ಮುಷ್ಕರ ಹಿನ್ನೆಲೆ : ಸಾರಿಗೆ ನೌಕರರ ವರ್ಗಾವಣೆಗೆ ಮುಂದಾದ ರಾಜ್ಯ ಸರ್ಕಾರ
Team Udayavani, Apr 10, 2021, 2:07 PM IST
ಶಿವಮೊಗ್ಗ : ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ವರ್ಗಾವಣೆಯ ಬಿಸಿ ಮುಟ್ಟಿಸಿದೆ.
ಮುಷ್ಕರ ಶುರುವಾಗಿ ಇಂದಿಗೆ ನಾಲ್ಕು ದಿನಗಳು ಕಳೆದಿವೆ. ಆದ್ರೂ ಸಾರಿಗೆ ನೌಕರರು ಪಟ್ಟುಬಿಡದ ಹಿನ್ನೆಲೆಯಲ್ಲಿ ಸರ್ಕಾರವು ಕಠಿಣ ಕ್ರಮ ಕೈಗೊಂಡಿದ್ದು, ಕೆಲ ಸಿಬ್ಬಂದಿಗೆ ವರ್ಗಾವಣೆಯ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ಶಿವಮೊಗ್ಗ ಕೆಎಸ್ ಆರ್ಟಿಸಿ ವಿಭಾಗದ 10 ಜನ ನೌಕರರನ್ನು ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ವಿಭಾಗದಿಂದ ರಾಮನಗರ ವಿಭಾಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಭದ್ರಾವತಿ ಡಿಪೋದ ಮೆಕ್ಯಾನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಕುಮಾರ್ ಹಾಗೂ ಭರಮಪ್ಪ ಎಂಬುವವರನ್ನು ವರ್ಗಾವಣೆ ಮಾಡಲಾಗಿದೆ.
ಉಳಿದಂತೆ ಶಿವಮೊಗ್ಗದ 8 ಜನ ಚಾಲಕ ಹಾಗೂ ನಿರ್ವಾಹಕರ ವರ್ಗಾವಣೆ ಮಾಡಲಾಗಿದೆ. ಪಟ್ಟುಬಿಡದೇ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ