ಎಲ್ಲ ಮಕ್ಕಳಿಗೂ ಸರಕಾರಿ ಆಂಗ್ಲ ಮಾಧ್ಯಮ ಶಿಕ್ಷಣ
Team Udayavani, May 21, 2022, 6:40 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯಾದ್ಯಂತ ಸರಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಪ್ರವೇಶ ಬಯಸಿ ಬರುವ ಎಲ್ಲ ಮಕ್ಕಳಿಗೂ ಪ್ರವೇಶ ಕಲ್ಪಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಈ ಬಾರಿ ದಾಖಲಾತಿ ಹೆಚ್ಚಾಗುವ ನಿರೀಕ್ಷೆಯಿದೆ.
ಇದರಿಂದಾಗಿ ತಮ್ಮ ಮಕ್ಕಳನ್ನು “ಇಂಗ್ಲಿಷ್ ಮಾಧ್ಯಮ’ದಲ್ಲಿ ಓದಿಸಬೇಕು ಎಂಬ ಕಾರಣಕ್ಕಾಗಿ ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವ ಪೋಷಕರು ಇನ್ನು ಸರಕಾರಿ ಶಾಲೆಗಳಿಗೂ ಸೇರಿಸಬಹುದಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಂ. ಪ್ರಸನ್ನಕುಮಾರ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಾಲಾಭಿವೃದ್ಧಿ ಮತ್ತು ನಿರ್ವಹಣ ಸಮಿತಿಯು (ಎಸ್‌ಡಿಎಂಸಿ) ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ಹಾಗೂ ಜಿಲ್ಲಾ ಉಪ ನಿರ್ದೇಶಕ (ಡಿಡಿಪಿಐ)ರಿಗೆ ಮನವಿ ಸಲ್ಲಿಸಿದರೆ ಸರಕಾರ ಅನುಮತಿ ನೀಡಲಿದೆ. ಸಾಕಷ್ಟು ಶಾಲೆಗಳಿಂದ ಬೇಡಿಕೆ ಬರುತ್ತಿದೆ.
ಮೂಲಸೌಕರ್ಯವಿದ್ದರೆ, ಅನುಮತಿ ನೀಡಲಾಗುತ್ತದೆ. ಅಗತ್ಯ ಶಿಕ್ಷಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ನಿರ್ಧರಿಸಲಾಗಿದೆ.
ಸರಕಾರವು 2019-20ನೇ ಸಾಲಿನಲ್ಲಿ 1,001 ಮತ್ತು 2020-21ರಲ್ಲಿ 1,400 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿತು. 276 ಕರ್ನಾಟಕ ಪಬ್ಲಿಕ್ ಶಾಲೆ, 444 ಉರ್ದು ಮಾಧ್ಯಮ ಸೇರಿ 2,401 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಬೋಧಿಸಲಾಗುತ್ತಿದೆ. ಈ ಶಾಲೆಗಳಲ್ಲಿ ಪ್ರತಿ ತರಗತಿಗೆ 30 ಮಕ್ಕಳಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಶಾಲೆಗಳಲ್ಲಿ ಕೊಠಡಿಗಳು ಲಭ್ಯವಿದ್ದಲ್ಲಿ ಪ್ರವೇಶ ನೀಡುವಂತೆ ಸರಕಾರ ತಿಳಿಸಿದೆ.
2021-22 ಮತ್ತು 2022-23ನೇ ಸಾಲಿನಲ್ಲಿ ಹೊಸ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುತ್ತಿಲ್ಲ. ಆದರೆ, ಈಗಾಗಲೇ ಆರಂಭಿಸಿರುವ ಶಾಲೆಗಳಲ್ಲಿ ತರಗತಿಗಳನ್ನು ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ.
ಸಂಬಂಧಪಟ್ಟ ಶಾಲೆಗಳಲ್ಲಿ ಮೂಲಸೌಕರ್ಯವಿದ್ದಲ್ಲಿ ಅನುಮತಿ ನೀಡಲಾಗುತ್ತದೆ. ಕಳೆದ ವರ್ಷ 3ನೇ ತರಗತಿವರೆಗೆ ಇದ್ದ ಆಂಗ್ಲ ಮಾಧ್ಯಮವನ್ನು ಈ ವರ್ಷ 4ನೇ ತರಗತಿವರೆಗೆ ವಿಸ್ತರಿಸಲಾಗಿದೆ.
ಮತ್ತಷ್ಟು ಶಾಲೆಗಳಲ್ಲಿ ಆರಂಭಿಸಲು ಆಗ್ರಹ
ರಾಜ್ಯದಲ್ಲಿ 44,615 ಸರಕಾರಿ ಪ್ರಾಥಮಿಕ ಶಾಲೆಗಳಿವೆ. ಈ ಪೈಕಿ ಕೇವಲ 2,401 ಶಾಲೆಗಳಲ್ಲಿ ಮಾತ್ರ ಆಂಗ್ಲ ಮಾಧ್ಯಮವಿದೆ. ಮತ್ತಷ್ಟು ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸಿದರೆ, ಕೂಲಿ ಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದವರು, ಹಿಂದುಳಿದ ವರ್ಗದ ಮಕ್ಕಳು ಸಹಿತ ಎಲ್ಲ ವರ್ಗದ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರಿಸಲು ಅನುಕೂಲವಾಗಲಿದೆ. ಕೇಲವೇ ಮಂದಿಗೆ ಸಿಗುತ್ತಿರುವ ಸವಲತ್ತು ರಾಜ್ಯಾದ್ಯಂತ ಸಿಗುವಂತೆ ಮಾಡಬೇಕು ಎಂಬುದು ಪೋಷಕರ ಆಗ್ರಹವಾಗಿದೆ.
ಈಗಾಗಲೇ ಆಂಗ್ಲ ಮಾಧ್ಯಮ ಬೋಧಿಸುತ್ತಿರುವ ಸರಕಾರಿ ಶಾಲೆಗಳಲ್ಲಿ ಮೂಲಸೌಕರ್ಯವಿದ್ದರೆ, ನಿಗದಿತ ಸಂಖ್ಯೆಗಿಂತ ಹೆಚ್ಚಿನ ಮಕ್ಕಳಿಗೆ ಪ್ರವೇಶ ಕಲ್ಪಿಸಲು ನಿರ್ದೇಶನ ನೀಡಲಾಗಿದೆ.
– ಎಂ.ಪ್ರಸನ್ನಕುಮಾರ್,
ನಿರ್ದೇಶಕರು, ಪ್ರಾಥಮಿಕ ಶಿಕ್ಷಣ
-ಎನ್. ಎಲ್. ಶಿವಮಾದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಪುತ್ತೂರು : ಜಾತಿ ನಿಂದನೆ, ಹಲ್ಲೆ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ರೈಲ್ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್ ಕಸಿದು ಪರಾರಿ; ದೂರು
ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ
ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್ ಪದಾರ್ಪಣೆ
ವಿಂಬಲ್ಡನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ: ವೀನಸ್ ದಾಖಲೆ ಮುರಿಯುವತ್ತ ಸ್ವಿಯಾಟೆಕ್