ಒಂದರಿಂದ ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ
Team Udayavani, Mar 28, 2021, 1:33 PM IST
Representative Image
ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದರಿಂದ ಒಂಬತ್ತನೆ ತರಗತಿವರೆಗೆ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಈ ಬಾರಿಯೂ ಒಂದರಿಂದ ಒಂಬತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೆ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಗೃಹ ಸಚಿವರು ಕಂದಾಯ ಸಚಿವರೊಂದಿಗೆ ಚರ್ಚಿಸಿ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದರು.
ಇದನ್ನೂ ಓದಿ:ದೆಹಲಿ v/s ಕೇಂದ್ರ : ದೆಹಲಿಯ ಚುನಾಯಿತ ಸರ್ಕಾರದ ಬಗ್ಗೆ ಕೇಂದ್ರದ ನಿಲುವೇನು..?
ರಾಜ್ಯದಲ್ಲಿ ಕೋವಿಡ್ ವೈರಸ್ ಸೋಂಕು ಆತಂಕಾರಿಯಾಗುವ ಮಟ್ಟದಲ್ಲಿ ಹರಡುತ್ತಿದೆ. ಇದು ರೂಪಾಂತರಿ ಸೋಂಕು ಎಂಬುದು ನಿಶ್ಚಿತ. ಸದ್ಯಕ್ಕೆ ಇದರ ಹರಡುವ ವೇಗ ಹೆಚ್ಚಿದೆ. ಸಾವಿನ ಪ್ರಮಾಣ ಕಡಿಮೆ ಇದೆ. ಮುಂದಿನ ಆರು ವಾರಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಅಪಾಯ ನಿಶ್ಚಿತ ಎಂದು ಅವರು ಹೇಳಿದರು.
ಪ್ರಸ್ತುತ ಇರುವ ನಮ್ಮ ಆಸ್ಪತ್ರೆಗಳ ಸಾಮರ್ಥ್ಯದಲ್ಲಿ ಪರಿಸ್ಥಿತಿ ನಿಬಾಯಿಸುವುದು ಕಷ್ಟವಾಗುತ್ತದೆ. ಅನ್ಯ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರು ಹಾಗೂ ಬೆಂಗಳೂರು ನಗರ ಪ್ರವೇಶಕ್ಕೆ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಬೇಕಾದು ಅನಿವಾರ್ಯವೆನಿಸಿದೆ.ತಾಂತ್ರಿಕ ಸಲಹಾ ಸಮಿತಿಯೂ ಇದೇ ರೀತಿಯ ಸಲಹೆ ಮಾಡಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್