ವೈದ್ಯಕೀಯ ಶಿಕ್ಷಣದಲ್ಲಿ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ: ಸಚಿವ ಸುಧಾಕರ್


Team Udayavani, Apr 29, 2022, 1:16 PM IST

ವೈದ್ಯಕೀಯ ಶಿಕ್ಷಣದಲ್ಲಿ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ: ಸಚಿವ ಸುಧಾಕರ್

ಬೆಂಗಳೂರು: ಕಳೆದ ಏಳು ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ ವರ್ಷ 65000 ಎಂಬಿಬಿಎಸ್ ವೈದ್ಯರು ಮತ್ತು 30,000 ವೈದ್ಯರು ಸ್ನಾತಕೋತ್ತರ ಪದವಿ ಪಡೆದು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ಬೆಂಗಳೂರು ಮೆಡಿಕಲ್ ಕಾಲೇಜಿನ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಇದು ದೇಶದಲ್ಲಿ ಮಹಿಳಾ ಸಬಲೀಕರಣದ ಸಂಕೇತ. ಸಮಾಜದಲ್ಲಿ ಬದಲಾವಣೆಗಳು ಆಗುತ್ತಿವೆ. ಬಡವರ ಮಕ್ಕಳು ಕೂಡ ವೈದ್ಯರಾಗಬೇಕೆಂಬ ಕನಸು ಈಡೇರುತ್ತಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಒಟ್ಟು 65 ಮೆಡಿಕಲ್ ಕಾಲೇಜುಗಳಿವೆ. 4 ಸರ್ಕಾರಿ ಮೆಡಿಕಲ್ ಕಾಲೇಜುಗಳು ಶೀಘ್ರದಲ್ಲಿ ಆರಂಭವಾಗಲಿವೆ. ಖಾಸಗಿಯಲ್ಲಿ 3 ಹೆಚ್ವುವರಿ ಮೆಡಿಕಲ್ ಕಾಲೇಜುಗಳಿಗೆ ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ ಹೊಸತಾಗಿ 9 ಮೆಡಿಕಲ್ ಕಾಲೇಜುಗಳು ಆರಂಭ ಮಾಡಲು ತಯಾರಿಗಳು ನಡೆಯುತ್ತಿವೆ. ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇಕಡಾ 30.5 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ನಂತರ ಕರ್ನಾಟಕದಲ್ಲಿ ಅತೀ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. 2014ಕ್ಕೂ ಮೊದಲು ದೇಶದಲ್ಲಿ ಕೆಲವೇ ಕೆಲವು ಮೆಡಿಕಲ್ ಕಾಲೇಜಿಗಳಿದ್ದವು. ಆದರೆ ಕಳೆದ 7 ವರ್ಷಗಳಲ್ಲಿ ಹೊಸತಾಗಿ 150 ಕ್ಕೂ ಅಧಿಕ ಮೆಡಿಕಲ್ ಕಾಲೇಜುಗಳು ಆರಂಭವಾಗಿವೆ. 65,000 ಎಂಬಿಬಿಎಸ್ ಡಾಕ್ಟರ್ ಗಳು ಪ್ರತೀ ವರ್ಷ ಹೊರ ಬರುತ್ತಾರೆ. 30,000 ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಸಮಾಜ ಸೇವೆಗೆ ಲಭ್ಯರಾಗುತ್ತಿದ್ದಾರೆ. ವೈದ್ಯಕೀಯ ಶಿಕ್ಷಣದ ಕ್ಷೇತ್ರ ದುಬಾರಿ ವೆಚ್ಚವನ್ನು ಬಯಸುತ್ತಿದೆ. ಆದರೆ ಇದನ್ನು ಸರ್ಕಾರ ಹಂತ ಹಂತವಾಗಿ ಕಡಿಮೆ ಮಾಡಲು ಯೋಜನೆ ರೂಪಿಸಿದೆ. ಬಡವರಿಗೂ ಸಹ ವೈದ್ಯಕೀಯ ಶಿಕ್ಷಣ ಸಿಗಬೇಕು ಅನ್ನುವುದೇ ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ಹೇಳಿದರು.

ಕೊರೊನಾ ಸಾಂಕ್ರಾಮಿಕ ರೋಗದ ವೇಳೆ ವೈದ್ಯಕೀಯ ವಿದ್ಯಾರ್ಥಿಗಳು ಅನನ್ಯ ಸೇವೆ ಸಲ್ಲಿಸಿದ್ದಾರೆ. ಜೀವನದಲ್ಲಿ ಎದುರಾಗಬಹುದುದಾದ ಸಂಕಷ್ಟಗಳು ಕಲಿಕೆಯ ಹಂತದಲ್ಲೇ ಅನುಭವಕ್ಕೆ ಬಂದಿದೆ. ಇದು ಜೀವನದ ಅಂತ್ಯವಲ್ಲ, ಆರಂಭ ಎಂದು ಪ್ರಧಾನಿಯವರು ಹೇಳಿದರಂತೆ ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳ ಹೊಸ ಜೀವನ ಇಂದಿನಿಂದ ಆರಂಭವಾಗಿದೆ. ಕಳೆದ 5 ವರ್ಷಗಳಲ್ಲಿ ತೋರಿದ ಬದ್ಧತೆ, ಶ್ರದ್ಧೆ ಮತ್ತು ಅಧ್ಯಯನ ಶೀಲತೆಯನ್ನು ಬದುಕಿನ ಉದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಆಶಿಸಿದರು.

ವೈದ್ಯರ ಸೇವೆ ಸಮಾಜದಲ್ಲಿ ವಿಭಿನ್ನ ಗೌರವವನ್ನು ಹೊಂದಿದೆ. ಮನುಷ್ಯತ್ವ ಮತ್ತುಸೇವೆಯನ್ನು ಒಂದೇ ಕಾಲದಲ್ಲಿ ಅಪೇಕ್ಷೆ ಮಾಡುವ ಕೆಲಸ ಇದಾಗಿದೆ.  ಇದರಲ್ಲಿ ಆತ್ಮ ತೃಪ್ತಿಯೂ ಇದೆ.  ಎಲ್ಲವನ್ನೂ ಮರೆತು ಸಮಾಜಕ್ಕಾಗಿ, ಇನ್ನೊಬ್ಬರಿಗಾಗಿ ಕೆಲಸ ಮಾಡಬೇಕಾಗುತ್ತದೆ. ಎಲ್ಲಾ ತ್ಯಾಗವನ್ನು ಮಾಡಲು ಸದಾ ಸಿದ್ಧರಿರಬೇಕಾದ ಕೆಲಸ ಇದು. ಎಲ್ಲಾ ಕ್ಷಣದಲ್ಲೂ, ಎಲ್ಲಾ ದಿನವೂ ವೈದ್ಯರು ಸಮಾಜದ ಬಗ್ಗೆ ಮಾತ್ರ ಯೋಚನೆ ಮಾಡಬೇಕು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿರುವ ಆಯುಷ್ಮಾನ್ ಭಾರತ್ ಯೋಜನೆ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ನೀಡುತ್ತಿದೆ. ಉಚಿತವಾಗಿ ಆರೋಗ್ಯ ವಿಮೆ ನೀಡುತ್ತಿರುವ ಏಕೈಕ ದೇಶ ಭಾರತವಾಗಿದೆ. ಶೂನ್ಯ ಪ್ರಿಮಿಯಂನಲ್ಲಿ 5 ಲಕ್ಷ ರೂಪಾಯಿ ತನಕ ಶಾಶ್ವತ ಆರೋಗ್ಯ ವಿಮೆಯನ್ನು ಸರ್ಕಾರ ನೀಡುತ್ತಿದೆ. ದೇಶದ ಬಡವರ ಆರೋಗ್ಯದ ಮೇಲೆ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ ಎಂದು ಸುಧಾಕರ್ ಹೇಳಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.