ಜಾಗತಿಕ ಹೂಡಿಕೆದಾರರ ಸಮಾವೇಶ: ಟೋಕಿಯೋ ಕನ್ನಡ ಬಳಗಕ್ಕೆ ನಿರಾಣಿ ಆಹ್ವಾನ

ಜಪಾನ್ ಕನ್ನಡಿಗರ ಹರ್ಷೋದ್ಘಾರ

Team Udayavani, Aug 6, 2022, 7:14 PM IST

1-sadasd

ಟೋಕಿಯೋ: ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಸಿದ್ಧತೆ ಚುರುಕುಗೊಳಿಸಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ್‌ ಆರ್‌. ನಿರಾಣಿ, ಜಪಾನ್‌ಗೆ ಭೇಟಿ ನೀಡಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಉದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಲು ಸಚಿವ ನಿರಾಣಿ ನೇತೃತ್ವದ ನಿಯೋಗ ಜಪಾನ್‌ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಟೋಕಿಯೋ ಕನ್ನಡ ಬಳಗ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು. ಅಲ್ಲದೆ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಹ್ವಾನ ನೀಡಿದರು.

“ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಮತ್ತು ಜಪಾನ್ ನಡುವಿನ ಔದ್ಯಮಿಕ ಸಂಬಂಧ ಉತ್ತಮವಾಗಿದೆ. ವಿಶೇಷವಾಗಿ, ಜಪಾನ್‌ಗೆ ಸಂಬಂಧಿಸಿದಂತೆ, ತುಮಕೂರಿನ ವಸಂತನರಸಪುರದಲ್ಲಿ ಜಪಾನೀಸ್‌ ಕೈಗಾರಿಕಾ ಟೌನ್‌ಶಿಪ್ ಸ್ಥಾಪಿಸಲಾಗಿದೆ. ಅದಕ್ಕಾಗಿ 519.55 ಎಕರೆ ಭೂಮಿ ಮೀಸಲಿಡಲಾಗಿದ್ದು, ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಜಪಾನಿನ ಕಂಪನಿಗಳಿಂದ ನೇರ ಹೂಡಿಕೆಗೆ ಎಲ್ಲಾ ರೀತಿಯ ಸಹಕಾರ ಒದಗಿಸಲಾಗುವುದು,” ಎಂದು ನಿರಾಣಿ ಭರವಸೆ ನೀಡಿದರು.

“ಹೆಚ್ಚಿನ ಆರ್ಥಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ಎಲ್ಲಾ ಕ್ಷೇತ್ರಗಳಲ್ಲಿ ವಿದೇಶಿ ಕಂಪನಿಗಳ ನೇರ ಹೂಡಿಕೆಯನ್ನು ರಾಜ್ಯ ಸರ್ಕಾರ ಉತ್ತೇಜಿಸುತ್ತದೆ. ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಆಕರ್ಷಿಸಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ದೇಶದ ಒಟ್ಟಾರೆ ವಿದೇಶಿ ನೇರ ಹೂಡಿಕೆಯಲ್ಲಿ ನಮ್ಮ ರಾಜ್ಯದ ಪಾಲು ಶೇ.38,” ಎಂದು ಅವರು ವಿವರಿಸಿದರು.

“ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಫಲವಾಗಿ ಭಾರತ ಇಂದು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಒಡ್ಡುವ ಮಟ್ಟಕ್ಕೇರಿದೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕಳೆದ 3-4 ತಿಂಗಳಿಂದೀಚೆಗೆ ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ. ಇದು ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ,” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಟೋಕಿಯೊ ಕನ್ನಡ ಬಳಗದ ಗಣೇಶ್‌ ಕೃಷ್ಣಯ್ಯ, “ಟೋಕಿಯೋ ಕನ್ನಡ ಬಳಗದಲ್ಲಿ 1000ಕ್ಕೂಹೆಚ್ಚು ಸದಸ್ಯರಿದ್ದು, ಜಪಾನಿನ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಿಣಿಸಿ ಹಲವು ಕನ್ನಡಿಗರು ಇಲ್ಲಿನ ಸರ್ಕಾರದ ಗೌರವಕ್ಕೆ ಪಾತ್ರರಾಗಿದ್ದಾರೆ. ಕನ್ನಡ ಬಳಗ ಆಯೋಜಿಸುವ ಯುಗಾದಿ ಉತ್ಸವದಲ್ಲಿ ಜಪಾನ್‌ ನಾಗರಿಕರು ಪಾಲ್ಗೊಂಡು ಸಂಭ್ರಮಿಸುತ್ತಾರೆ,” ಎಂದರು.

ಕಾರ್ಯಕ್ರಮದಲ್ಲಿ ಭಾರತೀಯ ರಾಯಭಾರ ಕಚೇರಿಯ ಉಪ ಮುಖ್ಯಸ್ಥ ಮಯಾಂಕ್ ಜೋಶಿ ಮತ್ತು ಭಾರತೀಯ ರಾಯಭಾರಿ ಕಚೇರಿಯ ಮೊದಲ ಕಾರ್ಯದರ್ಶಿ ಮನೋಜ್ ಸಿಂಗ್ ನೇಗಿ, ಹಾಗೂ ಕನ್ನಡ ಬಳಗದ ಸದಸ್ಯರು ಉಪಸ್ಥಿತರಿದ್ದರು.

ಜಪಾನ್ ಕನ್ನಡಿಗರ ಹರ್ಷೋದ್ಘಾರ
ಟೋಕಿಯೋ ಕನ್ನಡ ಬಳಗದೊಂದಿಗಿನ ಸಭೆಯಲ್ಲಿ ‘ಎಲ್ಲಾದರು ಇರು ಎಂತಾದರು ಇರು; ಎಂದೆಂದಿಗು ನೀ ಕನ್ನಡವಾಗಿರು’…..ಎಂಬ ಕವಿವಾಣಿಯೊಂದಿಗೆ ಸಚಿವರು ಭಾಷಣ ಆರಂಭಿಸಿದಾಗ ಸಭೆಯಲ್ಲಿ ಹರ್ಷೋದ್ಗಾರ ಕೇಳಿಬಂತು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.