ಚಾರ್ಮಾಡಿ ಘಾಟ್‌ನಲ್ಲಿ ಗೂಡ್ಸ್ ವಾಹನ ಪಲ್ಟಿ: ಮೂವರು ಗಂಭೀರ
Team Udayavani, Jun 16, 2022, 10:00 AM IST
ಮೂಡಿಗೆರೆ: ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮಿನಿ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಗುರುವಾರ (ಜೂ.16) ಮುಂಜಾನೆ ನಡೆದಿದೆ.
ಕೊಟ್ಟಿಗೆಹಾರದಿಂದ ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿರುವ ವೇಳೆ ಅವಘಡ ಸಂಭವಿಸಿದ್ದು, ಈ ವೇಳೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಪ್ರಥಮ ಚಿಕಿತ್ಸೆ ಕೊಡಿಸಿ, ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳು ಉತ್ತರ ಪ್ರದೇಶದವರೆಂದು ತಿಳಿದು ಬಂದಿದೆ.
ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೊಮ್ಮಾಯಿ ಅವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ: ಕಾಂಗ್ರೆಸ್ ಟೀಕೆ
ಪ್ರಧಾನಿ ನರೇಂದ್ರ ಮೋದಿ ಒಬ್ಬ ದೊಡ್ಡ ನಾಟಕಕಾರ: ಸಿದ್ದರಾಮಯ್ಯ ವಾಗ್ದಾಳಿ
ಮಲೆನಾಡಿನಲ್ಲಿ ಮಳೆ ಅಬ್ಬರ: 24 ಗಂಟೆಯಲ್ಲಿ 29ಕ್ಕೂ ಹೆಚ್ಚು ಮನೆಗಳಿಗೆ ಹಾನಿ, 4 ಹಸುಗಳು ಸಾವು
ಕಾಂಗ್ರೆಸ್ ಕೋಳಿ ಕೂಗಿದರೆ ಬೆಳಕು ಹರಿಯುತ್ತದೆಂಬ ಕಾಲ ಹೋಯಿತು: ಕುಮಾರಸ್ವಾಮಿ
ಈದ್ಗಾ ಮೈದಾನದಲ್ಲಿ ಶಿವಲಿಂಗ ಸ್ಥಾಪನೆ ಎಚ್ಚರಿಕೆ: ಇಂದು ಡಿಸಿಪಿ ನೇತೃತ್ವದಲ್ಲಿ ಶಾಂತಿ ಸಭೆ