ಕೋವಿಡ್‌ ಅಂಕಿ-ಅಂಶ ಮುಚ್ಚಿಡುವ ಅವಶ್ಯಕತೆ ಸರ್ಕಾರಕ್ಕಿಲ್ಲ: ಡಾ.ಕೆ.ಸುಧಾಕರ್‌

ಉತ್ತರ ಕೇಳದೆ ಕಾಂಗ್ರೆಸ್‌ ಪಲಾಯನ ಮಾಡಿದೆ ಎಂದು ಟೀಕೆ

Team Udayavani, Sep 24, 2021, 9:30 PM IST

ಕೋವಿಡ್‌ ಅಂಕಿ-ಅಂಶ ಮುಚ್ಚಿಡುವ ಅವಶ್ಯಕತೆ ಸರ್ಕಾರಕ್ಕಿಲ್ಲ: ಡಾ.ಕೆ.ಸುಧಾಕರ್‌

ವಿಧಾನಸಭೆ: ಕೋವಿಡ್‌ ದಿಂದ ಉಂಟಾದ ಸಾವಿನ ಸಂಖ್ಯೆಯನ್ನು ಮುಚ್ಚಿಡುತ್ತಿದ್ದೇವೆ ಎಂದು ಪ್ರತಿಪಕ್ಷ ಕಾಂಗ್ರೆಸ್‌ ಆರೋಪ ಸತ್ಯಕ್ಕೆ ದೂರ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ ಪ್ರತಿಭಟನೆ ನಡುವೆಯೇ ಕೋವಿಡ್‌ ಕುರಿತ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರ ಮಂಡಿಸಿದ ಅವರು, ಕೋವಿಡ್‌ ಅಂಕಿ ಅಂಶಗಳನ್ನು ಮುಚ್ಚಿಡುವ ಯಾವುದೇ ಅವಶ್ಯಕತೆ ಆಗಲಿ ಅಥವಾ ಉದ್ದೇಶ ಆಗಲಿ ನಮ್ಮ ಸರ್ಕಾರಕ್ಕೆ ಇಲ್ಲ. ಐಸಿಎಂಆರ್‌ ಮಾರ್ಗಸೂಚಿ ಪ್ರಕಾರವೇ ಎಲ್ಲ ಅಂಕಿ ಅಂಶಗಳು ದಾಖಲಾಗುತ್ತವೆ ಎಂದು ಹೇಳಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್‌ ನಲ್ಲಿ ಆಗಿರುವ ಕ್ಲೇಮುಗಳೆಲ್ಲಾ ಮರಣಗಳು ಎಂದು ತಪ್ಪಾಗಿ ಸದನಕ್ಕೆ ಮಾಹಿತಿ ನೀಡಿದ್ದಾರೆ. ಎಸ್‌ಎಎಸ್‌ಟಿ ಸಂಸ್ಥೆ ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ ವಿಮೆ ಯೋಜನೆ ಅನುಷ್ಠಾನಗೊಳಿಸುವ ನೋಡಲ್‌ ಏಜೆನ್ಸಿ ಆಗಿದ್ದು, 2 ಲಕ್ಷಕ್ಕೂ ಹೆಚ್ಚು ಕ್ಲೇಮ್‌ ಬಂದಿರುವುದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಸೋಂಕಿತರದ್ದು ಎಂದು ತಿಳಿಸಿದರು.

ಮೂಲಸೌಕರ್ಯ ಅಭಿವೃದ್ಧಿ
ಕೋವಿಡ್‌ ಮೊದಲ ಅಲೆಗೆ ಮುನ್ನ ವೈದ್ಯಕೀಯ ಶಿಕ್ಷಣ ಇಲಾಖೆಯ ಆಸ್ಪತ್ರೆಗಳಲ್ಲಿ 413, ಆರೋಗ್ಯ ಇಲಾಖೆ ಆಸ್ಪತ್ರೆಗಳಲ್ಲಿ 312 ಸೇರಿ ಒಟ್ಟು 725 ಐಸಿಯು ಹಾಸಿಗೆ ಇತ್ತು. ಮೊದಲ ಅಲೆ ವೇಳೆಗೆ 858 ಹಾಗೂ ಎರಡನೇ ಅಲೆ ವೇಳೆಗೆ 1,961 ಕ್ಕೆ ಏರಿಸಿ ಆಗಸ್ಟ್‌ ವೇಳೆಗೆ 3,877 ಹಾಸಿಗೆ ಲಭ್ಯವಿದೆ. ಅದೇ ರೀತಿ ಆಕ್ಸಿಜನ್‌ ಹಾಸಿಗೆ, ಸಾಮಾನ್ಯ ಹಾಸಿಗೆ, ಆಕ್ಸಿಜನ್‌ ಸಿಲಿಂಡರ್‌, ಲಿಕ್ವಿಡ್‌ ಮೆಡಿಕಲ್‌ ಆಕ್ಸಿಜನ್‌ ಪ್ರಮಾಣ ಸಹ ಹೆಚ್ಚಿಸಲಾಯಿತು ಎಂದು ಹೇಳಿದರು.

ಇದನ್ನೂ ಓದಿ:ರಾಜ್ಯಕ್ಕೆ ಬಂದ ಲೋಕಸಭೆ ಸಭಾಧ್ಯಕ್ಷರಿಗೆ ಅಗೌರವ ಸಲ್ಲ: ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಲಸಿಕೆ ದಾಖಳೆ ಪ್ರಮಾಣದಲ್ಲಿ ನೀಡಲಾಗಿದೆ. ಸೆಪ್ಟೆಂಬರ್‌ 24 ಕ್ಕೆ 5.39 ಕೋಟಿ ರೂ. ಡೋಸ್‌ ನೀಡಲಾಗಿದೆ. ರಾಜ್ಯ ಸರ್ಕಾರ 4.89 ಕೋಟಿ ಡೋಸ್‌ ಪಡೆದಿದೆ. ಈ ಪೈಕಿ ಕೇಂದ್ರ ಸರ್ಕಾರದಿಂದ 4.63 ಕೋಟಿ ಡೋಸ್‌ ಪೂರೈಕೆಯಾಗಿದೆ ಎಂದು ತಿಳಿಸಿದರು.

ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ 2.75 ಲಕ್ಷ ಕೋವಿಡ್‌ ಸೋಂಕಿತರು ಉಚಿತ ಚಿಕಿತ್ಸೆ ಪಡೆದಿದ್ದಾರೆ ಎಂದು ಹೇಳಿದರು.

ಚಾಮರಾಜನಗರದಲ್ಲಿ ನಡೆದ ದುರಂತ ಸಂಬಂಧ ನ್ಯಾ. ಎ.ಬಿ. ಪಾಟೀಲ್‌ ಸಮಿತಿ ವರದಿ ನಿರೀಕ್ಷಿಸಲಾಗುತ್ತಿದ್ದು ವರದಿ ಬಂದ ತಕ್ಷಣ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೋವಿಡ್‌ ನಿರ್ವಹಣೆ ಕುರಿತ ಚರ್ಚೆಗೆ ಸರ್ಕಾರದ ಉತ್ತರ ಕೇಳದೆ ಕಾಂಗ್ರೆಸ್‌ ಪಲಾಯನ ಮಾಡಿದೆ. ಜನರ ಆರೋಗ್ಯದ ಬಗ್ಗೆ ಆ ಪಕ್ಷಕ್ಕೆ ಇರುವ ಕಾಳಜಿ ಮತ್ತು ಬದ್ಧತೆ ಬಟಾ ಬಯಲು ಆಗಿದೆ.
-ಡಾ.ಕೆ.ಸುಧಾಕರ್‌

ಟಾಪ್ ನ್ಯೂಸ್

siddaramaiah

ಪ್ರತಿ ಪ್ರಜೆಯ ಮೇಲೆ 44 ಸಾವಿರಕ್ಕೂ ಅಧಿಕ ಸಾಲದ ಹೊರೆ!:’ಬುರುಡೆರಾಮಯ್ಯ’ ಎಂದ ಬಿಜೆಪಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಹಿಂದೂ ಧಾರ್ಮಿಕ ಸ್ಥಳಗಳನ್ನು ಭಗ್ನಗೊಳಿಸುವವರಿಗೆ ಕ್ಷಮೆಯಿಲ್ಲ: ಶಾಸಕ ಡಾ.ಭರತ್ ಶೆಟ್ಟಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಫೈಜಾಬಾದ್ ರೈಲ್ವೆ ಜಂಕ್ಷನ್ ಹೆಸರು ಇನ್ಮುಂದೆ ಅಯೋಧ್ಯಾ ಕಂಟ್ಮೋನೆಂಟ್: ಸಿಎಂ ಯೋಗಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

22kubala

ಬಹು ನಿರೀಕ್ಷಿತ “ಚಾರ್ಲಿ” ಚಿತ್ರೀಕರಣ ಮುಕ್ತಾಯ: ಡಿಸೆಂಬರ್ 31ಕ್ಕೆ ಬಿಡುಗಡೆ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

ಪ್ರತಿ ಪ್ರಜೆಯ ಮೇಲೆ 44 ಸಾವಿರಕ್ಕೂ ಅಧಿಕ ಸಾಲದ ಹೊರೆ!:’ಬುರುಡೆರಾಮಯ್ಯ’ ಎಂದ ಬಿಜೆಪಿ

24nanjanagud

ನಂಜಗೂಡು ಆಹಾರ ಅರಸಿ ಬಂದು ಬೋನು ಸೇರಿದ ಚಿರತೆ 

23shreeganda

ಶ್ರೀಗಂಧ ಚೋರನ ಬಂಧನ, 13 ಕೆ.ಜಿ ಹಸಿ ಗಂಧದ ತುಂಡುಗಳ ವಶ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಪ್ರಧಾನಿಗಳ ಬಗ್ಗೆ ಏಕವಚನದಲ್ಲಿ ಮಾತಾಡಿದರೆ ದೊಡ್ಡತನವಾಗದು: ಸಿಎಂ ಬೊಮ್ಮಾಯಿ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

MUST WATCH

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

udayavani youtube

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಗಳ ಸ್ವಚ್ಛಂದ ವಿಹಾರ

udayavani youtube

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

ಹೊಸ ಸೇರ್ಪಡೆ

siddaramaiah

ಪ್ರತಿ ಪ್ರಜೆಯ ಮೇಲೆ 44 ಸಾವಿರಕ್ಕೂ ಅಧಿಕ ಸಾಲದ ಹೊರೆ!:’ಬುರುಡೆರಾಮಯ್ಯ’ ಎಂದ ಬಿಜೆಪಿ

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಕವಿ ಅಜ್ಜೀಬಳಗೆ ಸಾಹಿತ್ಯ ಸಿಂಚನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

Apply for Taluk Rajyotsava Award

ತಾಲೂಕು ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ

1-ttt

ತಿಪಟೂರು: ಸಿಡಿಲು ಬಡಿದು ಕುರಿಗಾಹಿ ದುರ್ಮರಣ, ಇನ್ನೋರ್ವ ಗಂಭೀರ

Display a Quiet Image at the State Festival

ರಾಜ್ಯೋತ್ಸವದಲ್ಲಿ ಸ್ತಬ್ಧ ಚಿತ್ರ ಪ್ರದರ್ಶಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.