ಸಂತಾನಹರಣ ಚಿಕಿತ್ಸೆ ಮಾಡಿ ನೆಲದ ಮೇಲೆ ಮಲಗಿಸಿದ್ರು!

Team Udayavani, Jul 18, 2018, 6:00 AM IST

ಪರಶುರಾಂಪುರ (ಚಿತ್ರದುರ್ಗ ಜಿಲ್ಲೆ): ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿ ರೋಗಿಗಳನ್ನು ನೆಲದ ಮೇಲೆ ಮಲಗಿಸುವ ಘಟನೆ ಸಾಮಾನ್ಯವಾಗಿಬಿಟ್ಟಿದೆ. ಅಂಥದ್ದೇ ಅಮಾನವೀಯ ಘಟನೆ ಪರಶುರಾಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆದಿದೆ.

ಚಳ್ಳಕೆರೆ ತಾಲೂಕು ಪರಶುರಾಂಪುರ ಹೋಬಳಿಯ ಗ್ರಾಮಗಳ 52 ಮಹಿಳೆಯರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಂತಾನಹರಣ ಚಿಕಿತ್ಸೆ ಮಾಡಲಾಯಿತು. ದಿನವೊಂದಕ್ಕೆ ಗರಿಷ್ಠ 30 ಸಂತಾನಹರಣ ಚಿಕಿತ್ಸೆ ಮಾಡಲು ಅವಕಾಶವಿದೆ. ಆದರೆ ನಿಯಮ ಮೀರಿ ಶಸ್ತ್ರಚಿಕಿತ್ಸೆ
ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ತಿಂಗಳಲ್ಲಿ ಒಂದು ದಿನ ಸಂತಾನಹರಣ ಚಿಕಿತ್ಸೆ ಮಾಡಲಾಗುತ್ತಿದೆ. ಅದರಂತೆ ಮಂಗಳವಾರ ಪಗಡಲಬಂಡೆ, ಕೊರ್ಲಕುಂಟೆ, ಸಿದ್ದೇಶ್ವರನದುರ್ಗ, ಕ್ಯಾದಿಗುಂಟೆ ಮತ್ತು ಪಕ್ಕದ ಆಂಧ್ರಪ್ರದೇಶದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾಸಿಗೆ, ಮೂಲ ಸೌಲಭ್ಯ ಇದೆಯೋ ಇಲ್ಲವೋ ಎಂಬುದನ್ನೂ ಗಮನಿಸದೆ ವೈದ್ಯರು ಆಗಮಿಸಿದ್ದ ಎಲ್ಲ 52 ಮಹಿಳೆಯರಿಗೂ ಶಸ್ತ್ರಚಿಕಿತ್ಸೆ ಮಾಡಿ ಕೈತೊಳೆದುಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಹಿಳೆಯರನ್ನು ಆರೋಗ್ಯ ಕೇಂದ್ರದ ನೆಲದ
ಮಲಗಿಸಿದ್ದು ಕರುಳು ಹಿಂಡುವಂತಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ನಗರದಲ್ಲಿ ಆಸ್ತಿ ಮಾಲೀಕರಿಂದ ಆಸ್ತಿ ತೆರಿಗೆಯೊಂದಿಗೆ ಶೇ.2ರಷ್ಟು ಭೂ ಸಾರಿಗೆ ಉಪ ಕರ (ಸೆಸ್‌) ವಸೂಲಿ ಮಾಡುವ ಬಿಬಿಎಂಪಿ ನಿರ್ಣಯಕ್ಕೆ ಸಾರ್ವಜನಿಕ ವಲಯದಿಂದ...

  • ಬೆಂಗಳೂರು: ನೆರೆ ಸಂತ್ರಸ್ತರು ತ್ವರಿತವಾಗಿ ಎರಡನೇ ಕಂತಿನ ಹಣವನ್ನು ಪಡೆದು ಮನೆಗಳನ್ನು ಮೂರು ತಿಂಗಳಲ್ಲಿ ನಿರ್ಮಿಸಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌...

  • ಮುಖ್ಯಮಂತ್ರಿ ಯಡಿಯೂರಪ್ಪ ಅವರ ದೆಹಲಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಾದ ಚರ್ಚೆ ಗರಿಗೆದರುತ್ತಿದ್ದು, ಸಚಿವಾಕಾಂಕ್ಷಿಗಳಲ್ಲಿ...

  • ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಶೇ.49 ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು...

  • ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ಒಂದು ವಿಭಾಗದಿಂದ ಇನ್ನೊಂದು ವಿಭಾಗಕ್ಕೆ ವರ್ಗಾವಣೆ ಹೊಂದಿರುವ ಶಿಕ್ಷಕರು ಮುಂಬಡ್ತಿಯಿಂದಲೂ ವಂಚಿತರಾಗುತ್ತಿದ್ದಾರೆ. 2006ಕ್ಕಿಂತ...