ನಿಸಾರ್ ಅಹಮದ್ ನಿಧನದಿಂದ ಬಹುಮುಖ ಪ್ರತಿಭೆಯ ಸಾಹಿತ್ಯಪ್ರಭೆ ಮುಸುಕಾದಂತಾಗಿದೆ: ಕುಮಾರಸ್ವಾಮಿ
Team Udayavani, May 3, 2020, 5:35 PM IST
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ನಿತ್ಯೋತ್ಸವ ಕವಿ ಎಂದೇ ಪ್ರಸಿದ್ಧರಾದ ಪ್ರೊ. ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ ಇವು ನಿಸಾರ್ ಅವರ ಪ್ರಸಿದ್ಧ ಕವನ ಸಂಕಲನಗಳಾಗಿವೆ. ನಿಸಾರ್ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ. ಇವರ ನಿಧನದಿಂದ ಬಹುಮುಖ ಪ್ರತಿಭೆಯ ಸಾಹಿತ್ಯ ಪ್ರಭೆ ಮುಸುಕಾದಂತಾಗಿದೆ ಎಂದಿದ್ದಾರೆ.
‘ಜೋಗದ ಸಿರಿ ಬೆಳಕಿನಲ್ಲಿ’ ಹಾಡು ನನ್ನ ಕಿವಿಯಲ್ಲಿ ಈಗಲೂ ಅನುರಣಿಸುತ್ತಿದೆ. ನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿದ್ದ ನಿಸಾರ್ ಅಹಮದ್ ಅವರ ಸಾಹಿತ್ಯ ಸೇವೆ ಅನನ್ಯ. ನಾಡು ಕಂಡ ಹೆಮ್ಮೆಯ ಸಾಹಿತಿ. 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ನಿಸಾರ್ ಅವರ ಕುಟುಂಬದ ಸದಸ್ಯರು ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?