ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ?
Team Udayavani, Mar 18, 2019, 12:30 AM IST
ಬೆಂಗಳೂರು: ಇತ್ತೀಚೆಗೆ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ಹೋಳಿ ಹಬ್ಬದ ಕೊಡುಗೆ ನೀಡಲು ಸಿದ್ಧತೆ ಮಾಡಿಕೊಂಡಿದ್ದು, ಹಣಕಾಸು ಇಲಾಖೆಗೆ 2.75ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡುವಂತೆ ಶಿಫಾರಸು ಮಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕಡತ ರವಾನಿಸಿದೆ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರದ ವೇತನ ಆಯೋಗದ ನಿಯಮದಂತೆ ಪ್ರತಿ ಆರು ತಿಂಗಳಿಗೊಮ್ಮೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗುತ್ತದೆ. ಅದೇ ರೀತಿ, ಇನ್ನೆರಡು ದಿನದಲ್ಲಿ ರಾಜ್ಯ ಸರ್ಕಾರವೂ ತುಟ್ಟಿ ಭತ್ಯೆ ಘೋಷಣೆ ಮಾಡುವ ಸಾಧ್ಯತೆಯಿದೆ. ಇದರಿಂದ ಸುಮಾರು 5 ಲಕ್ಷ 40 ಸಾವಿರ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.
ರಾಜ್ಯ ಸರ್ಕಾರ ಕಳೆದ ಅಕ್ಟೋಬರ್‌ನಲ್ಲಿ ಮೂಲವೇತನಕ್ಕೆ ಶೇ.1.75ರಷ್ಟು ತುಟ್ಟಿ ಭತ್ಯೆಯನ್ನು 2018ರ ಜುಲೈನಿಂದ ಅನ್ವಯವಾಗುವಂತೆ ಹೆಚ್ಚಳ ಮಾಡಿತ್ತು. ಅದರಿಂದ ಸದ್ಯ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 3.75ರಷ್ಟಿದ್ದು, ಈಗ ರಾಜ್ಯ ಸರ್ಕಾರ 2.75ರಷ್ಟು ಹೆಚ್ಚಳ ಮಾಡುವುದರಿಂದ 6.50 ರಷ್ಟು ಹೆಚ್ಚಳವಾದಂತಾಗುತ್ತದೆ. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇದು ಘೋಷಣೆಯಾಗುತ್ತಾ ಎಂಬ ಅನುಮಾನವೂ ಇದೆ. ಆದರೆ, ನೀತಿ ಸಂಹಿತೆಗೂ ಇದಕ್ಕೂ ಸಂಬಂಧವಿಲ್ಲ ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು