Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ
Team Udayavani, May 31, 2023, 2:49 PM IST
ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ನಡೆದ ಮಂತ್ರಿ ಪರಿಷತ್ ಸಭೆ ನಡೆಸಲಾಯಿತು.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ ಸೇರಿ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಂಡು ನಾಳೆ(ಗುರುವಾರ) ಮಾರ್ಗಸೂಚಿ ಸಿದ್ದಪಡಿಸಿದ ನಂತರ ಶುಕ್ರವಾರ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ನಂತರ ಅಧಿಕೃತ ಘೋಷಣೆಗೆ ನಿರ್ಧಾರ ಮಾಡಲಾಗಿದೆ ಎಂದು ವರದಿಯಾಗಿದೆ.
ಸಚಿವರು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮುಖ್ಯ ಕಾರ್ಯದರ್ಶಿಯಿಂದ ಹೆಚ್ಚುವರಿ ಆರ್ಥಿಕ ಹೊರೆ ಬಗ್ಗೆ ಸಭೆಗೆ ವಿವರಣೆ ನೀಡಲಾಗಿದ್ದು, ಷರತ್ತು ಹಾಕುವ ಬಗ್ಗೆ ಸಚಿವರಿಂದ ಅಭಿಪ್ರಾಯ ವಿನಿಮಯ ಮಾಡಲಾಗಿದೆ.
ಐದು ಗ್ಯಾರಂಟಿಗಳನ್ನೂ ಜಾರಿ ಮಾಡುವುದು ಗ್ಯಾರಂಟಿ. ಸಂಪುಟ ಸಭೆಯಲ್ಲಿ ಎಲ್ಲದರ ಬಗ್ಗೆ ತೀರ್ಮಾನ ಮಾಡುತ್ತೇವೆ. ಆರ್ಥಿಕ ಹೊರೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ