರೂ. ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ 2 ಸಾವಿರ ಕೋಟಿ ರೂ. ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು. ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಎಚ್ ಡಿಕೆ ಆಗ್ರಹಿಸಿದ್ದಾರೆ.

ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.