
ಸರಕಾರಿ ನೌಕರರ ತುಟ್ಟಿಭತ್ತೆ ಶೇ. 4 ಹೆಚ್ಚಳ
Team Udayavani, May 31, 2023, 7:55 AM IST

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಆಡಳಿತದ ಆರಂಭಿಕ ಹಂತದಲ್ಲೇ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿಭತ್ತೆಯನ್ನು ಶೇ. 4ರಷ್ಟು ಹೆಚ್ಚಳ ಮಾಡಿದೆ.
2023ರ ಜ. 1ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ತೆಯನ್ನು ಮೂಲ ವೇತನದ ಶೇ. 31ರಿಂದ ಶೇ. 35ಕ್ಕೆ ಹೆಚ್ಚಿಸಿ ಮಂಗಳವಾರ ಆದೇಶ ಹೊರಡಿಸಿದೆ.
2018ರ ಪರಿಷ್ಕೃತ ವೇತನ ಶ್ರೇಣಿ ಗಳಲ್ಲಿ ವೇತನ ಪಡೆಯುತ್ತಿರುವ ಸರಕಾರಿ ನೌಕರರಿಗೆ 2023ರ ಜ. 1ರಿಂದಲೇ ಇದು ಅನ್ವಯವಾಗಲಿದೆ. ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಇದು ಅನ್ವಯಿಸಲಿದೆ.
ಸರಕಾರದ ಮತ್ತು ಜಿ.ಪಂ.ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರಿಗೆ ಹಾಗೂ ಸರಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ ಎಂದು ಸರಕಾರ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್ ಸಿಂಹ ವಾಗ್ದಾಳಿ

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ
MUST WATCH
ಹೊಸ ಸೇರ್ಪಡೆ

Indian Air Force: ಆತ್ಮನಿರ್ಭರ ಭಾರತಕ್ಕೆ “ತೇಜಸ್”

Sagara: ಕಳವು ಮಾಡಿದ್ದ ಬೈಕ್ ಸಮೇತ ಕಳ್ಳನ ಬಂಧನ

Odisha ದಲ್ಲೂ ಜಾತಿ ಗಣತಿ ವರದಿ ರಿಲೀಸ್?- ಸದ್ಯದಲ್ಲೇ ವರದಿ ಬಹಿರಂಗ ಎಂದ ಸರ್ಕಾರದ ಮೂಲಗಳು

Kulgam: ಭದ್ರತಾ ಪಡೆಗಳಿಂದ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಅಂತ್ಯ

USA: ಅಮೆರಿಕ ಸಂಸತ್ ಸ್ಪೀಕರ್‌ಗೇ ಗೇಟ್‌ಪಾಸ್- 1910ರ ಬಳಿಕ ಮೊದಲ ಬಾರಿಗೆ ಇಂಥ ಬೆಳವಣಿಗೆ