ಬೆಳಗಾವಿ ಪುಂಡಾಟದ ಹಿಂದೆ ದೊಡ್ಡ ಹುನ್ನಾರವೇ ಇರುವಂತಿದೆ: ಕುಮಾರಸ್ವಾಮಿ
Team Udayavani, Dec 18, 2021, 11:06 AM IST
ಬೆಂಗಳೂರು: ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯ. ವಿಧಾನಮಂಡಲ ಅಧಿವೇಶನಕ್ಕೆ ಹೋಗಲು ಪಾಸ್ ಅಂಟಿಸಲಾಗಿದ್ದ ವಾಹನಗಳನ್ನೇ ಗುರಿ ಮಾಡಲಾಗಿದೆ. ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ. ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬೆಳಗಾವಿಯಲ್ಲಿ ಪ್ರಕ್ಷುಬ್ಧತೆ ಸೃಷ್ಟಿಸಿ ಭಾಷಾ ವೈಷಮ್ಯ ಹೆಚ್ಚಿಸುವುದು ದುರುಳರ ಉದ್ದೇಶವಿದ್ದಂತಿದೆ. ಶಾಂತಿಯನ್ನು ಕದಡಿ ಜನರಲ್ಲಿ ಭಯಭೀತಿ ಉಂಟು ಮಾಡಲು ಪುಂಡರನ್ನು ಪ್ರಚೋದಿಸಿದವರನ್ನು ಹೊರಗೆಳೆದು ಶಿಕ್ಷಿಸಬೇಕು. ಈ ಪುಂಡಾಟದ ಹಿಂದೆ ದೊಡ್ಡ ಹುನ್ನಾರವೇ ಇರುವಂತಿದೆ ಎಂದಿದ್ದಾರೆ.
ಬೆಳಗಾವಿ ವಿವಾದ ಮುಗಿದ ಅಧ್ಯಾಯ. ಆದಾಗ್ಯೂ ಕೆಲ ವಿಚ್ಛಿಧ್ರಕಾರಿ ಶಕ್ತಿಗಳು ಆ ಭಾಗದಲ್ಲಿ ಅಶಾಂತಿ ಸೃಷ್ಟಿಸುತ್ತ ಕನ್ನಡಿಗರು-ಮರಾಠಿಗರ ನಡುವೆ ವೈಷಮ್ಯಕ್ಕೆ ಕಾರಣವಾಗುತ್ತಿದ್ದಾರೆ. ಅಂಥ ಶಕ್ತಿಗಳನ್ನು ಸರಕಾರ ಮೂಲೋತ್ಪಾಟನೆ ಮಾಡಬೇಕು. ಪುಂಡರನ್ನು ಕೂಡಲೇ ಬೇಟೆಯಾಡಿ ಇನ್ನೆಂದೂ ಅಂಥ ತಪ್ಪು ಮಾಡದಂತೆ ತಕ್ಕಶಾಸ್ತಿ ಮಾಡಬೇಕು ಎಂದು ಗುಡುಗಿದ್ದಾರೆ.
ಇದನ್ನೂ ಓದಿ:ಪುಂಡರನ್ನು ಮಟ್ಟಹಾಕಲು ಕಠಿಣ ಕ್ರಮ: ಸಿಎಂ ಬಸವರಾಜ ಬೊಮ್ಮಾಯಿ
ಸರಕಾರಿ ಕಾರುಗಳನ್ನು ಗುರಿ ಮಾಡಿರುವುದು ರಾಜ್ಯ ಸರಕಾರವನ್ನೇ ಗುರಿ ಮಾಡಿದಂತೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ದಾಳಿಗೆ ಸಮ. ಸರಕಾರ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಆ ದುರುಳರಿಗೆ ಕನ್ನಡಿಗರ ಶಕ್ತಿ ಏನೆಂಬುದನ್ನು ತೋರಿಸಬೇಕು. ಬೆಳಗಾವಿಯಲ್ಲಿ ಭಯೋತ್ಪಾದನೆ ಸೃಷ್ಟಿಸುತ್ತಿರುವ ಈ ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರುವುದಿಲ್ಲ. ತಕ್ಕಪಾಠ ಕಲಿಸುವ ಕಾಲ ಸನ್ನಿಹಿತವಾಗಿದೆ ಎಂದು ಎಚ್ ಡಿಕೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ