
ಬೆಂಗಳೂರು: 3 ದಿನಗಳ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ
Team Udayavani, Nov 2, 2022, 12:14 PM IST

ಬೆಂಗಳೂರು: ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನ ನಡೆಯುವ ಬಿಲ್ಡ್ ಫಾರ್ ದ ವರ್ಲ್ಡ್ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ 2022 ನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ವರ್ಚ್ಯುವಲ್ ಮೂಲಕ ಉದ್ಘಾಟಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೀಪ ಬೆಳಗಿಸಿದರು. ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ ಗೆಲ್ಹೊತ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಲ್ಹಾದ್ ಜೋಶಿ, ರಾಜೀವ್ ಚಂದ್ರಶೇಖರ್, ಪಿಯೂಷ್ ಗೋಯಲ್, ಸಚಿವರಾದ ಡಾ. ಅಶ್ವತ್ಥ್ ನಾರಾಯಣ, ಮುರುಗೇಶ್ ನಿರಾಣಿ, ಎಂಟಿಬಿ ನಾಗರಾಜ್, ಮೈಸೂರು ರಾಜ ವಂಶಸ್ಥರಾದ ರಾಣಿ ಪ್ರಮೋದಾದೇವಿ, ಉದ್ಯಮಿಗಳಾದ ಸಜ್ಜನ್ ಜಿಂದಾಲ್ , ವಿಕ್ರಮ ಕಿರ್ಲೊಸ್ಕರ್, ರಿಷಬ್ ಪ್ರೇಮ್ ಜಿ , ಪ್ರತಿಕ್ ಅಗರವಾಲ್, ರಾಜನ್ ಮಿತ್ತಲ್, ಕರಣ್ ಅದಾನಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
